ಪ್ರವಾದಿ ಮೊಹಮ್ಮದ್ ನಿಂದನೆ ಆರೋಪದಡಿ ಪ್ರತಿಭಟನೆ ಶುಕ್ರವಾರ ಪ್ರಾರ್ಥನೆ ಬಳಿಕ ವ್ಯವಸ್ಥಿತವಾಗಿ ನಡೆದ ಪ್ರತಿಭಟನೆ ಕೋಮು ಘರ್ಷಣೆಗೆ ಕಾರಣಾದ ಪ್ರತಿಭಟನೆ, ಹೆಡೆಮುರಿ ಕಟ್ಟಲು ಪೊಲೀಸರು ರೆಡಿ
ಉತ್ತರ ಪ್ರದೇಶ(ಜೂ.11): ಪ್ರವಾದಿ ಮೊಹಮ್ಮದ್ ವಿರುದ್ಧ ವಿವಾದಾತ್ಮಕ ಹೇಳಿಕೆ ವಿರೋಧಿಸಿ ದೇಶದೆಲ್ಲೆಡೆ ಪ್ರತಿಭಟನೆ ನಡೆಯುತ್ತಿದೆ. ಅದರಲ್ಲೂ ಶುಕ್ರವಾರ(ಜೂ.10) ಪ್ರಾರ್ಥನೆ ಬಳಿಕ ಮುಸ್ಲಿಮರ ನಡೆಸಿದ ಪ್ರತಿಭಟನೆ ಹಿಂಸೆಗೆ ತಿರುಗಿತ್ತು. ಪೊಲೀಸರ ಮೇಲೆ ಕಲ್ಲು ತೂರಾಟ, ವಾಹನಗಳಿಗೆ ಬೆಂಕಿ ಹಚ್ಚಿದ ಘಟನೆಗಳು ಸಾಮಾನ್ಯವಾಗಿತ್ತು. ಉತ್ತರ ಪ್ರದೇಶದಲ್ಲೂ ಪ್ರತಿಭಟನೆ ಕಿಚ್ಚು ಜೋರಾಗಿತ್ತು. ಯುಪಿಯ ಶಹರಾನ್‌ಪುರದಲ್ಲಿ ನಡೆದ ಕೋಮು ಘರ್ಷಣೆ ನಡೆಸಿದವರ ವಿರುದ್ಧ ಪೊಲೀಸರು ರಾಷ್ಟ್ರೀಯ ಭದ್ರತಾ ಕಾಯ್ದೆ ಅಡಿ ಪ್ರಕರಣ ದಾಖಲಿಸಲು ಮುಂದಾಗಿದ್ದಾರೆ.
ಪ್ರತಿಭಟನೆ ಹಿಂಸೆಗೆ ತಿರುಗಿ ಕೋಮು ಸಂಘರ್ಷವೇ ನಡೆದು ಹೋಗಿದೆ. ಈ ಘರ್ಷಣೆ ವೇಳೆ ಅಂಗಡಿ ಮುಂಗಟ್ಟುಗಳನ್ನು ಲೂಟಿ ಮಾಡಲಾಗಿದೆ. ಕಲ್ಲು ತೂರಾಟ, ವಾಹನಗಳಿಗೆ ಬೆಂಕಿ ಹಚ್ಚಿ ದಾಂಧಲೆ ನಡೆಸಲಾಗಿದೆಯ. ಈ ಪ್ರಕರಣದಲ್ಲಿ ಈಗಾಗಲೇ 54 ಮಂದಿಯನ್ನು ಬಂಧಿಸಲಾಗಿದೆ.
ಪ್ರವಾದಿ ನಿಂದನೆ ವಿರುದ್ಧ ಕರ್ನಾಟಕದಲ್ಲೂ ತೀವ್ರ ಆಕ್ರೋಶ: ಬಿಗು ವಾತಾವರಣ
ಬಂಧಿತ ಆರೋಪಿಗಳ ವಿರುದ್ದ ರಾಷ್ಟ್ರೀಯ ಭದ್ರತಾ ಕಾಯ್ದೆ ಅಡಿ ಪ್ರಕರಣ ದಾಖಲಿಸಲು ಪೊಲೀಸರು ಸಜ್ಜಾಗಿದ್ದಾರೆ. ಇತ್ತ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಪೊಲೀಸರಿಗೆ ಸಂಪೂರ್ಣ ಸ್ವಾತಂತ್ರ್ಯ ನೀಡಿದ್ದಾರೆ. ಗಲಭೆ ಸೃಷ್ಟಿಸುವ, ಕಾನೂನು ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮಕ್ಕೆ ಸೂಚಿಸಿದ್ದಾರೆ.
ಉತ್ತರಪ್ರದೇಶದ ರಾಜಧಾನಿ ಲಖನೌ, ಸಹರಾನ್‌ಪುರ, ಮೊರಾದಾಬಾದ್, ರಾಮಪುರದಲ್ಲಿ ಜನರು ನೂಪುರ್ ಶರ್ಮಾ ವಿರುದ್ಧ ಘೋಷಣೆ ಕೂಗಿ ಭಾರೀ ಪ್ರತಿಭಟನೆ ನಡೆಸಿದ್ದಾರೆ.ನಮಾಜ್ ಬಳಿಕ ಪ್ರಯಾಗರಾಜ್‌ನಲ್ಲಿ ಕಲ್ಲು ತೂರಾಟ ನಡೆಸಲಾಗಿದ್ದು, ಅಂಗಡಿಗಳು, ವಾಹನಗಳಿಗೆ ಬೆಂಕಿ ಹಚ್ಚಲಾಗಿದೆ. ಪೊಲೀಸರು ಆಶ್ರುವಾಯು ಪ್ರಯೋಗಿಸಿ ಜನರನ್ನು ಚದುರಿಸಿ ಉದ್ವಿಗ್ನ ಪರಿಸ್ಥಿತಿಯನ್ನು ನಿಯಂತ್ರಿಸಿದ್ದಾರೆ.
ಭೋಜಪುರದಲ್ಲಿ ನೂಪುರ್ ಶರ್ಮಾ ವಿರುದ್ಧ ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ ಪ್ರಕರಣ ದಾಖಲಿಸಬೇಕೆಂದು ಆಗ್ರಹಿಸಿ ಪ್ರತಿಭಟನೆ ನಡೆಸಲಾಗಿದೆ. ಕಾನ್ಪುರದಲ್ಲಿ ಕಳೆದ ವಾರವೇ ಹಿಂಸಾಚಾರ ನಡೆದ ಹಿನ್ನೆಲೆಯಲ್ಲಿ ಅಹಿತಕರ ಘಟನೆ ನಡೆಯದಂತೆ ತಡೆಯಲು ಪೊಲೀಸರ ಬಿಗಿ ಬಂದೋಬಸ್ತ ಮಾಡಲಾಗಿದೆ. ರಾಜ್ಯಾದ್ಯಂತ ಹೈ ಅಲರ್ಚ್ ಘೋಷಿಸಲಾಗಿದೆ. ಉತ್ತರಪ್ರದೇಶದ ದೇವಬಂದ್‌ನಲ್ಲಿ ಹಿಂಸಾತ್ಮಕ ಪ್ರತಿಭಟನೆ ನಡೆಸಿದಕ್ಕಾಗಿ 5 ಜನರನ್ನು ಬಂಧಿಸಲಾಗಿದೆ.ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ರಾಜ್ಯದ ವಿವಿಧೆಡೆ ಕಲ್ಲು ತೂರಾಟ ನಡೆಸಿದ ಗಲಭೆ ಕೋರರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದ್ದಾರೆ.
ಹೇಳಿಕೆಗೆ ಮುಸ್ಲಿಂ ಸಮುದಾಯ ಪ್ರತಿಭಟನೆ, ಕರ್ನಾಟಕದಲ್ಲಿ ಹೈಅಲರ್ಟ್
ಕಟ್ಟೆಚ್ಚರ ವಹಿಸಿ: ಪೊಲೀಸರಿಗೆ ಕೇಂದ್ರ ಸೂಚನೆ
ಪ್ರವಾದಿ ಅವಹೇಳನ ಮಾಡಿದ ನೂಪುರ್ ಶರ್ಮಾ ವಿರುದ್ಧ ದೇಶಾದ್ಯಂತ ಭಾರೀ ಪ್ರತಿಭಟನೆ, ಹಿಂಸಾಚಾರ ನಡೆದ ಬೆನ್ನಲ್ಲೇ ಗೃಹ ಸಚಿವಾಲಯವು ಕಟ್ಟೆಚ್ಚರ ವಹಿಸುವಂತೆ ಎಲ್ಲ ರಾಜ್ಯಗಳ ಪೊಲೀಸರಿಗೆ ಸೂಚಿಸಿದೆ.ಅಲ್ಲದೆ, ‘ಗಲಭೆಯ ವೇಳೆ ಪೊಲೀಸರ ಮೇಲೂ ದಾಳಿ ನಡೆಯುವ ಸಾಧ್ಯತೆಯಿರುವುದರಿಂದ ಎಲ್ಲ ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳ ಪೊಲೀಸರು ಹಾಗೂ ಅರೆಸೇನಾ ಪಡೆಗಳು ಸನ್ನದ್ಧ ಸ್ಥಿತಿಯಲ್ಲಿರಬೇಕು’ ಎಂದು ನಿರ್ದೇಶಿಸಿದೆ. ‘ಸಾಮಾಜಿಕ ಜಾಲತಾಣಗಳಲ್ಲಿ ಪ್ರಚೋದನಕಾರಿ ಭಾಷಣ ಮಾಡುವ ವ್ಯಕ್ತಿಗಳನ್ನು ಗುರುತಿಸಿ ಕ್ರಮ ಕೈಗೊಳ್ಳುವಂತೆ ರಾಜ್ಯ ಪೊಲೀಸ್ ಇಲಾಖೆಗೆ ಈಗಾಗಲೇ ಸೂಚಿಸಲಾಗಿದೆ’ ಎಂದು ಗೃಹ ಅಧಿಕಾರಿಗಳು ಹೇಳಿದ್ದಾರೆ.
