ದೇಶದೆಲ್ಲೆಡೆ ಆಮ್ಲಜನಕ ಸಿಲಿಂಡರ್‌ಗಳ ತೀವ್ರ ಕೊರತೆ| 2000 ರು.ನ ಆಮ್ಲಜನಕ ಸಿಲಿಂಡರ್‌ 30000 ರು.ಗೆ ಕಾಳಸಂತೆಯಲ್ಲಿ ಮಾರಾಟ!

ನವದೆಹಲಿ(ಮೇ.05): ದೇಶದೆಲ್ಲೆಡೆ ಆಮ್ಲಜನಕ ಸಿಲಿಂಡರ್‌ಗಳ ತೀವ್ರ ಕೊರತೆ ಎದುರಾಗಿರುವಾಗಲೇ, ಇದನ್ನೇ ಬಂಡವಾಳ ಮಾಡಿಕೊಂಡ ಕೆಲವು ಸ್ಥಳೀಯ ಮಾರಾಟಗಾರರು ಕಾಳಸಂತೆಯಲ್ಲಿ ಆಮ್ಲಜನಕ ಸಿಲಿಂಡರ್‌ಗಳನ್ನು ಮಾರಾಟ ಮಾಡುತ್ತಿದ್ದಾರೆ.

ಸಾಮಾನ್ಯವಾಗಿ 1500 ರು.ನಿಂದ 2000 ರು.ಗೆ ಮಾರಾಟವಾಗುತ್ತಿದ್ದ ಒಂದು ಸಿಲಿಂಡರ್‌ಗೆ 30,000 ರು.ನಿಂದ 35,000 ರು.ವರೆಗೂ ಬೇಡಿಕೆ ಇಡಲಾಗುತ್ತಿದೆ. ಆಮ್ಲಜನಕ ಸಿಲಿಂಡರ್‌ಗಳ ಲಭ್ಯತೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಹಲವರು ಕ್ರಮಗಳನ್ನು ಕೈಗೊಂಡಿರುವ ಹೊರತಾಗಿಯೂ ಅಗತ್ಯ ಬೇಡಿಕೆಯನ್ನು ಪೂರೈಸಲು ಸಾಧ್ಯವಾಗುತ್ತಿಲ್ಲ.

ಅಕ್ರಮ ದಾಸ್ತಾನುದಾರರು ಹಾಗೂ ಸ್ಥಳೀಯ ಮಾರಾಟಗಾರರು ಕಾಳಸಂತೆಯಲ್ಲಿ ಸಿಲಿಂಡರ್‌ ಅನ್ನು ಮಾರಾಟ ಮಾಡುತ್ತಿದ್ದಾರೆ ಎಂದು ವರದಿಗಳು ತಿಳಿಸಿವೆ.

ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್‌ ನ್ಯೂಸ್‌ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona