ಭಾರತ-ರಷ್ಯಾ ರಾಜತಾಂತ್ರಿಕ ಸಂಬಂಧಗಳು ಆರಂಭದಿಂದಲೂ ಉತ್ತವಾಗಿದೆ. ಸ್ವಾತಂತ್ರ್ಯದ ನಂತರ ರಷ್ಯಾ ಭಾರತದ ಅತ್ಯಂತ ನಿಕಟ ಮಿತ್ರ ರಾಷ್ಟ್ರವಾಗಿದೆ. ಈ ಸೌಹಾರ್ದ ಸಂಬಂಧವನ್ನು ಮುಂದಕ್ಕೆ ಕೊಂಡೊಯ್ಯಲು ಪ್ರಧಾನಿ ನರೇಂದ್ರ ಮೋದಿ ಒಲವು ತೋರಿದ್ದಾರೆ. 

ನವದೆಹಲಿ (ಮಾ.20): ರಷ್ಯಾ ಅಧ್ಯಕ್ಷರಾಗಿ ಮತ್ತೊಮ್ಮೆ ಆರು ವರ್ಷದ ಅವಧಿಗೆ ಆಯ್ಕೆಯಾಗಿರುವ ವ್ಲಾಡಿಮಿರ್‌ ಪುಟಿನ್‌ ಅವರೊಂದಿಗೆ ಪ್ರಧಾನಿ ನರೇಂದ್ರ ಮೋದಿ ಬುಧವಾರ ದೂರವಾಣಿ ಮಾತುಕತೆ ನಡೆಸಿದ್ದಾರೆ. ಈ ವೇಳೆ ಭಾರತ-ರಷ್ಯಾ ವಿಶೇಷ ಕಾರ್ಯತಂತ್ರದ ಪಾಲುದಾರಿಕೆಯನ್ನು ಇನ್ನಷ್ಟು ಬಲಪಡಿಸಲು ನಾಯಕರು ಒಪ್ಪಿಕೊಂಡಿದ್ದಾರೆ. ಅದರೊಂದಿಗೆ ಸ್ವಿಪಕ್ಷೀಯ ಸಹಕಾರದಲ್ಲಿ ಪ್ರಗತಿಯನ್ನೂ ಭವಿಷ್ಯದ ದಿನಗಳಲ್ಲಿ ಪರಿಶೀಲನೆ ಮಾಡುವುದಾಗಿ ಒಪ್ಪಿಕೊಂಡಿದ್ದು, ಪ್ರಾದೇಶಿಕ ಮತ್ತು ಜಾಗತಿಕ ವಿಷಯಗಳ ಕುರಿತು ಅಭಿಪ್ರಾಯಗಳನ್ನು ವಿನಿಮಯ ಕೂಡ ಮಾಡಿಕೊಳ್ಳಲಿದ್ದಾರೆ. ರಷ್ಯಾ-ಉಕ್ರೇನ್ ಸಂಘರ್ಷವನ್ನು ಕೊನೆ ಮಾಡುವ ನಿಟ್ಟಿನಲ್ಲಿ ಮಾತುಕತೆ ಮತ್ತು ರಾಜತಾಂತ್ರಿಕತೆಯ ಮುಂದಿರುವ ದಾರಿ ಎಂದು ಪ್ರಧಾನಿ ಮೋದಿ ಈ ವೇಳೆ ತಿಳಿಸಿದ್ದಾರೆ. ರಷ್ಯಾದ ಒಕ್ಕೂಟದ ಅಧ್ಯಕ್ಷರಾಗಿ ಪುನರಾಯ್ಕೆಗೊಂಡಿದ್ದಕ್ಕಾಗಿ ಪ್ರಧಾನಿ, ಪುಟಿನ್‌ ಅವರನ್ನು ಅಭಿನಂದಿಸಿದರು ಮತ್ತು ರಷ್ಯಾದ ಸ್ನೇಹಪರ ಜನರ ಶಾಂತಿ, ಪ್ರಗತಿ ಮತ್ತು ಸಮೃದ್ಧಿಗಾಗಿ ತಮ್ಮ ಶುಭಾಶಯಗಳನ್ನು ತಿಳಿಸಿದ್ದಾರೆ.

Viral Video: ರಷ್ಯಾ ಅಧ್ಯಕ್ಷ ವ್ಲಾಡಿಮಿರ್‌ ಪುಟಿನ್‌ ಪಾಲಕರ ಸಮಾಧಿಯ ಮೇಲೆ ಮೂತ್ರ ಹೊಯ್ದ ಅನಾಮಿಕ ವ್ಯಕ್ತಿ!

ಮುಂದಿನ ವರ್ಷಗಳಲ್ಲಿ ಉಭಯ ದೇಶಗಳ ನಡುವಿನ ವಿಶೇಷ ಕಾರ್ಯತಂತ್ರದ ಪಾಲುದಾರಿಕೆಯನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ಸಂಘಟಿತ ಪ್ರಯತ್ನಗಳನ್ನು ಮಾಡಲು ಉಭಯ ನಾಯಕರು ಒಪ್ಪಿಕೊಂಡಿದ್ದಾರೆ. ರಷ್ಯಾ-ಉಕ್ರೇನ್ ಸಂಘರ್ಷದ ಕುರಿತು ಚರ್ಚಿಸುವಾಗ, ಮಾತುಕತೆ ಮತ್ತು ರಾಜತಾಂತ್ರಿಕತೆಯ ಪರವಾಗಿ ಭಾರತದ ಸ್ಥಿರವಾದ ನಿಲುವನ್ನು ಪ್ರಧಾನಿ ಪುನರುಚ್ಚರಿಸಿದರು. ಅದರೊಂದಿಗೆ ಮುಂದಿನ ದಿನಗಳಲ್ಲಿ ಸಂಪರ್ಕದಲ್ಲಿರುವುದಾಗಿ ಒಪ್ಪಿಕೊಂಡಿದ್ದಾರೆ.

ಪುಟಿನ್‌ ಸಂಪರ್ಕಿಸಿ ಉಕ್ರೇನ್ ಮೇಲೆ ರಷ್ಯಾ ಸಂಭಾವ್ಯ ನ್ಯೂಕ್ಲಿಯರ್ ದಾಳಿ ತಡೆದಿದ್ದ ಮೋದಿ, CNN ವರದಿ!

Scroll to load tweet…