ಜಮ್ಮು ಕಾಶ್ಮೀರದ ಪುಲ್ವಾಮಾದಲ್ಲಿ 2019ರಲ್ಲಿ ನಡೆದ ಭಯೋತ್ಪಾದಕ ದಾಳಿ| ಭಯೋತ್ಪಾದಕ ದಾಳಿಗೆ ಎರಡು ವರ್ಷ|  ಹುತಾತ್ಮರಾದ ಸಿಆರ್‌ಪಿಎಫ್ ಯೋಧರಿಗೆ ಗಣ್ಯರ ಶ್ರದ್ಧಾಂಜಲಿ

ನವದೆಹಲಿ(ಫೆ.14): ಜಮ್ಮು ಕಾಶ್ಮೀರದ ಪುಲ್ವಾಮಾದಲ್ಲಿ ಸಿಆರ್‌ಪಿಎಫ್‌ ಯೋಧರ ಮೇಲೆ ನಡೆದ ಭಯೋತ್ದಾದಕ ದಾಳಿಗೆ ಇಂದು ವರ್ಷವ./ ಅಂದಿನ ಆ ಕರಾಳ ದಿನ ಭಾರತ ತನ್ನ ನಲ್ವತ್ತು ವೀರ ಯೋಧರನ್ನು ಕಳೆದುಕೊಂಡಿತ್ತು. ಇಡೀ ದೇಶವೇ ಅಂದು ಕಂಬನಿ ಮಿಡಿದಿತ್ತು. ಆ ಕರಾಳ ನೆನಪು ಇಂದಿಗೂ ಜನರ ಮನದಲ್ಲಿ ಜೀವಂತವಾಗಿದೆ. ಈ ಭಯೋತ್ದಾದಕ ದಾಳಿ ನಡೆದು ಎರಡು ವರ್ಷವಾಗುತ್ತಿರುವ ಸಂದರ್ಭದಲ್ಲಿ ರಾಜಕೀಯ ಮುಖಂಡರು, ಜನ ಸಾಮಾಣ್ಯರು ಸೇರಿ ಎಲ್ಲರೂ ಮತ್ತೊಮ್ಮೆ ವೀರ ಯೋಧರ ಬಲಿದಾನವನ್ನು ನೆನಪಿಸಿಕೊಂಡಿದ್ದಾರೆ. 

Scroll to load tweet…

ಪುಲ್ವಾಮಾ ದಾಳಿಯಲ್ಲಿ ಹುತಾತ್ಮರಾದ ಯೋಧರ ಬಲಿದಾನವನ್ನು ನೆನಪಿಸಿಕೊಂಡ ಕೇಂದ್ರ ಗೃಹ ಸಚಿವ ಅಮಿತ್ ಶಾ ಟ್ವೀಟ್ ಮಾಡುತ್ತಾ '2019 ರಲ್ಲಿ ಈ ದಿನದಂದು ನಡೆದ ಭೀಕರ ಪುಲ್ವಾಮಾ ದಾಳಿಯಲ್ಲಿ ಪ್ರಾಣ ಕಳೆದುಕೊಂಡ ಧೈರ್ಯಶಾಲಿ ಹುತಾತ್ಮರಿಗೆ ನಾನು ನಮಿಸುತ್ತೇನೆ. ಅವರ ಅಸಾಧಾರಣ ಧೈರ್ಯ ಮತ್ತುಪರಮ ತ್ಯಾಗವನ್ನು ಭಾರತ ಎಂದಿಗೂ ಮರೆಯುವುದಿಲ್ಲ' ಎಂದಿದ್ದಾರೆ. ಈ ಮೂಲಕ ಅಗಲಿದ ಯೋಧರಿಗೆ ಶ್ರದ್ಧಾಂಜಲಿ ಅರ್ಪಿಸಿದ್ದಾರೆ.

Scroll to load tweet…

ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಕೂಡಾ ಟ್ವೀಟ್ ಮಾಡುತ್ತಾ 2019 ರ ಪುಲ್ವಾಮಾ ಭಯೋತ್ಪಾದಕ ದಾಳಿಯಲ್ಲಿ ಪ್ರಾಣ ತ್ಯಾಗ ಮಾಡಿದ ಧೈರ್ಯಶಾಲಿಗಳಾದ ಸಿಆರ್‌ಪಿಎಫ್ ಸಿಬ್ಬಂದಿಗೆ ನಾನು ಗೌರವ ಸಲ್ಲಿಸುತ್ತೇನೆ. ರಾಷ್ಟ್ರಕ್ಕೆ ಅವರು ಮಾಡಿದ ಸೇವೆ ಮತ್ತು ಅವರ ಪರಮ ತ್ಯಾಗವನ್ನು ಭಾರತ ಎಂದಿಗೂ ಮರೆಯುವುದಿಲ್ಲ. ಈ ದಾಳಿಯಿಂದ ನೊಂದಿರುವ ಅವರ ಕುಟುಂಬಗಳೊಂದಿಗೆ ನಾವು ನಿಲ್ಲುತ್ತೇವೆ ಎಂದಿದ್ದಾರೆ.

Scroll to load tweet…

ಕರ್ನಾಟಕ ಸಿಎಂ ಬಿ. ಎಸ್. ಯಡಿಯೂರಪ್ಪ ಕೂಡಾ ಹುತಾತ್ಮರಿಗೆ ನಮನ ಸಲ್ಲಿಸುತ್ತಾ ಟ್ವೀಟ್ ಮಾಡಿದ್ದಾರೆ. ಅವರು ತಮ್ಮ ಟ್ವೀಟ್‌ನಲ್ಲಿ ಪುಲ್ವಾಮಾದಲ್ಲಿ ಕರ್ತವ್ಯ ನಿರತರಾಗಿದ್ದಾಗ ಹುತಾತ್ಮರಾದ #CRPF ವೀರಯೋಧರಿಗೆ ಗೌರವಪೂರ್ಣ ಶ್ರದ್ಧಾಂಜಲಿಗಳು ಎಂದು ಬರೆದಿದ್ದಾರೆ.

Scroll to load tweet…

ಕಾಂಗ್ರೆಸ್ ಹಿರಿಯ ನಾಯಕ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ಕೂಡಾ ಟ್ವೀಟ್ ಮಾಡಿದ್ದು, ದೇಶ ಕಾಯುವ ಯೋಧರಿಗೆ ಮತ್ತುಅನ್ನ ಕೊಡುವ ರೈತರಿಗೆ ನಾವೆಲ್ಲರೂ ಋಣಿಯಾಗಿರಬೇಕು. ಜೈ ಜವಾನ್, ಜೈ ಕಿಸಾನ್. ಹುತಾತ್ಮ ಯೋಧರಿಗೆ ಮತ್ತು ಅವರ ಕುಟುಂಬ ವರ್ಗಕ್ಕೆ ಗೌರವಪೂರ್ವಕ ನಮನಗಳು' ಎನ್ನುವ ಮೂಲಕ ಶ್ರದ್ಧಾಂಜಲಿ ಅರ್ಪಿಸಿದ್ದಾರೆ.

Scroll to load tweet…

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕೂಡಾ ಟ್ವೀಟ್ ಮಾಡಿದ್ದು, ಪುಲ್ವಾಮಾ ದಾಳಿಯಲ್ಲಿ ಹುತಾತ್ಮರಾದ ಕೆಚ್ಚೆದೆಯ ಸೈನಿಕರಿಗೆ ಹಾಗೂ ಅವರ ಕುಟುಂಬಕ್ಕೆ ನಮನ, ದೇಶವು ನಿಮಗೆ ಋಣಿಯಾಗಿದೆ ಎಂದು ಹುತಾತ್ಮರಿಗೆ ನಮನ ಸಲ್ಲಿಸಿದ್ದಾರೆ.

Scroll to load tweet…

ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ ಹುತಾತ್ಮರಾದ ತಾಯಿ ಭಾರತಿಯ ಧೈರ್ಯಶಾಲಿ ಪುತ್ರರಿಗೆ ನಮನಗಳು ನಿಮ್ಮ ಅದಮ್ಯ ಧೈರ್ಯ, ಶೌರ್ಯಕ್ಕೆ ರಾಷ್ಟ್ರವು ಯಾವಾಗಲೂ ಋಣಿಯಾಗಿರುತ್ತದೆ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ. ನಡ್ಡಾ ಹೇಳಿದ್ದಾರೆ.