* ಮಹಿಳಾ ಹಕ್ಕುಗಳ ವಿಚಾರದಲ್ಲಿ ಸದ್ದು ಮಾಡುತ್ತಿದದ ಮನಿಷಾ ಗುಲಾಟಿ ಬಿಜೆಪಿಗೆ* ಮೋದಿ ಸಮ್ಮುಖದಲ್ಲಿ ಪಕ್ಷಕ್ಕೆ ಸೇರುವ ಸಾಧ್ಯತೆ* ಮಹಿಳಾ ಆಯೋಗದ ಅಧ್ಯಕ್ಷೆಯಾಗಿರುವ ಮನಿಷಾ ಗುಲಾಟಿ

ಚಂಡೀಗಢ(ಫೆ.14): ಪಂಜಾಬ್ ವಿಧಾನಸಭಾ ಚುನಾವಣೆಯ ದಿನಾಂಕ ಸಮೀಪಿಸುತ್ತಿದೆ. ಹೀಗಿರುವಾಗ ರಾಜ್ಯ ರಾಜಕಾರಣ ರಂಗೇರುತ್ತಿದೆ. ಈ ಮಧ್ಯೆ, ಪಂಜಾಬ್ ಮಹಿಳಾ ಆಯೋಗದ ಅಧ್ಯಕ್ಷೆ ಮನಿಶಾ ಗುಲಾಟಿ ಕಾಂಗ್ರೆಸ್ ತೊರೆದು ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಲಿದ್ದಾರೆ ಎಂಬ ಮಾಹಿತಿ ಹೊರಬಿದ್ದಿದೆ. ಜಲಂಧರ್‌ನಲ್ಲಿ ನಡೆಯಲಿರುವ ಪ್ರಧಾನಿ ನರೇಂದ್ರ ಮೋದಿ ಅವರ ಮೊದಲ ಭೌತಿಕ ರ್ಯಾಲಿಯಲ್ಲಿ ಅವರು ಬಿಜೆಪಿ ಸೇರಬಹುದು ಎಂದು ಹೇಳಲಾಗುತ್ತಿದೆ.

ಮಹಿಳಾ ಹಕ್ಕುಗಳ ವಿಚಾರದಲ್ಲಿ ಸದ್ದು ಮಾಡುತ್ತಿರುತ್ತಾರೆ

ಮನಿಶಾ ಗುಲಾಟಿ ಅವರನ್ನು ಪಂಜಾಬ್ ಮಾಜಿ ಸಿಎಂ ಕ್ಯಾಪ್ಟನ್ ಅಮರಿಂದರ್ ಸಿಂಗ್ ಆಪ್ತರೆಂದು ಪರಿಗಣಿಸಲಾಗಿದೆ. ಸಿಎಂ ಆದ ಬಳಿಕ ಕ್ಯಾಪ್ಟನ್ ಮನೀಷಾಗೆ ಅಧ್ಯಕ್ಷ ಸ್ಥಾನವನ್ನು ಹಸ್ತಾಂತರಿಸಿದ್ದರು. ಅವರು ಕಾಂಗ್ರೆಸ್ ತೊರೆದು ಬಿಜೆಪಿಗೆ ಹೋಗುವುದರ ಹಿಂದೆ ಕ್ಯಾಪ್ಟನ್ ಅಮರಿಂದರ್ ಸಿಂಗ್ ಅವರ ದೊಡ್ಡ ಕೈವಾಡವಿದೆ ಎಂಬ ಚರ್ಚೆಯೂ ರಾಜಕೀಯ ವಲಯದಲ್ಲಿ ನಡೆಯುತ್ತಿದೆ. ಅವರು ರಾಜ್ಯದಲ್ಲಿ ಮಹಿಳೆಯರ ಹಕ್ಕುಗಳು ಮತ್ತು ಭದ್ರತೆಗಾಗಿ ಜನಮನದಲ್ಲಿ ಉಳಿದಿದ್ದಾರೆ. ಅಷ್ಟೇ ಅಲ್ಲ ರಾಜ್ಯದಲ್ಲಿರುವ ಮದುವೆಯಾದ ಪುರುಷರು ವಿದೇಶಕ್ಕೆ ಪಲಾಯನ ಮಾಡುವ ವಿಚಾರದ ಬಗ್ಗೆಯೂ ಉಲ್ಲೇಖಿಸಿದ್ದಾರೆ.

ಸಿಎಂ ಚನ್ನಿ MeToo ವಿಚಾರ ಪ್ರಸ್ತಾಪ

ಸಿಎಂ ಚರಣ್‌ಜಿತ್ ಸಿಂಗ್ ಚನ್ನಿ ಮೀಟೂ ವಿಚಾರವನ್ನು ಪ್ರಸ್ತಾಪಿಸಿದ ನಂತರ ಮನೀಶಾ ಗುಲಾಟಿ ಮುನ್ನೆಲೆಗೆ ಬಂದಿದ್ದರು ಎಂಬುವುದು ಉಲ್ಲೇಖನೀಯ. ಎರಡು ವರ್ಷಗಳ ಹಿಂದೆ ಚನ್ನಿ ವಿರುದ್ಧ ಮೀಟೂ ಕೇಸ್ ಹಾಕಿದ್ದರು ಮನೀಶಾ ಗುಲಾಟಿ. ಈ ಬಗ್ಗೆ ಕ್ರಮ ಜರುಗಿಸಿ, ನೋಟಿಸ್ ಕೂಡ ಜಾರಿ ಮಾಡಿದೆ. ಆದರೆ ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್ ಮಧ್ಯಪ್ರವೇಶಿಸಿದ ನಂತರ ವಿಷಯ ಇತ್ಯರ್ಥವಾಗಿತ್ತು.

ಪಂಜಾಬ್ ಚುನಾವಣೆಯಲ್ಲಿ ಇಂದು ಅತ್ಯಂತ ಮಹತ್ವದ ದಿನ

ಇಂದು ಪಂಜಾಬ್ ಚುನಾವಣೆಯಲ್ಲಿ ಬಹಳ ಮಹತ್ವದ ದಿನ. ಏಕೆಂದರೆ ಚುನಾವಣಾ ದಿನಾಂಕ ಘೋಷಣೆಯಾದ ನಂತರ ಇಂದು ಮೊದಲ ಬಾರಿಗೆ ಪ್ರಧಾನಿ ಮೋದಿ ಸಾರ್ವಜನಿಕರೊಂದಿಗೆ ನೇರವಾಗಿ ಸಂವಾದ ನಡೆಸಲಿದ್ದಾರೆ. ಸೋಮವಾರ ಅವರು ಜಲಂಧರ್‌ನಲ್ಲಿ ಭೌತಿಕ ರ್ಯಾಲಿ ನಡೆಸಲಿದ್ದಾರೆ. ಇದೀಗ ಪ್ರಧಾನಿ ಮೋದಿ ಚುನಾವಣಾ ಉಸ್ತುವಾರಿಯನ್ನು ಕೈಗೆ ತೆಗೆದುಕೊಂಡ ನಂತರ ರಾಜಕೀಯ ಪಕ್ಷಗಳಲ್ಲಿ ಸಂಚಲನ ಮೂಡಿದೆ. ಏಕೆಂದರೆ ರಾಜ್ಯದಲ್ಲಿ ಪ್ರಧಾನಿಯವರ ಮೂರು ಬ್ಯಾಕ್ ಟು ಬ್ಯಾಕ್ ರ್ಯಾಲಿಗಳು ನಡೆಯಲಿವೆ.

ಫೆಬ್ರವರಿ 20 ರಂದು ಮತದಾನ ನಡೆಯಲಿದೆ

ಪಂಜಾಬ್‌ನ 117 ವಿಧಾನಸಭಾ ಸ್ಥಾನಗಳಿಗೆ ಫೆಬ್ರವರಿ 20 ರಂದು ಮತದಾನ ನಡೆಯಲಿದೆ. ಇಲ್ಲಿ ಒಂದೇ ಹಂತದಲ್ಲಿ ಮತದಾನ ನಡೆಯಲಿದೆ. ಮಾರ್ಚ್ 10 ರಂದು ಮತ ಎಣಿಕೆ ನಡೆಯಲಿದೆ. ಈ ಮೊದಲು ಫೆಬ್ರವರಿ 14 ರಂದು ಚುನಾವಣೆ ನಡೆಯಬೇಕಿತ್ತು ಆದರೆ ರಾಜ್ಯದ ಎಲ್ಲಾ ಪಕ್ಷಗಳೊಂದಿಗೆ ಸಭೆ ನಡೆಸಿದ ನಂತರ ಚುನಾವಣಾ ಆಯೋಗವು ಮತದಾನದ ದಿನಾಂಕವನ್ನು ವಿಸ್ತರಿಸಲು ನಿರ್ಧರಿಸಿದೆ. ಫೆಬ್ರವರಿ 16 ರಂದು ರವಿದಾಸ್ ಜಯಂತಿಯಂದು ರಾಜಕೀಯ ಪಕ್ಷಗಳು ಚುನಾವಣೆಯನ್ನು ಮುಂದೂಡುವಂತೆ ಒತ್ತಾಯಿಸಿದ್ದವು. ಈ ಬಾರಿ ಪಂಜಾಬ್ ನಲ್ಲಿ ಮತ್ತೆ ಅಧಿಕಾರಕ್ಕೆ ಬರಲು ಕಾಂಗ್ರೆಸ್ ದಾರಿ ಹುಡುಕುತ್ತಿದ್ದು, ಹೀಗಾಗಿ ಆಮ್ ಆದ್ಮಿ ಪಕ್ಷ, ಅಕಾಲಿದಳ ಮೈತ್ರಿ, ಬಿಜೆಪಿ ಮೈತ್ರಿ ಜತೆಗೆ ಕಿಸಾನ್ ಮೋರ್ಚಾ ಕೂಡ ಕಾಂಗ್ರೆಸ್ ಗೆ ಪೈಪೋಟಿ ನೀಡುತ್ತಿದೆ.