Asianet Suvarna News Asianet Suvarna News

ಮತಾಂತರ ನಿಷೇಧ ಕಾಯ್ದೆ: ಕರ್ನಾಟಕ ಸೇರಿ 8 ರಾಜ್ಯ ಸರ್ಕಾರಗಳಿಗೆ ನೋಟಿಸ್‌

ಬಲವಂತದ ಮತಾಂತರ ನಿಷೇಧ ಮಾಡಿ ಜಾರಿಗೊಳಿಸಿರುವ ಕಾಯ್ದೆಯನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಗಳ ವಿಚಾರಣೆ ನಡೆಸಿರುವ ಸುಪ್ರೀಂಕೋರ್ಟ್‌, ಈ ಸಂಬಂಧ ಮೂರು ವಾರಗಳಲ್ಲಿ ಅಭಿಪ್ರಾಯ ಸಲ್ಲಿಸುವಂತೆ ಕರ್ನಾಟಕ ಸೇರಿದಂತೆ 8 ರಾಜ್ಯಗಳಿಗೆ ನೋಟಿಸ್‌ ಜಾರಿ ಮಾಡಿದೆ.

Prohibition of Conversion Act supreme court Notice to 8 State Governments including Karnataka akb
Author
First Published Mar 19, 2023, 12:26 PM IST

ನವದೆಹಲಿ: ಬಲವಂತದ ಮತಾಂತರ ನಿಷೇಧ ಮಾಡಿ ಜಾರಿಗೊಳಿಸಿರುವ ಕಾಯ್ದೆಯನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಗಳ ವಿಚಾರಣೆ ನಡೆಸಿರುವ ಸುಪ್ರೀಂಕೋರ್ಟ್‌, ಈ ಸಂಬಂಧ ಮೂರು ವಾರಗಳಲ್ಲಿ ಅಭಿಪ್ರಾಯ ಸಲ್ಲಿಸುವಂತೆ ಕರ್ನಾಟಕ ಸೇರಿದಂತೆ 8 ರಾಜ್ಯಗಳಿಗೆ ನೋಟಿಸ್‌ ಜಾರಿ ಮಾಡಿದೆ. ಇಂಥ ಕಾಯ್ದೆಯನ್ನು ಜಾರಿಗೆ ತಂದಿರುವ ಕರ್ನಾಟಕ, ಉತ್ತರ ಪ್ರದೇಶ, ಉತ್ತರಾಖಂಡ, ಮಧ್ಯಪ್ರದೇಶ, ಗುಜರಾತ್‌, ಜಾರ್ಖಂಡ್‌, ಛತ್ತೀಸ್‌ಗಢ ಹಾಗೂ ಒಡಿಶಾ ರಾಜ್ಯಗಳಿಗೆ ಸೂಚನೆ ನೀಡಿದೆ. ಇನ್ನೊಂದು ರಾಜ್ಯವಾದ ಹಿಮಾಚಲಪ್ರದೇಶ, ರಾಜ್ಯದಲ್ಲಿ ಶಾಂತಿಯುತ ವಾತಾವರಣ ಕಾಪಾಡಲು ಮತ್ತು ಬಲವಂತದ ಮತಾಂತರ ತಡೆಗೆ ಕಾಯ್ದೆ ಜಾರಿ ಮಾಡಿರುವುದಾಗಿ ಸುಪ್ರೀಂಕೋರ್ಟ್‌ಗೆ ಮಾಹಿತಿ ನೀಡಿದೆ.

ಮತಾಂತರ ನಿಷೇಧ ಕಾನೂನು ಜಾರಿಯಲ್ಲಿದ್ದರೂ ಮತಾಂತರ

ರಾಜ್ಯ ಸರ್ಕಾರ ಈಗಾಗಲೇ ಮತಾಂತರ ನಿಷೇಧ ಕಾನೂನು ಜಾರಿಗೆ ತಂದಿದೆ. ಆದ್ರೂ ಕೆಲ‌ ಮತಾಂಧರು ತಮ್ಮ ಕೆಲಸ ಬಿಟ್ಟಿಲ್ಲ. ಇದಕ್ಕೆ ಇಂಬು ಕೊಡುವಂಥ ಘಟನೆಯೊಂದು ಮಂಡ್ಯದಲ್ಲಿ ನಡೆದಿದೆ. ದಲಿತ ಯುವಕನೋರ್ವನ ಮರ್ಮಾಂಗದ ತುದಿ ಕತ್ತರಿಸಿ(ಖತ್ನಾ) ಮುಸ್ಲಿಂ ಧರ್ಮಕ್ಕೆ ಬಲವಂತವಾಗಿ ಮತಾಂತರ ಮಾಡಲು ಯತ್ನಿಸಿರುವುದು ತಡವಾಗಿ ಬೆಳಕಿಗೆ ಬಂದಿದೆ. ಈ ಘಟನೆಗೆ ಸಂಬಂಧಿಸಿದಂತೆ ಹುಬ್ಬಳ್ಳಿಯ 11 ಮಂದಿ ವಿರುದ್ಧ ಇಲ್ಲಿನ ನವನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹೌದು, ರಾಜ್ಯದಲ್ಲಿ ಬಲವಂತದ ಮತಾಂತರ ನಡೆಯುತ್ತಿದೆ ಎಂಬುದಕ್ಕೆ ಇದೊಂದು ತಾಜಾ ಉದಾಹರಣೆ. ಹುಬ್ಬಳ್ಳಿ(Hubballiಯ ನವನಗರ ಪೊಲೀಸ್ ಠಾಣೆ(Navanagar Police Station)ಯಲ್ಲಿ‌ ದಾಖಲಾಗಿರುವ ಈ ಎಫ್‌ಐಆರ್(FIR) ಒಮ್ಮೆ ಓದಿದ್ರೆ ರಾಜ್ಯದಲ್ಲಿ ಬಲವಂತದ ಮತಾಂತರ ಹೇಗೆಲ್ಲ ನಡೆಯುತ್ತಿದೆ ಅನ್ನೊದು ಗೊತ್ತಾಗುತ್ತೆ. 

ಮತಾಂತರ ಕಾಯ್ದೆ ಹಿಂಪಡೆಯುತ್ತೇವೆಂದು ಪ್ರಣಾಳಿಕೆಯಲ್ಲಿ ತಿಳಿಸಿ: ಡಿಕೆಶಿ, ಸಿದ್ದರಾಮಯ್ಯಗೆ ಈಶ್ವರಪ್ಪ ಸವಾಲು

ಆರ್ಥಿಕ ಸಂಕಷ್ಟದಿಂದ ಬಳಲುತ್ತಿದ್ದ ಮಂಡ್ಯದ ಯಾದವನಹಳ್ಳಿ(Yadavanahalli) ಗ್ರಾಮದ ಶ್ರೀಧರ ಗಂಗಾಧರ(Shridhar Gangadhar)ನಿಗೆ ಹಣದ ಆಮಿಷ ಒಡ್ಡಿ ಬಳಿಕ ಆತನ ಮರ್ಮಾಂಗದ ತುದಿ ಕತ್ತರಿಸಿ(ಖತ್ನಾ) ಮುಸ್ಲಿಂ ಧರ್ಮಕ್ಕೆ ಮತಾಂತರ ಮಾಡಿದ್ರಂತೆ. ಆರಂಭದಲ್ಲಿ ಶ್ರೀಧರ್ ಗೆ ಪರಿಚಯವಾದ ಮಂಡ್ಯದ ಅತ್ತಾವರ ರೆಹಮಾನ್, ಆರ್ಥಿಕ ನೆರವು ಕೊಡಿಸುವ ನೆಪದಲ್ಲಿ ಬೆಂಗಳೂರಿಗೆ ಕರೆದೊಯ್ದು, ಬೆಂಗಳೂರಿನ ಅಜೀಸಾಬ್ ಜೊತೆ ಸೇರಿಕೊಂಡು ಮತಾಂತರ ಪ್ಲಾನ್ ಮಾಡ್ತಾರೆ. ಇವರಿಗೆ ಹುಬ್ಬಳ್ಳಿಯ ನಯಾಜ್ ಪಾಷಾ, ನದೀಮ್ ಖಾನ್, ಅನ್ಸಾರ್ ಪಾಷಾ, ಸಯ್ಯದ್ ದಸ್ತಗಿರ್, ಮಹ್ಮದ್ ಇಕ್ಬಾಲ್, ರಫಿಕ್, ಶಬ್ಬೀರ್, ಖಾಲಿದ್, ಷಾಕಿಲ್ ಮತ್ತು ಅಲ್ತಾಪ್ ಸೇರಿ 10 ಕ್ಕೂ ಹೆಚ್ಚು ಜನ ಸೇರಿಕೊಂಡು ದಲಿತ ಜಾತಿಗೆ ಸೇರಿದ ಶ್ರೀಧರನ್ನ ಮುಸ್ಲಿಂ ಧರ್ಮಕ್ಕೆ ಮತಾಂತರ ಮಾಡಿದ್ದಾರೆ. ಇದನ್ನು ಸ್ವತಃ ಶ್ರೀಧರ ದೂರಿನಲ್ಲಿ ದಾಖಲಿಸಿದ್ದಾರೆ.

ಅರ್ಥಿಕ ಸಂಕಷ್ಟದಲ್ಲಿದ್ದ ಶ್ರೀಧರಗೆ ನೆರವು ನೀಡುವ ನೆಪದಲ್ಲಿ ಕಳೆದ ಮೇ ತಿಂಗಳಲ್ಲಿ ಬೆಂಗಳೂರಿಗೆ ಕರೆದೊಯ್ದ ಆರೋಪಿಗಳು, ಅಲ್ಲಿನ ಬನಶಂಕರಿ(Banashankari)ಯ ಮಸೀದಿ(mosque)ಯೊಂದರಲ್ಲಿ ಬಲವಂತವಾಗಿ ಬಂಧಿಸಿಟ್ಟಿದ್ದರು. ನಂತರ ಅವರಿಗೆ ಮುಸ್ಲಿಂ(Muslim)ಧರ್ಮದ ಬಗ್ಗೆ ನಂಬಿಕೆ ಬರುವಂತೆ ಮಾಡಿ, ಮರ್ಮಾಂಗದ ತುದಿ ಕತ್ತರಿಸಿದ್ದಾರೆ. ದನದ ಮಾಂಸ ತಿನ್ನುವಂತೆ ಒತ್ತಾಯಿಸಿ ಹಲ್ಲೆ ನಡೆಸಿದ್ದಲ್ಲದೆ, ಮತಾಂತರದ ಬಗ್ಗೆ ಬಾಂಡ್ ಪೇಪರ್(Bond paper)ನಲ್ಲಿ ಸಹಿ‌ ಪಡೆದಿದ್ದಾರೆ. ಅಲ್ಲಿಂದ ತಿರುಪತಿಗೆ ಕರೆದೊಯ್ದು, ಮುಸ್ಲಿಂ ಧರ್ಮದ ಪ್ರಾರ್ಥನೆ ಹಾಗೂ ಇತರ ಪದ್ಧತಿಗಳ ಕುರಿತು ತರಬೇತಿ ನೀಡಿದ್ದಾರೆ.

ಹಿಂದು ಮುಸ್ಲಿಂ ಮದ್ವೆ ಆಗ್ಬಾರ್ದಾ? ತಲಾಖ್ ಹೇಳ್ತೀನಿ ಎಂದು ಪತಿ ಆದಿಲ್ ಬೆದರಿಕೆ ಹಾಕುತ್ತಿದ್ದಾರೆ: ರಾಖಿ ಸಾವಂತ್

ಪ್ರತಿವರ್ಷ ಮೂವರನ್ನು ಮುಸ್ಲಿಂ ಧರ್ಮಕ್ಕೆ ಮತಾಂತರ ಮಾಡಬೇಕೆಂದು ಆರೋಪಿಗಳು ಶ್ರೀಧರ ಅವರಿಗೆ ಬೆದರಿಸಿದ್ದಾರೆ. ಅವರ ಕೈಯ್ಯಲ್ಲಿ ಪಿಸ್ತೂಲ್ ಹಿಡಿಸಿ ಫೋಟೊ ತೆಗೆದು, ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟು ಭಯೋತ್ಪಾದಕನೆಂದು ಬಿಂಬಿಸುವುದಾಗಿ ಹೆದರಿಸಿದ್ದಾರೆ. ನಂತರ ಅವರ ಬ್ಯಾಂಕ್ ಖಾತೆಗೆ 35 ಸಾವಿರ ರೂ. ವರ್ಗಾಯಿಸಿ, ತಾವು ಹೇಳಿದಂತೆ ಕೇಳಬೇಕು ಎಂದು ಜೀವ ಬೆದರಿಕೆ ಹಾಕಿದ್ದಾರೆ.

Follow Us:
Download App:
  • android
  • ios