ಚುನಾವಣಾ ರಾಜಕೀಯಕ್ಕೆ ಪ್ರಿಯಾಂಕಾ ಎಂಟ್ರಿ; ವಯನಾಡಿನಿಂದ ನಾಮಪತ್ರ ಸಲ್ಲಿಕೆ

ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಇಂದು ವಯನಾಡು ಲೋಕಸಭಾ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿದರು. ಈ ಹಿಂದೆ ರಾಹುಲ್ ಗಾಂಧಿ ಎರಡು ಬಾರಿ ವಯನಾಡು ಕ್ಷೇತ್ರದಿಂದ ಸ್ಪರ್ಧಿಸಿ ಗೆದ್ದಿದ್ದರು.

Priyanka Gandhi submit her nomination for Wayanad bypolls mrq

ವಯನಾಡ: ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ನಾಮಪತ್ರ ಸಲ್ಲಿಕೆಗೂ ಮುನ್ನ ವಯನಾಡು ಕ್ಷೇತ್ರದಲ್ಲಿ ಅದ್ಧೂರಿ ರೋಡ್ ಶೋ ಮಾಡಿದರು. ರಾಹುಲ್ ಗಾಂಧಿ ರಾಜೀನಾಮೆಯಿಂದ ತೆರವಾಗಿರುವ ವಯನಾಡ ಲೋಕಸಭಾ ಕ್ಷೇತ್ರಕ್ಕೆ ಉಪ ಚುನಾವಣೆ ಘೋಷಣೆಯಾಗಿದೆ. 2024ರ ಲೋಕಸಭಾ ಚುನಾವಣೆಯಲ್ಲಿ ರಾಹುಲ್ ಗಾಂಧಿ ಅವರು ರಾಯ್‌ಬರೇಲಿ ಮತ್ತು ವಯನಾಡಿನಿಂದ ಸ್ಪರ್ಧಿಸಿ ಎರಡೂ ಕ್ಷೇತ್ರಗಳಲ್ಲಿ ಗೆಲುವು ದಾಖಲಿಸಿದ್ದರು. ನಂತರ ವಯನಾಡಿನ ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಇದೀಗ ಈ ಕ್ಷೇತ್ರದಿಂದ ಸೋದರಿ ಪ್ರಿಯಾಂಕಾ ಗಾಂಧಿ ವಾದ್ರಾ ಸ್ಪರ್ಧೆ ಮಾಡುತ್ತಿದ್ದಾರೆ. ಇದು ಪ್ರಿಯಾಂಕಾ ಅವರ ರಾಜಕೀಯ ಜೀವನದ ಮೊದಲ ಚುನಾವಣೆಯಾಗಿದೆ. 

ಇಂದು ಬೆಳಗ್ಗೆ ವಯನಾಡಿನ ಕಲ್ಲಾಪೆಟ್ಟಾ ನ್ಯೂ ಬಸ್ ಸ್ಟಾಂಡ್‌ನಿಂದ ಬೃಹತ್ ಮೆರವಣಿಗೆ ಮೂಲಕ ನಾಮಪತ್ರ ಸಲ್ಲಿಕೆಗೆ ಪ್ರಿಯಾಂಕಾ ಗಾಂಧಿ ತೆರಳಿದರು. ಈ ವೇಳೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ, ಪತಿ ರಾಬರ್ಟ್ ವಾದ್ರಾ ಸೇರಿದಂತೆ ಹಲವು ಗಣ್ಯರು ಪ್ರಿಯಾಂಕಾ ಗಾಂಧಿಯವರಿಗೆ ಸಾಥ್ ನೀಡಿದರು. ಅದ್ಧೂರಿ ಮೆರವಣಿಗೆ ಬಳಿಕ ಬೃಹತ್ ಸಮಾವೇಶದಲ್ಲಿ ಕಾಂಗ್ರೆಸ್ ನಾಯಕರು ಭಾಗಿಯಾದರು. ಸಮಾವೇಶದಲ್ಲಿ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ, ಸಿಎಂ ಸಿದ್ದರಾಮಯ್ಯ ಸೇರಿದಂತೆ ಹಲವರು ಉಪಸ್ಥಿತರಿದ್ದರು. ನಂತರ ವಯನಾಡು ಜಿಲ್ಲಾಧಿಕಾರಿ ಕಚೇರಿಗೆ ಪತಿ ಮತ್ತು ಪುತ್ರನ ಸಮ್ಮುಖದಲ್ಲಿ ನಾಮಪತ್ರ ಸಲ್ಲಿಕೆ ಮಾಡಿದರು

ರಾಹುಲ್ ಗಾಂಧಿ ರಾಜೀನಾಮೆ ಬಳಿಕ ಪ್ರಿಯಾಂಕಾ ಗಾಂಧಿ ಅವರೇ ಸ್ಪರ್ಧೆ ಮಾಡಲಿದ್ದಾರೆ ಎಂದು ಕಾಂಗ್ರೆಸ್ ಘೋಷಿಸಿತ್ತು. ಉಪ ಚುನಾವಣೆ ದಿನಾಂಕ ಘೋಷಿಸಿದ ನಂತರ ಪ್ರಿಯಾಂಕಾ ಗಾಂಧಿಯವರ ಹೆಸರನ್ನು ಅಧಿಕೃತವಾಗಿ ಪ್ರಕಟಿಸಲಾಗಿತ್ತು. ಈ ಹಿನ್ನೆಲೆ ಇಂದು ಅಪಾರ ಕಾರ್ಯಕರ್ತರ ಜೊತೆಯಲ್ಲಿ ನಾಮಪತ್ರ ಸಲ್ಲಿಸಲು ಪ್ರಿಯಾಂಕಾ ಗಾಂಧಿ ಆಗಮಿಸಿದ್ದಾರೆ. ಕಾರ್ಯಕರ್ತರು "ವಯನಾಡಿನಲ್ಲಿ ಪ್ರಿಯಾಂಕಾ" ಎಂಬ ಬರಹವುಳ್ಳ ಫಲಕ ಹಿಡಿದು ದಾರಿಯುದ್ದಕ್ಕೂ ಸಾಗಿದ್ದಾರೆ. 

ವಯನಾಡು ಅಖಾಡಕ್ಕೆ ನೆಹರು ಕುಟುಂಬದ ಮತ್ತೊಂದು ಕುಡಿ: ಕೈ ಪಕ್ಷದಲ್ಲಿ ಆರಂಭವಾಗುತ್ತಾ ಪ್ರಿಯಾಂಕಾ ಪರ್ವ.?

ಪ್ರಿಯಾಂಕಾ ಗಾಂಧಿ ವಿರುದ್ಧ ವಯನಾಡು ಕ್ಷೇತ್ರದಲ್ಲಿ ಬಿಜೆಪಿಯಿಂದ ನವ್ಯಾ ಹರಿದಾಸ್ ಕಣಕ್ಕಿಳಿಯಲಿದ್ದಾರೆ. 2007ರಲ್ಲಿ ಬಿ.ಟೆಕ್ ಪದವಿ ಪಡೆದುಕೊಂಡಿರುವ ನವ್ಯಾ ಹರಿದಾಸ್, ಕೊಯಿಕ್ಕೋಡ್ ಕಾರ್ಪೋರೇಷನ್‌ನಲ್ಲಿ ಕೌನ್ಸಿಲರ್ ಆಗಿದ್ದಾರೆ. ಬಿಜೆಪಿ ಮಹಿಳಾ ಮೋರ್ಚಾ ಘಟಕದ ರಾಜ್ಯ ಮಹಾಸಚಿವೆಯಾಗಿಯೂ ಪಕ್ಷದಲ್ಲಿ ಕೆಲಸ ನಿರ್ವಹಿಸುತ್ತಿದ್ದಾರೆ. 

ಚುನಾವಣೆ ಆಯೋಗ ಅಕ್ಟೋಬರ್ 15ರಂದು 48 ವಿಧಾನಸಭಾ ಕ್ಷೇತ್ರ ಮತ್ತು ಎರಡು ಲೋಕಸಭಾ ಕ್ಷೇತ್ರಗಳಿಗೆ ಉಪ ಚುನಾವಣೆ ಘೋಷಣೆ ಮಾಡಿದೆ. ಮಹಾರಾಷ್ಟ್ರ  ಮತ್ತು ಜಾರ್ಖಂಡ್ ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದೆ. ನವೆಂಬರ್ 13ರಂದು ಮೊದಲ ಮತ್ತು ನವೆಂಬರ್ 20ರಂದು ಎರಡನೇ ಹಂತದಲ್ಲಿ ಮತದಾನ ನಡೆಯಲಿದೆ. ನವೆಂಬರ್ 23ರಂದು ಚುನಾವಣೆ ಫಲಿತಾಂಶ ಪ್ರಕಟವಾಗಲಿದೆ. ಇದೇ ವೇಳೆ ಕರ್ನಾಟಕದ ಚನ್ನಪಟ್ಟಣ, ಶಿಗ್ಗಾವಿ ಮತ್ತು ಸಂಡೂರು ವಿಧಾನಸಭಾ ಕ್ಷೇತ್ರಗಳಿಗೂ ಉಪ ಚುನಾವಣೆ ನಡೆಯಲಿದೆ.

ಪ್ರಿಯಾಂಕಾ ಗಾಂಧಿ ವಿರುದ್ಧ ಸ್ಪರ್ಧೆಗೆ ಇಳಿಯುತ್ತಿರುವ ಬಿಜೆಪಿಯ ಸ್ಪರ್ಧಿ ನವ್ಯಾ ಯಾರು?

Latest Videos
Follow Us:
Download App:
  • android
  • ios