ಪಂಜಾಬ್ ಪೇಪರ್ ಲೀಕ್ ಆರೋಪದ ಹಿನ್ನೆಲೆಯಲ್ಲಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿದೆ. ಹೀಗಾಗಿ ದೆಹಲಿಯ ಆಪ್ ಕಚೇರಿ ಬಳಿ ಬಿಗಿ ಭದ್ರತೆ ಒದಗಿಸಲಾಗಿದೆ. ಆಪ್ ಸರ್ಕಾರದ ಅವಧಿಯಲ್ಲಿ ನಡೆದಿದೆ ಎನ್ನಲಾದ 11 ಪರೀಕ್ಷಾ ಹಗರಣಗಳ ಬಗ್ಗೆ ಸಿಬಿಐ ತನಿಖೆಗೆ ಎಸ್‌ಎಡಿ ಸಂಸದೆ ಹರ್ಸಿಮ್ರತ್ ಕೌರ್ ಬಾದಲ್ ಆಗ್ರಹಿಸಿದ್ದಾರೆ.

ಪಂಜಾಬ್‌ನಲ್ಲಿ ನಡೆದಿದೆ ಎನ್ನಲಾದ ಪೇಪರ್ ಲೀಕ್ ಪ್ರಕರಣಕ್ಕೆ ಸಂಬಂಧಿಸಿದಂತೆ ಭಾರತೀಯ ಜನತಾ ಪಕ್ಷ (ಬಿಜೆಪಿ) ಕಾರ್ಯಕರ್ತರು ಪ್ರತಿಭಟನೆ ನಡೆಸಿ ಆಪ್ ಕಚೇರಿಗೆ ಮುತ್ತಿಗೆ ಹಾಕುವ ಸಾಧ್ಯತೆ ಇದೆ. ಈ ಹಿನ್ನೆಲೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿರುವ ಆಮ್ ಆದ್ಮಿ ಪಕ್ಷದ (ಆಪ್) ಕಚೇರಿಯ ಹೊರಗೂ ಬಿಗಿ ಭದ್ರತೆ ಏರ್ಪಡಿಸಲಾಗಿದೆ.

ಸಿಬಿಐ ತನಿಖೆಗೆ ಎಸ್‌ಎಡಿ ಆಗ್ರಹ

ಪಂಜಾಬ್‌ನಲ್ಲಿ ಆಮ್ ಆದ್ಮಿ ಪಕ್ಷದ ಸರ್ಕಾರದ ಅವಧಿಯಲ್ಲಿ 11 ಪರೀಕ್ಷಾ ಹಗರಣಗಳು ನಡೆದಿವೆ ಎಂದು ಶಿರೋಮಣಿ ಅಕಾಲಿದಳ (ಎಸ್‌ಎಡಿ) ಸಂಸದೆ ಹರ್ಸಿಮ್ರತ್ ಕೌರ್ ಬಾದಲ್ ಗಂಭೀರ ಆರೋಪ ಮಾಡಿದ್ದಾರೆ. ಈ ಎಲ್ಲಾ ಹಗರಣಗಳ ಬಗ್ಗೆ ಕೇಂದ್ರೀಯ ತನಿಖಾ ದಳ (ಸಿಬಿಐ) ತನಿಖೆ ನಡೆಸಬೇಕೆಂದು ಒತ್ತಾಯಿಸಿದ್ದಾರೆ. ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಅವರು,ಇಂದು, ಇಡೀ ಪಂಜಾಬ್ ಪರವಾಗಿ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಿ, ಆಪ್ ಸರ್ಕಾರದ ಅವಧಿಯಲ್ಲಿ ನಡೆದಿದೆ ಎನ್ನಲಾದ 11 ಪರೀಕ್ಷಾ ಹಗರಣಗಳ ಬಗ್ಗೆ ಸಿಬಿಐ ತನಿಖೆಗೆ ಆಗ್ರಹಿಸಿದ್ದೇನೆ. ಪಂಜಾಬ್‌ಗೆ ನ್ಯಾಯ ಸಿಗಬೇಕು! ಇದು ಪಂಜಾಬ್ ಸರ್ಕಾರದಿಂದ ಅಸಾಧ್ಯ. ಸಿಬಿಐ ತನಿಖೆ ಆಗಬೇಕು ಇದಕ್ಕಿಂತ ಕಡಿಮೆ ಏನನ್ನೂ ನಾವು ಒಪ್ಪುವುದಿಲ್ಲ' ಎಂದು ಬರೆದುಕೊಂಡಿದ್ದಾರೆ.

Scroll to load tweet…

ಆಪ್ ಸರ್ಕಾರದ ಮೇಲೆ ಹೆಚ್ಚಿದ ಒತ್ತಡ

ಪಂಜಾಬ್ ಪೇಪರ್ ಲೀಕ್ ಆರೋಪ ರಾಜಕೀಯ ಸ್ವರೂಪ ಪಡೆದುಕೊಂಡಿದ್ದು, ಬಿಜೆಪಿ ಈ ವಿಚಾರದಲ್ಲಿ ಆಪ್ ಸರ್ಕಾರವನ್ನು ಗುರಿಯಾಗಿಸಿಕೊಂಡು ನಿರಂತರವಾಗಿ ವಾಗ್ದಾಳಿ ನಡೆಸುತ್ತಿದೆ.

ಇದಕ್ಕೂ ಮುನ್ನ ಜುಲೈ 28 ರಂದು ಬಿಜೆಪಿ ಸಂಸದರು ಸಂಸತ್ ಆವರಣದಲ್ಲಿ ಪ್ರತಿಭಟನೆ ನಡೆಸಿದ್ದರು. ಪೇಪರ್ ಲೀಕ್ ಆರೋಪದ ಹೊಣೆ ಹೊತ್ತು ಪಂಜಾಬ್ ಶಿಕ್ಷಣ ಸಚಿವ ಹರ್ಜೋತ್ ಸಿಂಗ್ ಬೈನ್ಸ್ ರಾಜೀನಾಮೆ ನೀಡಬೇಕೆಂದು ಅವರು ಆಗ್ರಹಿಸಿದ್ದರು. ಹಿಂದೆ ಆಮ್ ಆದ್ಮಿ ಪಕ್ಷದಲ್ಲಿದ್ದ, ಈಗ ಬಿಜೆಪಿ ರಾಜ್ಯಸಭಾ ಸಂಸದೆಯಾಗಿರುವ ಸ್ವಾತಿ ಮಲಿವಾಲ್ ಈ ಪ್ರತಿಭಟನೆಯ ನೇತೃತ್ವ ವಹಿಸಿದ್ದರು. 'ಪಂಜಾಬ್ ಪೇಪರ್ ಲೀಕ್ ಬಗ್ಗೆ ಉತ್ತರ ಕೊಡಿ' ಎಂದು ಅವರು ಘೋಷಣೆ ಕೂಗಿದರು.

ಸೋಮವಾರ ಪಂಜಾಬ್ ಕಾಂಗ್ರೆಸ್ ಸಂಸದರು ಕೂಡ ಸಂಸತ್ತಿನ ಹೊರಗೆ ಪ್ರತಿಭಟನೆ ನಡೆಸಿದರು. ಪೇಪರ್ ಲೀಕ್ ಪ್ರಕರಣ ಮತ್ತು ಬರ್ನಾಲಾದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ನೈರ್ಮಲ್ಯ ಕಾರ್ಮಿಕರ ಮೇಲೆ ಪೊಲೀಸರು ನಡೆಸಿದ ಕ್ರಮವನ್ನು ಖಂಡಿಸಿ ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ರಾಜೀನಾಮೆ ನೀಡಬೇಕೆಂದು ಅವರು ಒತ್ತಾಯಿಸಿದರು. ಪಂಜಾಬ್‌ನಲ್ಲಿ ಆಪ್ ಸರ್ಕಾರದ ಅವಧಿಯಲ್ಲಿ ಕನಿಷ್ಠ ನಾಲ್ಕು ಪೇಪರ್ ಲೀಕ್‌ಗಳು ನಡೆದಿವೆ ಎಂದು ಕಾಂಗ್ರೆಸ್ ಆರೋಪಿಸಿದೆ. ಆದರೆ, ಸರ್ಕಾರ ಈ ಆರೋಪಗಳನ್ನು ನಿರಾಕರಿಸಿದೆ.

ಪಂಜಾಬ್ ಶಿಕ್ಷಕರ ಅರ್ಹತಾ ಪರೀಕ್ಷೆ, 12ನೇ ತರಗತಿ ಇಂಗ್ಲಿಷ್ ಪರೀಕ್ಷೆ ಮತ್ತು ಫಾರ್ಮಸಿ ಅಧಿಕಾರಿ ಪರೀಕ್ಷೆ ಸೇರಿದಂತೆ ಆರು ಪೇಪರ್ ಲೀಕ್‌ಗಳು ರಾಜ್ಯದ ಲಕ್ಷಾಂತರ ಆಕಾಂಕ್ಷಿಗಳ ಮೇಲೆ ಪರಿಣಾಮ ಬೀರಿವೆ ಎಂದು ಆರೋಪಿಸಿರುವ ಶಿರೋಮಣಿ ಅಕಾಲಿದಳ (ಎಸ್‌ಎಡಿ), ಪಂಜಾಬ್ ಶಿಕ್ಷಣ ಸಚಿವ ಬೈನ್ಸ್ ಅವರ ರಾಜೀನಾಮೆಗೆ ಆಗ್ರಹಿಸಿದೆ.

ನೀಟ್ ಪ್ರತಿಭಟನೆಗೆ ಬೆಂಬಲ ನೀಡಿದ್ದ ಕೇಜ್ರಿವಾಲ್ ಈಗೇನು ಹೇಳ್ತಾರೆ?

ನೀಟ್ ಪೇಪರ್ ಲೀಕ್ ಹಗರಣ ಪ್ರಕರಣದಲ್ಲಿ ಸಿಜೆಪಿ ಪಾರ್ಟಿಯೊಂದಿಗೆ ಸೇರಿ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದ್ದ ಕೇಜ್ರಿವಾಲ್, ಇದೀಗ ತಮ್ಮ ಪಕ್ಷ ಆಡಳಿತವಿರುವ ರಾಜ್ಯದಲ್ಲಿ ಪೇಪರ್ ಲೀಕ್ ಹಗರಣ ಕೇಳಿಬಂದಿದೆ. ನೈತಿಕ ಹೊಣೆ ಹೊತ್ತು ಪಂಜಾಬ ಶಿಕ್ಷಣ ಸಚಿವರ ರಾಜೀನಾಮೆ ನೀಡುತ್ತಾರೋ ಇಲ್ವೋ. ಬಿಜೆಪಿ ಕಾರ್ಯಕರ್ತರು ದೊಡ್ಡ ಮಾರಾಟಕ್ಕೆ ಹೋರಾಟಕ್ಕೆ ಮುಂದಾಗಿರುವುದಂತ ಮುಂದಿನ ಬೆಳವಣಿಗೆಗಳಿಂದ ಯಾವ ಸ್ವರೂಪ ಪಡೆದುಕೊಳ್ಳಲಿದೆಯೋ ಕಾದು ನೋಡಬೇಕು.