ಇಂಡಿಯಾ ಮೈತ್ರಿ VS ಇಂಡಿಯಾ ಮೈತ್ರಿ: ವಯನಾಡ್‌ನಲ್ಲಿ ರಾಹುಲ್‌ ಗಾಂಧಿ ಸ್ಪರ್ಧೆಗೆ ಕೇರಳ ಸಿಎಂ ಕಿಡಿ!

ಕೇರಳದ ವಯನಾಡ್‌ ಲೋಕಸಭಾ ಕ್ಷೇತ್ರದಲ್ಲಿ ತೀರಾ ಕುತೂಹಲಕಾರಿಯಾದ ಸ್ಪರ್ಧೆ ಎದುರಾಗಿದೆ. ಇಲ್ಲಿ ಇಂಡಿಯಾ ಮೈತ್ರಿಯ ಪ್ರಮುಖ ಪಕ್ಷ ಕಾಂಗ್ರೆಸ್‌ನ ರಾಹುಲ್‌ ಗಾಂಧಿಗೆ ಇಂಡಿಯಾ ಮೈತ್ರಿಯ ಇನ್ನೊಂದು ಪಕ್ಷವಾದ ಸಿಪಿಐ ರಾಷ್ಟ್ರೀಯ ನಾಯಕಿ ಆನ್ನಿ ರಾಜಾ ಎದುರಾಳಿಯಾಗಿದ್ದಾರೆ.
 

Rahul Gandhi contesting against Annie Raja in Wayanad Kerala CM Pinarayi slams san

ಕೊಚ್ಚಿ (ಏ.2): ಲೋಕಸಭೆ ಚುನಾವಣೆಯಲ್ಲಿ ಆಡಳಿತಾರೂಢ ಎನ್‌ಡಿಎ ವಿರುದ್ಧ ಎದುರಾಳಿಯಾಗಿರುವ ಇಂಡಿಯಾ ಮೈತ್ರಿಕೂಟದಲ್ಲಿ ಎಲ್ಲವೂ ಸರಿಯಾಗಿಲ್ಲ ಎನ್ನುವುದಕ್ಕೆ ಮತ್ತೊಂದು ಪುರಾವೆ ಸಿಕ್ಕಿದೆ. ಕಾಂಗ್ರೆಸ್‌ನ ಮಾಜಿ ಅಧ್ಯಕ್ಷ ಹಾಗೂ ಹಾಲಿ ಸಂಸದ ರಾಹುಲ್‌ ಗಾಂಧಿ ವಯನಾಡ್‌ ಕ್ಷೇತ್ರದಿಂದ ಸ್ಪರ್ಧೆ ಮಾಡುತ್ತಿರುವುದಕ್ಕೆ ಇಂಡಿಯಾ ಮೈತ್ರಿಕೂಟದ ಸದಸ್ಯ ಪಕ್ಷ ಹಾಗೂ ಕೇರಳ ಮುಖ್ಯಮಂತ್ರಿ ಪಿಣರಾಜಿ ವಿಜಯನ್‌ ಟೀಕೆ ಮಾಡಿದ್ದಾರೆ. ವಯನಾಡ್‌ನಲ್ಲಿ ಕೇರಳದಲ್ಲಿ ಆಡಳಿತಾರೂಢ ಲೆಫ್ಟ್‌ ಡೆಮಾಕ್ರಟಿಕ್‌ ಫ್ರಂಟ್‌ (ಎಲ್‌ಡಿಎಫ್‌) ಹಾಗೂ ಕಮ್ಯುನಿಸ್ಟ್ ಪಾರ್ಟಿ ಆಫ್‌ ಇಂಡಿಯಾದ (ಸಿಪಿಐ) ರಾಷ್ಟ್ರೀಯ ನಾಯಕಿ ಆನ್ನಿ ರಾಜಾರನ್ನು ಕಣಕ್ಕೆ ಇಳಿಸಿದೆ.  ಇದರ ಬೆನ್ನಲ್ಲಿಯೇ ವಯನಾಡ್‌ನಲ್ಲಿ ಇಂಡಿಯಾ ಮೈತ್ರಿಯ ಭಾಗವಾಗಿರುವ ಕಾಂಗ್ರೆಸ್ ವಿರುದ್ಧ ಇಂಡಿಯಾ ಮೈತ್ರಿಯ ಸಿಪಿಐ ಟೀಕಾಪ್ರಹಾರ ಮಾಡಲು ಆರಂಭಿಸಿದೆ. ಕೇರಳ ಸಿಎಂ ಪಿಣರಾಯಿ ವಿಜಯನ್‌, ರಾಹುಲ್‌ ಗಾಂಧಿ ಬಿಜೆಪಿ ವಿರುದ್ಧ ಸೂಕ್ತವಾಗಿ ಪ್ರಚಾರ ಕಾರ್ಯ ಮಾಡುತ್ತಿಲ್ಲ ಎಂದು ಆರೋಪಿಸಿದ್ದಾರೆ.

ಕೋಳಿಕ್ಕೋಡ್‌ನಲ್ಲಿ ಚುನಾವಣಾ ಪ್ರಚಾರವನ್ನು ಉದ್ದೇಶಿಸಿ ಮಾತನಾಡಿದ ಮುಖ್ಯಮಂತ್ರಿ ಪಿಣರಾಯಿ ವಿಜಯನ್‌, 'ರಾಷ್ಟ್ರಮಟ್ಟದಲ್ಲಿ ಹೆಸರಾಂತ ಎಡ ನಾಯಕಿ ಅನ್ನಿ ರಾಜಾ ವಿರುದ್ಧ ರಾಹುಲ್ ಗಾಂಧಿ ಸ್ಪರ್ಧಿಸುತ್ತಿದ್ದಾರೆ. ಮಣಿಪುರದ ವಿಷಯದಲ್ಲಿ ಭಾರತೀಯ ಜನತಾ ಪಕ್ಷದ (ಬಿಜೆಪಿ) ಸರ್ಕಾರವನ್ನು ಬಲವಾಗಿ ಇವರು ಟೀಕೆ ಮಾಡಿದ್ದರು. ಅನ್ನಿ ರಾಜಾ ಅವರನ್ನು ದೇಶವಿರೋಧಿ ಎಂದು ಕರೆಯುವ ಮೂಲಕ ದಾಳಿ ಮಾಡಲಾಯಿತು. ಮಣಿಪುರ ವಿಚಾರದಲ್ಲಿ ರಾಹುಲ್ ಗಾಂಧಿ ಮಾಡಿದ್ದಾದರೂ ಏನು? ದೇಶದಲ್ಲಿ ನಡೆಯುತ್ತಿರುವ ಪ್ರತಿ ಪ್ರತಿಭಟನೆಯಲ್ಲಿ ಅನ್ನಿ ರಾಜಾ ಅವರ ಉಪಸ್ಥಿತಿಯನ್ನು ನಾವು ಕಾಣಬಹುದು. ಆದರೆ ಅಂತಹ ಪ್ರತಿಭಟನಾಕಾರರಲ್ಲಿ ಕಾಂಗ್ರೆಸ್‌ನ ಪ್ರಮುಖ ನಾಯಕ ರಾಹುಲ್ ಗಾಂಧಿಯನ್ನು ನಾವು ನೋಡಲು ಸಾಧ್ಯವಿಲ್ಲ' ಎಂದು ಪಿಣರಾಯಿ ಹೇಳಿದ್ದಾರೆ.

ಕುತೂಹಲದ ಅಂಶವೇನೆಂದರೆ, ಸಿಪಿಐ(ಎಂ) ಪ್ರಧಾನ ಕಾರ್ಯದರ್ಶಿ ಸೀತಾರಾಂ ಯೆಚೂರಿ ದೆಹಲಿಯಲ್ಲಿ ಇಂಡಿಯಾ ಮೈತ್ರಿಕೂಟದ ಪ್ರತಿಭಟನಾ ಸಮಾವೇಶದಲ್ಲಿ ಭಾಗವಹಿಸಿ ಕಾಂಗ್ರೆಸ್‌ ನಾಯಕರೊಂದಿಗೆ ವೇದಿಕೆ ಹಂಚಿಕೊಂಡ ಒಂದು ದಿನದ ಬಳಿಕ ಈ ಹೇಳಿಕೆ ಬಂದಿದೆ. ಸಿಪಿಐ (ಎಂ) ಅವರು ಭಾರತ ಮೈತ್ರಿಕೂಟದ ಭಾಗವಾಗಿದ್ದರೂ ಅದರ ಸಾಂಸ್ಥಿಕ ಭಾಗವಾಗಿರುವುದಿಲ್ಲ ಎಂದು ಈ ಹಿಂದೆಯೇ ಸ್ಪಷ್ಟಪಡಿಸಿತ್ತು.

ಬಿಜೆಪಿ ವಿರುದ್ಧ ಹೋರಾಟ ಮಾಡದ ರಾಹುಲ್ ಗಾಂಧಿಯನ್ನು ಪ್ರಶ್ನಿಸಿದ ಅವರು, ಅವರು ಎಲ್ಲಿಂದ ಬೇಕಾದರೂ ಸ್ಪರ್ಧಿಸಬಹುದು, ಅದನ್ನು ಅವರು ನಿರ್ಧರಿಸಬಹುದು. ಆದರೆ ಇದರ ಅನುಚಿತತೆಯ ಬಗ್ಗೆ ಇಡೀ ದೇಶವೇ ಚರ್ಚಿಸಬೇಕು. ಅವರು ನೇರವಾಗಿ ಬಿಜೆಪಿ ವಿರುದ್ಧ ಏಕೆ ಸ್ಪರ್ಧಿಸುತ್ತಿಲ್ಲ? ಎಂದು ಹೇಳಿದ್ದಾರೆ. ರಾಹುಲ್ ಗಾಂಧಿ ಮತ್ತು ಅನ್ನಿ ರಾಜಾ ಇಬ್ಬರೂ ವಯನಾಡ್ ಕ್ಷೇತ್ರದಿಂದ ಸ್ಪರ್ಧಿಸುತ್ತಿದ್ದಾರೆ. ಬಿಜೆಪಿಯು ಕೇರಳ ರಾಜ್ಯಾಧ್ಯಕ್ಷ ಕೆ ಸುರೇಂದ್ರನ್ ಅವರನ್ನು ಈ ಕ್ಷೇತ್ರದಿಂದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟದ (ಎನ್‌ಡಿಎ) ಅಭ್ಯರ್ಥಿಯಾಗಿ ಕಣಕ್ಕಿಳಿಸಿದೆ.

ಬಿಜೆಪಿಗರು ದೇಶಭಕ್ತರಲ್ಲ, ದೇಶದ್ರೋಹಿಗಳು, ಭಾರತಮಾತೆಯ ಕೊಂದರು: ರಾಹುಲ್‌ ಗಾಂಧಿ

2019 ರ ಲೋಕಸಭಾ ಚುನಾವಣೆಯಲ್ಲಿ, ರಾಹುಲ್ ಗಾಂಧಿ ಅವರು ವಯನಾಡ್‌ನಿಂದ 4.31 ಲಕ್ಷಕ್ಕೂ ಹೆಚ್ಚು ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು. 2019ರ ಲೋಕಸಭೆ ಚುನಾವಣೆಯಲ್ಲಿ ಕೇರಳದಲ್ಲಿ ದಾಖಲಾದ ಅತಿದೊಡ್ಡ ಅಂತರದ ಗೆಲುವು ಇದಾಗಿತ್ತು. ಎಲ್‌ಡಿಎಫ್‌ ಸ್ಪರ್ಧಿ ಪಿಪಿ ಸುನೀರ್‌ ಅವರನ್ನು ಸೋಲಿಸಿದ್ದರು. ರಾಹುಲ್‌ ಗಾಂಧಿ ಶೇ. 64.94ರಷ್ಟು ವೋಟ್‌ ಶೇರ್‌ ಪಡೆದಿದ್ದರು. ಎನ್‌ಡಿಎ ಬಿಡಿಜೆ(ಎಸ್) ನಾಯಕ ತುಷಾರ್ ವೆಲ್ಲಪಲ್ಲಿ ಅವರನ್ನು ಕಣಕ್ಕಿಳಿಸಿತ್ತು, ಅವರು ಕೇವಲ 78,000 ಮತಗಳನ್ನು ಗಳಿಸಿದರು, ಅದು ಕೇವಲ ಶೇಕಡಾ 7.25 ಮಾತ್ರ ಆಗಿತ್ತು.

ಅಮೇಥಿಗೆ ಆದ ಗತಿಯೇ ವಯನಾಡ್‌ಗೆ ಆಗಲಿದೆ: ಕೇಂದ್ರ ಸಚಿವೆ ಸ್ಮೃತಿ ಇರಾನಿ ಎಚ್ಚರಿಕೆ

 

Latest Videos
Follow Us:
Download App:
  • android
  • ios