25 ಪ್ರಯಾಣಿಕರ ಹೊತ್ತು ಸಾಗುತ್ತಿದ್ದ ಖಾಸಗಿ ಬಸ್ ಬೆಂಕಿಗಾಹುತಿ, ಹೆದ್ದಾರಿಯಲ್ಲೇ ದುರ್ಘಟನೆ!
ಹೆದ್ದಾರಿಯಲ್ಲಿ ಪ್ರಯಾಣಿಕರ ಹೊತ್ತು ಸಾಗುತ್ತಿದ್ದ ಖಾಸಗಿ ಬಸ್ ಬೆಂಕಿಗೆ ಆಹುತಿಯಾಗಿದೆ. ಬಸ್ ಸಂಪೂರ್ಣ ಸುಟ್ಟು ಕರಕಲಾಗಿದೆ. ಭೀಕರ ಘಟನೆ ವಿಡಿಯೋ ವೈರಲ್ ಆಗಿದೆ.
ಆಂಧ್ರ ಪ್ರದೇಶ(ಜೂ.22): ರಾಷ್ಟ್ರೀಯ ಹೆದ್ದಾರಿಯಲ್ಲಿ ಸಾಗುತ್ತಿದ್ದ ಖಾಸಗಿ ಬಸ್‌ಗೆ ಏಕಾಏಕಿ ಬೆಂಕಿ ಹೊತ್ತಿಕೊಂಡಿದೆ. 25 ಪ್ರಯಾಣಿಕರು ಸಾಗುತ್ತಿದ್ದ ಬಸ್‌ನಲ್ಲಿ ಬೆಂಕಿ ಕಾಣಿಸಿಕೊಂಡ ಬೆನ್ನಲ್ಲೇ ಸಂಪೂರ್ಣ ಆವರಿಸಿದೆ. ಬಸ್ ಹೊತ್ತಿ ಉರಿಯಲು ಆರಂಭಿಸಿದೆ. ಕ್ಷಣಮಾತ್ರದಲ್ಲಿ ಬೆಂಕಿ ಜ್ವಾಲೆ ಸಂಪೂರ್ಣ ಬಸ್ ಆವರಿಸಿಕೊಂಡಿದೆ. ಅದೃಷ್ಟವಶಾತ್ 25 ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ. ಬೆಂಕಿ ಕಾಣಿಸಿಕೊಂಡ ಬೆನ್ನಲ್ಲೇ ಬಸ್ ನಿಲ್ಲಿಸಿ, ಪ್ರಯಾಣಿಕರು ಇಳಿದಿದ್ದಾರೆ. ಹೀಗಾಗಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಹೈದರಾಬಾದ್‌ನಿಂದ ಪಾಂಡಿಚೇರಿ ಸಾಗುತ್ತಿದ್ದ ವೇಳೆ ಈ ಘಟನೆ ನಡೆದಿದೆ.
ಆಂಧ್ರ ಪ್ರದೇಶದ ಪ್ರಕಾಶಂ ಜಿಲ್ಲೆಯ ಬಿತ್ರುಗಂಟಾ ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿ 16ರಲ್ಲಿ ಈ ಘಟನೆ ನಡೆದಿದೆ. ತಾಂತ್ರಿಕ ದೋಷದಿಂದ ಬೆಂಕಿ ಕಾಣಿಸಿಕೊಂಡಿರುವ ಸಾಧ್ಯತೆ ಇದೆ ಎಂದು ಪೊಲೀಸರ ಪ್ರಾಥಮಿಕ ತನಿಖೆಯಲ್ಲಿ ಬಹಿರಂಗವಾಗಿದೆ. ಘಟನೆ ಕುರಿತು ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ನಿರ್ದಿಷ್ಟ ಕಾರಣ ಪತ್ತೆ ಹಚ್ಚಲು ಮುಂದಾಗಿದ್ದಾರೆ.
ಬೆಂಗಳೂರು -ಮೈಸೂರು ಎಕ್ಸ್‌ಪ್ರೆಸ್ ವೇನಲ್ಲಿ ಹೊತ್ತಿ ಭಸ್ಮವಾದ ಮದುವೆ ದಿಬ್ಬಣದ ಖಾಸಗಿ ಬಸ್!
ಹೈದರಾಬಾದ್‌ನಿಂದ ಪ್ರಯಾಣಿಕರನ್ನು ಹತ್ತಿಸಿಕೊಂಡು ನಗರದಿಂದ ಹೊರಟ ಬಸ್ ಹೈದರಾಬಾದ್-ಪಾಂಡೀಚೇರಿ ಹೆದ್ದಾರಿ 16ರಲ್ಲಿ ವೇಗವಾಗಿ ಸಾಗಿತ್ತು. ಬಸ್ ಸಾಗುತ್ತಿದ್ದ ವೇಳೆ ಹಿಂಭಾಗದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಇದನ್ನು ಗಮನಿಸಿದ ಬಸ್ ಪ್ರಯಾಣಿಕರು ಚಾಲಕನಿಗೆ ಮಾಹಿತಿ ನೀಡಿದ್ದಾರೆ. ತಕ್ಷಣವೇ ಬಸ್ ನಿಲ್ಲಿಸಲಾಗಿದೆ. ಪ್ರಯಾಣಿಕರನ್ನು ಸುರಕ್ಷಿತವಾಗಿ ಕೆಳಕ್ಕೆ ಇಳಿಸಲಾಗಿದೆ. ಅಷ್ಟರಲ್ಲೇ ಬೆಂಕಿ ಹೊತ್ತಿಕೊಂಡಿದೆ.
ಒಂದೇ ಸಮನೆ ಬೆಂಕಿ ಜ್ವಾಲೆ ಹೆಚ್ಚಾಗಿದೆ. ಇತ್ತ ಅಗ್ನಿಶಾಮಕ ದಳಕ್ಕೆ ಕರೆ ಮಾಡಿ ಮಾಹಿತಿ ನೀಡಲಾಗಿದೆ. ಪೊಲೀಸ್ ಹಾಗೂ ಅಗ್ನಿಶಾಮಕದಳ ಸಿಬ್ಬಂದಿ ಸ್ಥಳಕ್ಕೆ ಆಗಮಿಸುವಷ್ಟರಲ್ಲಿ ಬಸ್ ಬಹುತೇಕ ಹೊತ್ತಿ ಉರಿದಿದೆ. ಬಸ್ ಜೊತೆ ಪ್ರಯಾಣಿಕರ ಲಗೇಜ್ ಬ್ಯಾಗ್ ಕೂಡ ಹೊತ್ತಿ ಉರಿದಿದೆ.
ಹುಬ್ಬಳ್ಳಿಯಲ್ಲಿ ಹೊತ್ತಿ ಉರಿದ ಖಾಸಗಿ ಬಸ್, ತಪ್ಪಿದ ಭಾರಿ ದುರಂತ!
ಶಾಲಾ ಬಸ್‌ಗೆ ಬೆಂಕಿ: 40 ಮಕ್ಕಳು ಪಾರು
ಖಾಸಗಿ ಶಾಲೆಗೆ ವಿದ್ಯಾರ್ಥಿಗಳನ್ನು ಕರೆತರುತ್ತಿದ್ದ ಬಸ್‌ನಲ್ಲಿ ಹಠಾತ್ತನೆ ಬೆಂಕಿ ಕಾಣಿಸಿಕೊಂಡು ವಾಹನದಲ್ಲಿದ್ದ 40 ವಿದ್ಯಾರ್ಥಿಗಳು ಮತ್ತು ಮೂವರು ಶಿಕ್ಷಕರು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಕರ್ನಾಟಕಗ ಕೊಟ್ಟೂರುತಾಲೂಕಿನ ಕೆ. ಅಯ್ಯನಹಳ್ಳಿ ಗ್ರಾಮದ ಹೊರವಲಯದಲ್ಲಿ ನಡೆದಿದೆ. ಕೊಟ್ಟೂರು ಪಟ್ಟಣದ ತರಳಬಾಳು ಶಾಲೆಗೆ ಬಸ್‌ನಲ್ಲಿ ಎಂದಿನಂತೆ ಮಕ್ಕಳನ್ನು ತಾಲೂಕಿನ ವಿವಿಧ ಹಳ್ಳಿಗಳಿಂದ ಕರೆದುಕೊಂಡು ಬರುತ್ತಿದ್ದಾಗ ಈ ಅವಘಡ ಸಂಭವಿಸಿದೆ. ಬಸ್‌ನ ಎಂಜಿನ್‌ನಲ್ಲಿ ಸುಟ್ಟವಾಸನೆ ಬರುತ್ತಿರುವುದನ್ನು ಅರಿತ ಚಾಲಕ ವಾಹನವನ್ನು ಕೂಡಲೇ ರಸ್ತೆಯ ಬದಿ ನಿಲ್ಲಿಸಿ ಮಕ್ಕಳು, ಶಿಕ್ಷಕರನ್ನು ವಾಹನದಿಂದ ಇಳಿಸಿದ್ದಾರೆ. ಇದಾದ ಕೆಲಹೊತ್ತಿನಲ್ಲಿ ಇಡೀ ಬಸ್‌ಗೆ ಬೆಂಕಿ ಆವರಿಸಿದೆ. ವಿಷಯ ತಿಳಿಯುತ್ತಿದ್ದಂತೆ ಅಗ್ನಿಶಾಮಕ ದಳ ಸಿಬ್ಬಂದಿ ಘಟನಾ ಸ್ಥಳಕ್ಕೆ ಆಗಮಿಸಿ ಬೆಂಕಿಯನ್ನು ನಂದಿಸಿದ್ದಾರೆ. ಬಸ್‌ನ ಎಂಜಿನ್‌ನಲ್ಲಿ ಶಾರ್ಚ್ ಸಕ್ರ್ಯೂಟ್‌ನಿಂದ ಬೆಂಕಿ ಅವಘಡ ಸಂಭವಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.