* ಹಿಜಾಬ್ ವಿವಾದ ನ್ಯಾಯಾಲಯದಲ್ಲಿದೆ* ಮಕ್ಕಳ ಪೋಷಕರಿಗೂ ಡ್ರೆಸ್ ಕೋಡ್ ಎಂದ ಖಾಸಗಿ ಶಾಲೆ* ಮಮನಸಿಗೆ ಬಂದ ಡ್ರೆಸ್ ಧರಿಸಿ ಮಕ್ಕಳ ಕರೆದುಕೊಂಡು ಹೋಗಬೇಡಿ
ಬೆಂಗಳೂರು(ಫೆ. 25) 'ಒಂದು ಕಡೆ ವಿದ್ಯಾರ್ಥಿಗಳ (Students) ಸಮವಸ್ತ್ರ ವಿಚಾರ ನ್ಯಾಯಾಲಯದ (Karnataka High Court) ಕಟಕಟೆಯಲ್ಲಿ ಇರುವಾಗಲೇ ಮತ್ತೊಂದು ವಿಚಾರ ದೊಡ್ಡ ಚರ್ಚೆಗೆ ವೇದಿಕೆ ಮಾಡಿದೆ. ಶಾಲೆಯಲ್ಲಿ ಹಿಜಾಬ್ (Hijab) ಧರಿಸಬಹುದೇ, ಧರಿಸಬಾರದೇ ಎಂಬ ಬಗ್ಗೆ ವಾದ ವಿವಾದ ನಡೆಯುತ್ತಿದೆ. ಈ ನಡುವೆ ರಾಜ್ಯದ ಕೆಲವು ಖಾಸಗಿ ಅನುದಾನರಹಿತ ಶಾಲೆಗಳು ಪೋಷಕರಿಗೆ ಡ್ರೆಸ್ ಕೋಡ್ ಸಿದ್ಧ ಮಾಡಿವೆ.
ಹಲವಾರು ಪಾಲಕರು ತಮ್ಮ ಮಕ್ಕಳನ್ನು ಶಾಲೆಯಲ್ಲಿ ಬಿಡುವಾಗ ಅಥವಾ ಶಾಲೆಯಿಂದ ಕರೆದುಕೊಂಡು ಹೋಗುವಾಗ ಅನೌಪಚಾರಿಕ ಉಡುಪುಗಳಲ್ಲಿ ಬರುವುದನ್ನು ಗಮನಿಸಿರುವ ಖಾಸಗಿ ಶಾಲೆಗಳು ಈ ತೀರ್ಮಾನಕ್ಕೆ ಬಂದಿದೆ. ಕೆಲವು ಖಾಸಗಿ ಅನುದಾನರಹಿತ ಶಾಲೆಗಳು ಪೋಷಕರಲ್ಲಿಯೇ ಶಿಸ್ತು ತರಲು ಹೊರಟಿವೆ.
Summer Holidays ಬದಲಾಯ್ತು ಶಾಲೆ ಬೇಸಿಗೆ ರಜೆ: ಕೆಲ ಮಹತ್ವದ ಬದಲಾವಣೆ ತಂದ ಶಿಕ್ಷಣ ಇಲಾಖೆ
ಖಾಸಗಿ ಶಾಲೆಗಳು ಈ ರೀತಿಯ ಸುತ್ತೋಲೆ ಹೊರಡಿಸಿವೆ ಎನ್ನುವುದು ಗೊತ್ತಾಗಿದೆ. ಮಕ್ಕಳನ್ನು ಶಾಲೆಯಲ್ಲಿ ಬಿಡುವಾಗ ಅಥವಾ ಶಾಲೆಯಿಂದ ಕರೆದುಕೊಂಡು ಹೋಗುವಾಗ ಪೋಷಕರು ಅಥವಾ ಪಾಲಕರು ಬರ್ಮುಡಾ, ಶಾರ್ಟ್ಸ್, ಸ್ಪೋರ್ಟ್ಸ್ ವೇರ್, ಹೌಸ್ ವೇರ್, ಸ್ಲೀವ್‌ಲೆಸ್ ಮತ್ತು ಟ್ರ್ಯಾಕ್ ಪ್ಯಾಂಟ್ ಇತ್ಯಾದಿಗಳನ್ನು ಧರಿಸುವುದನ್ನು ನಿರ್ಬಂಧಿಸಿ ಸುತ್ತೋಲೆ ಹೊರಡಿಸಲಾಗಿದೆ.
ಶಾಲೆಗಳು ಕಳುಹಿಸಿರುವ ಸುತ್ತೋಲೆಯಲ್ಲಿ ಲಭ್ಯವಿರುವ ವಿವರಗಳ ಪ್ರಕಾರ, ಮಕ್ಕಳನ್ನು ಶಾಲೆಯಲ್ಲಿ ಬಿಡುವಾಗ ಅಥವಾ ಶಾಲೆಯಿಂದ ಕರೆದುಕೊಂಡು ಹೋಗುವಾಗ ಪೋಷಕರು ಅಥವಾ ಪಾಲಕರು ಬರ್ಮುಡಾ, ಶಾರ್ಟ್ಸ್, ಸ್ಪೋರ್ಟ್ಸ್ ವೇರ್, ಹೌಸ್ ವೇರ್, ಸ್ಲೀವ್‌ಲೆಸ್ ಮತ್ತು ಟ್ರ್ಯಾಕ್ ಪ್ಯಾಂಟ್ ಇತ್ಯಾದಿಗಳನ್ನು ಧರಿಸುವುದನ್ನು ನಿರ್ಬಂಧಿಸಲಾಗಿದೆ. ಈ ಬಗ್ಗೆ ಕೆಲವು ಶಾಲೆಗಳು ಸುತ್ತೋಲೆಯನ್ನು ಹೊರಡಿಸಿದೆ.
ಪರೀಕ್ಷೆ ತಪ್ಪಿಸಿಕೊಂಡರೆ ಹೊಣೆ ಅಲ್ಲ: ಹಿಜಾಬ್(Hijab) ಕಾರಣದಿಂದ ವಿದ್ಯಾರ್ಥಿಗಳು(Students) ಪರೀಕ್ಷೆಗಳಿಗೆ ಗೈರು ಹಾಜರಾದರೆ ಅವರಿಗೆ ಬೇರೆ ಆಯ್ಕೆಗಳಿರುವುದಿಲ್ಲ. ಹಿಜಾಬ್ ತೆಗೆದು ಪರೀಕ್ಷಾ ಕೇಂದ್ರಕ್ಕೆ ಬರಬೇಕು. ಯಾರೂ ಕೂಡ ಹಟ ಮಾಡಿ ಶೈಕ್ಷಣಿಕ ಜೀವನ ಹಾಳು ಮಾಡಿಕೊಳ್ಳಬಾರದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್(BC Nagesh) ತಿಳಿಸಿದ್ದರು.
ಮಂಗಳವಾರ ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಜಾಬ್ ವಿಚಾರದಲ್ಲಿ ಹೈಕೋರ್ಟ್(High Court) ನೀಡಿರುವ ಆದೇಶವನ್ನು ಕೆಲವರು ವಿರೋಧಿಸಿದ್ದಾರೆ. ಅಂತಹವರ ಪರವಾಗಿ ಕಾಂಗ್ರೆಸ್‌ನವರು ಮಾತನಾಡುವುದು ಸರಿಯಲ್ಲ. ವಿದ್ಯಾರ್ಥಿಗಳು ಹೈಕೋರ್ಟ್ ಆದೇಶ ಪಾಲಿಸಿ, ಶಾಲೆ, ಕಾಲೇಜು, ಪರೀಕ್ಷಾ ಕೇಂದ್ರಗಳಿಗೆ ಹಿಜಾಬ್ ತೆಗೆದು ಬರಬೇಕು. ಹಿಜಾಬ್‌ಗಾಗಿ ಹಟ ಹಿಡಿದು ಕೂತರೆ ಇಡೀ ವರ್ಷದ ಶೈಕ್ಷಣಿಕ ಜೀವನ ವ್ಯರ್ಥವಾಗುತ್ತದೆ. ಇದಕ್ಕೆ ಅವಕಾಶ ನೀಡಬಾರದು ಎಂದು ಮನವಿ ಮಾಡಿದ್ದರು.
ಕೇಸು ಹಿಂಪಡೆದಿದ್ದರಿಂದ ಹತ್ಯೆ: ಹಿಂದೂ ಕಾರ್ಯಕರ್ತರನ್ನು ಕೊಲೆ ಮಾಡಿದವರ ಮೇಲಿನ ಪ್ರಕರಣಗಳನ್ನು ಈ ಹಿಂದಿನ ಸರ್ಕಾರಗಳು ವಾಪಸ್ ಪಡೆದಿದ್ದೇ ಮತ್ತೆ ಮತ್ತೆ ಹತ್ಯೆ ಪ್ರಕರಣಗಳು ಮರುಕಳಿಸಲು ಕಾರಣವಾಗಿದೆ ಎಂದು ಇದೇ ವೇಳೆ ಸಚಿವ ನಾಗೇಶ್ ಕಾಂಗ್ರೆಸ್ ವಿರುದ್ಧ ಕಿಡಿ ಕಾರಿದ್ದರು.
ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿದ್ದ ಐದು ವರ್ಷದ ಅಧಿಕಾರಾವಧಿ ನೋಡಿದರೆ ಮಂಗಳೂರು, ಕೂರ್ಗ್ ಸೇರಿದಂತೆ ರಾಜ್ಯದ ವಿವಿಧೆಡೆ ಹಿಂದೂಪರ ಸಂಘಟನೆಗಳ ಕಾರ್ಯಕರ್ತರ ಹತ್ಯೆ ಎಸಗಿದವರ ಮೇಲೆನ ಪ್ರಕರಣಗಳನ್ನು ವಾಪಸ್ ಪಡೆದಿದ್ದಾರೆ. ಇದರಿಂದ ಅವರಿಗೆ ಭಯವಿಲ್ಲದಂತ ಪರಿಸ್ಥಿತಿ ನಿರ್ಮಾಣ ಆಗಿದೆ ಎಂದು ನಾಗೇಶ್ ದೂರಿದ್ದರು.
