ಕೇಂದ್ರ ಸರ್ಕಾರ ಅಣಕಿಸಿದ ರಾಹುಲ್ ಗಾಂಧಿ ಚುನಾವಣೆ ಮುಗಿಯುತ್ತಿದೆ, ಪೆಟ್ರೋಲ್ ಬೆಲೆ ಏರಿಕೆಯಾಗಲಿದೆ ಜನತೆಗೆ ಸಲಹೆ ನೀಡಿದ ರಾಹುಲ್ ಗಾಂಧಿ
ನವದೆಹಲಿ(ಮಾ.05): ರಷ್ಯಾ ಹಾಗೂ ಉಕ್ರೇನ್ ಯುದ್ಧದಿಂದ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಹೆಚ್ಚಳವಾಗಿದೆ. ಹೀಗಾಗಿ ಶೀಘ್ರದಲ್ಲೇ ಭಾರತದಲ್ಲಿ ಬೆಲೆ ಏರಿಕೆಯಾಗುವ ಸಾಧ್ಯತೆ ಇದೆ. ಇದರ ನಡುವೆ ರಾಹುಲ್ ಗಾಂಧಿ ಕೂಡ ಕೇಂದ್ರ ಸರ್ಕಾರವನ್ನು ಅಣಕಿಸಿದ್ದಾರೆ. ಪಂಚಾ ರಾಜ್ಯ ಚುನಾವಣೆ ಶೀಘ್ರದಲ್ಲೇ ಮುಕ್ತಾಯಗೊಳ್ಳಲಿದೆ. ಉತ್ರರ ಪ್ರದೇಶದಲ್ಲಿ 7ನೇ ಹಾಗೂ ಅಂತಿಮ ಹಂತದ ಮತದಾನದೊಂದಿಗೆ ಪಂಚ ರಾಜ್ಯಗಳ ಚುನಾವಣೆ ಮುಕ್ತಾಯಗೊಳ್ಳಲಿದೆ. ಹೀಗಾಗಿ ಜನರು ಆದಷ್ಟೂ ಬೇಗನೆ ಪೆಟ್ರೋಲ್ ತುಂಬಿಸಿಕೊಳ್ಳಿ. ಇಲ್ಲದಿದ್ದರೆ ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆಯಾಗಲಿದೆ ಎಂದು ಕೇಂದ್ರ ಸರ್ಕಾರವನ್ನು ರಾಹುಲ್ ಗಾಂಧಿ ಅಣಕಿಸಿದ್ದಾರೆ.
ಚುನಾವಣೆ ಬಂದಾಗ ಪೆಟ್ರೋಲ್ ಡೀಸೆಲ್ ಬೆಲೆ ತಟಸ್ಥವಾಗಲಿದೆ. ಚುನಾವಣೆ ಮುಗಿಯುತ್ತಿದ್ದಂತೆ ತೈಲ ಬೆಲೆ ಏರಿಕೆ ಮಾಡುವುದು ಕೇಂದ್ರ ಬಿಜೆಪಿ ಸರ್ಕಾರ ಸಂಪ್ರದಾಯ. ಹೀಗಾಗಿ ಜನರು ಆದಷ್ಟು ಬೇಗ ಪೆಟ್ರೋಲ್ ಡೀಸೆಲ್ ತುಂಬಿಸಿಕೊಳ್ಳಿ, ಇಲ್ಲದಿದ್ದರೆ ಬೆಲೆ ಏರಿಕೆ ಬಿಸಿ ಎದುರಿಸಬೇಕಾಗುತ್ತದೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.
Karnataka Congress: ರಾಹುಲ್ ಭೇಟಿ ಬಳಿಕ ಸಿದ್ದು, ಡಿಕೆಶಿ ಒಗ್ಗಟ್ಟು ಪ್ರದರ್ಶನ
ಪಂಚ ರಾಜ್ಯಗಳ ಚುನಾವಣೆಯಿಂದ ರಾಕೆಟ್ ವೇಗದಲ್ಲಿ ಏರುತ್ತಿದ್ದ ತೈಲ ಬೆಲೆ ಏರಿಕೆಗೆ ಕೇಂದ್ರ ಸರ್ಕಾರ ದಿಢೀರ್ ಬ್ರೇಕ್ ಹಾಕಿತ್ತು. ಆದರೆ ಚುನಾವಣೆ ಮುಗಿಯುತ್ತಿದ್ದಂತೆ ಮತ್ತೆ ಬೆಲೆ ಏರಿಕೆಯಾಗಲಿದೆ. ಈ ಹಿಂದೆ ಬಿಜೆಪಿ ಸರ್ಕಾರ ಇದನ್ನೇ ಮಾಡಿದೆ ಎಂದು ರಾಹುಲ್ ಗಾಂಧಿ ಟ್ವೀಟ್ ಮೂಲಕ ಹೇಳಿದ್ದಾರೆ.
ಉಕ್ರೇನ್ ರಷ್ಯಾ ಯುದ್ಧದಿಂದ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಒಂದು ಬ್ಯಾರೆಲ್‌ಗೆ 111 ಅಮೆರಿಕನ್ ಡಾಲರ್‌ಗೆ ಏರಿಕೆಯಾಗಿದೆ.ಸದ್ಯ ತೈಲ ಬೆಲೆ ಹೆಚ್ಚಳದ ಹೊರೆಯನ್ನು ಭಾರತೀಯ ತೈಲ ಕಂಪನಿಗಳು ಹೊತ್ತಿದೆ. ಶೀಘ್ರದಲ್ಲೇ ತೈಲ ಬೆಲೆ ಹೆಚ್ಚಾಗಲಿದೆ.
ವಾರಾಣಾಸಿಯಲ್ಲಿ ಕಾಂಗ್ರೆಸ್ ಸಮಾವೇಶದಲ್ಲಿ ಮಾತನಾಡಿದ ರಾಹುಲ್ ಗಾಂಧಿ, ಬಿಜೆಪಿ ಹಾಗೂ ಪ್ರಧಾನಿ ಮೋದಿ ಸುಳ್ಳುಗಳನ್ನೇ ಹೇಳಿಕೊಂಡು ಎರಡು ಅವಧಿಗೆ ಆಡಳಿತ ನಡೆಸಿದ್ದಾರೆ. 15 ಲಕ್ಷ ರೂಪಾಯಿ ಖಾತೆಗೆ ಹಾಕುತ್ತೇನೆ ಎಂದಿದ್ದಾರೆ. ನಾನು ಈ ರೀತಿ ಸುಳ್ಳು ಹೇಳಿಲ್ಲ. ಇದಕ್ಕಿಂತ ಸಾಯುವುದೇ ಮೇಲು. ಮೋದಿ ದೇಶದ ಉದ್ದಗಲಕ್ಕೂ ಹಿಂದೂ ಧರ್ಮದ ಕುರಿತು ಮಾತನಾಡುತ್ತಾರೆ. ಹಿಂದೂ ಧರ್ಮ ಏನು? ಹಿಂದೂ ಧರ್ಮ ಅಂದರೆ ಸತ್ಯ. ಆದರೆ ಮೋದಿ ಇದೇ ಹಿಂದೂ ಧರ್ಮವನ್ನು ಮತಕ್ಕಾಗಿ ಬಳಸಿಕೊಳ್ಳುತ್ತಿದ್ದಾರೆ ಎಂದು ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.
Rahul Gandhi ಕುರಿತ ಹೇಳಿಕೆ: ಅಸ್ಸಾಂ ಸಿಎಂ ಸಮರ್ಥನೆ
ರಕ್ಷಣೆ ವಿಳಂಬ, ರಾಹುಲ್ ಗಾಂಧಿ ವಾಗ್ದಾಳಿ
ಯುದ್ಧಪೀಡಿತ ಉಕ್ರೇನ್‌ನಿಂದ ಭಾರತೀಯರನ್ನು ಮರಳಿ ಕರೆತರುತ್ತಿರುವ ವಿಚಾರವಾಗಿ ಮತ್ತು ರಷ್ಯಾ ದಾಳಿಯಲ್ಲಿ ಭಾರತೀಯ ವಿದ್ಯಾರ್ಥಿ ಮೃತಪಟ್ಟಿರುವುದರ ವಿರುದ್ಧ ವಿಪಕ್ಷಗಳ ನಾಯಕರು ಕೇಂದ್ರ ಸರ್ಕಾರವನ್ನು ಟೀಕಿಸಿದ್ದಾರೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್, ಮಮತಾ ಬ್ಯಾನರ್ಜಿ, ಮಲ್ಲಿಕಾರ್ಜುನ್ ಖರ್ಗೆ ಸೇರಿದಂತೆ ಹಲವು ನಾಯಕರು ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ.
ಬಹಳಷ್ಟುನಾಯಕರು ಭಾರತೀಯರನ್ನು ಸುರಕ್ಷಿತ ಕರೆತರುವ ನಿಟ್ಟಿನಲ್ಲಿ ಸಮರ್ಪಕವಾದ ಯೋಜನೆ ರೂಪಿಸಲು ಕೇಂದ್ರ ಸರ್ಕಾರ ಸರ್ವಪಕ್ಷ ಸಭೆ ನಡೆಸಬೇಕು ಎಂದು ಆಗ್ರಹಿಸಿದ್ದಾರೆ. ಮಂಗಳವಾರ ಮೃತಪಟ್ಟವಿದ್ಯಾರ್ಥಿಯ ಕುಟುಂಬಕ್ಕೆ ಸಂತಾಪ ಸೂಚಿಸಿದ ರಾಹುಲ್ ಗಾಂಧಿ, ನವೀನ್ ಸಾವಿನಿಂದ ದುಃಖವಾಗಿದೆ. ಕೇಂದ್ರ ಸರ್ಕಾರ ಭಾರತೀಯರನ್ನು ಸುರಕ್ಷಿತವಾಗಿ ಕರೆತರಲು ಸಮರ್ಪಕವಾದ ಕ್ರಮಗಳನ್ನು ಕೈಗೊಳ್ಳಬೇಕು ಮತ್ತು ಸಾಧ್ಯವಾದಷ್ಟುಬೇಗೆ ಭಾರತೀಯರನ್ನು ಸರ್ಕಾರ ಸ್ಥಳಾಂತರಿಸಬೇಕು ಎಂದು ಹೇಳಿದ್ದಾರೆ.
ಉಕ್ರೇನನಲ್ಲಿ ಸಿಲುಕಿಕೊಂಡಿರುವ ಭಾರತೀಯರಿಗೆ ರಾಯಭಾರ ಕಚೇರಿಯಿಂದ ಸರಿಯಾದ ಸಹಾಯ ದೊರೆಯುತ್ತಿಲ್ಲ. ಇದರ ಕುರಿತು ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಕೇಜ್ರಿವಾಲ್ ಹೇಳಿದ್ದಾರೆ. ಭಾರತೀಯರನ್ನು ಸ್ಥಳಾಂತರ ಮಾಡುವುದು ಕೇಂದ್ರ ಸರ್ಕಾರದ ಕರ್ತವ್ಯವಾಗಿದೆ. ಆದರೆ ಮೋದಿ ಅವರು ಈ ಸ್ಥಳಾಂತರವನ್ನು ಜನರನ್ನು ಮೆಚ್ಚಿಸುವ ಸಲುವಾಗಿ ಮಾಡುತ್ತಿದ್ದಾರೆ. ಎಲ್ಲಾ ಯುದ್ಧಗಳ ಸಮಯದಲ್ಲೂ ಭಾರತ ತನ್ನ ಪ್ರಜೆಗಳನ್ನು ಸುರಕ್ಷಿತವಾಗಿ ಸ್ಥಳಾಂತರ ಮಾಡಿದೆ. ಕೇಂದ್ರ ಸರ್ಕಾರ ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ
