Asianet Suvarna News Asianet Suvarna News

ರಾಹುಲ್‌ ಗಾಂಧಿಗೆ ಅಸ್ಸಾಂನಲ್ಲಿ ದೇಗುಲ ಪ್ರವೇಶಕ್ಕೆ ನಿರಾಕರಣೆ: ನಾನು ಯಾವ ಅಪರಾಧ ಮಾಡಿದ್ದೇನೆ ಎಂದ ‘ಕೈ’ ನಾಯಕ!

15ನೇ ಶತಮಾನದ ಅಸ್ಸಾಮಿ ಸಂತ ಮತ್ತು ವಿದ್ವಾಂಸರಾದ ಶ್ರೀಮಂತ ಶಂಕರದೇವ ಜನ್ಮಸ್ಥಳವಾದ ನಾಗಾಂವ್‌ನಲ್ಲಿರುವ ಬಟದ್ರವ ಸತ್ರ ದೇವಸ್ಥಾನಕ್ಕೆ ಭೇಟಿ ನೀಡದಂತೆ ಅಸ್ಸಾಂನ ಅಧಿಕಾರಿಗಳು ತಡೆಯುತ್ತಿದ್ದಾರೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆರೋಪಿಸಿದ್ದಾರೆ. 

rahul gandhi denied temple entry in assam only 1 person can enter today ash
Author
First Published Jan 22, 2024, 10:44 AM IST

ಹೊಸದಿಲ್ಲಿ (ಜನವರಿ 22, 2024): ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರ ಭಾರತ್ ಜೋಡೋ ನ್ಯಾಯ ಯಾತ್ರೆ ಮುಂದುವರಿದಿದೆ. ಸದ್ಯ, ಅಸ್ಸಾಂನಲ್ಲಿರೋ ರಾಹುಲ್‌ ಗಾಂಧಿ ತನ್ನನ್ನು ದೇವಸ್ಥಾನ ಪ್ರವೇಶಕ್ಕೆ ಅವಕಾಶ ನೀಡುತ್ತಿಲ್ಲ ಎಂದು ಆರೋಪಿಸಿದ್ದಾರೆ.

15ನೇ ಶತಮಾನದ ಅಸ್ಸಾಮಿ ಸಂತ ಮತ್ತು ವಿದ್ವಾಂಸರಾದ ಶ್ರೀಮಂತ ಶಂಕರದೇವ ಜನ್ಮಸ್ಥಳವಾದ ನಾಗಾಂವ್‌ನಲ್ಲಿರುವ ಬಟದ್ರವ ಸತ್ರ ದೇವಸ್ಥಾನಕ್ಕೆ ಭೇಟಿ ನೀಡದಂತೆ ಅಸ್ಸಾಂನ ಅಧಿಕಾರಿಗಳು ತಡೆಯುತ್ತಿದ್ದಾರೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಇಂದು ಆರೋಪಿಸಿದ್ದಾರೆ. 

ರಾಹುಲ್ ಪಾದಯಾತ್ರೆ ವೇಳೆ ಮೋದಿ, ಜೈ ಶ್ರೀರಾಮ್ ಘೋಷಣೆ: ಸಿಟ್ಟಿಗೆದ್ದು ಬಸ್‌ನಿಂದ ಇಳಿದು ಆಕ್ರೋಶ

ಇನ್ನು, ತಮ್ಮ ಮೇಲೆ ಹೇರಿರುವ ನಿರ್ಬಂಧಗಳನ್ನು ಪ್ರಶ್ನಿಸಿದ ರಾಹುಲ್‌ ಗಾಂಧಿ, ನಾವು ದೇವಾಲಯಕ್ಕೆ ಭೇಟಿ ನೀಡಲು ಬಯಸುತ್ತೇವೆ. ನಾನು ದೇವಾಲಯಕ್ಕೆ ಭೇಟಿ ನೀಡಲಾಗದಷ್ಟು ಯಾವ ಅಪರಾಧ ಮಾಡಿದ್ದೇನೆ? ಎಂದೂ ಕೇಳಿದ್ದಾರೆ. ಹಾಗೂ, ನಾವು ಯಾವುದೇ ಸಮಸ್ಯೆಗಳನ್ನು ಸೃಷ್ಟಿಸಲು ಬಯಸುವುದಿಲ್ಲ, ನಾವು ಕೇವಲ ದೇವಸ್ಥಾನದಲ್ಲಿ ಪ್ರಾರ್ಥನೆ ಮಾಡಲು ಬಯಸುತ್ತೇವೆ ಎಂದೂ ಹೇಳಿದರು.

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ಅಯೋಧ್ಯೆಯಲ್ಲಿ ರಾಮ ಮಂದಿರದ ಶಂಕುಸ್ಥಾಪನೆ ಸಮಾರಂಭದೊಂದಿಗೆ ಸಂಭಾವ್ಯ ಘರ್ಷಣೆಗಳ ಬಗ್ಗೆ ಕಳವಳ ವ್ಯಕ್ತಪಡಿಸಿ, ತಮ್ಮ 'ಭಾರತ್ ಜೋಡೋ ನ್ಯಾಯ್ ಯಾತ್ರೆ' ಮಾರ್ಗವನ್ನು ಮರುಪರಿಶೀಲಿಸುವಂತೆ ರಾಹುಲ್‌ ಗಾಂಧಿಯನ್ನು ನಿನ್ನೆ ಮನವಿ ಮಾಡಿದ್ದರು.

ಮೋದಿ, ಬಿಜೆಪಿ ಪಾಲಿಗೆ ಮಣಿಪುರ ಭಾರತದ ಭಾಗವಲ್ಲ: ರಾಹುಲ್ ಗಾಂಧಿ

ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ ರಾಹುಲ್‌ ಗಾಂಧಿ, ದೇವಾಲಯಕ್ಕೆ ಯಾರು ಭೇಟಿ ನೀಡಬೇಕೆಂದು ಪ್ರಧಾನಿ ನರೇಂದ್ರ ಮೋದಿಯವರು ಈಗ ನಿರ್ಧರಿಸುತ್ತಾರೆ ಎಂದು ಹೇಳಿದರು. ಹಾಗೂ, ಒಬ್ಬ ವ್ಯಕ್ತಿ ಮಾತ್ರ ದೇವಾಲಯಕ್ಕೆ ಪ್ರವೇಶಿಸಬಹುದು ಎಂದೂ ಹೇಳಿದ್ದು, ಪರೋಕ್ಷವಾಗಿ ಪ್ರಧಾನಿ ಮೋದಿಗೆ ಟಾಂಗ್ ನೀಡಿದ್ದಾರೆ. 

ಈ ಮಧ್ಯೆ, ನಿನ್ನೆಯ ಘಟನೆಯ ನಂತರ ಕಾಂಗ್ರೆಸ್ ನಾಯಕರು ಮತ್ತು ರಾಹುಲ್‌ ಗಾಂಧಿ ನಾಗಾಂವ್‌ನಲ್ಲಿ ಧರಣಿ ಪ್ರತಿಭಟನೆಯನ್ನು ಪ್ರಾರಂಭಿಸಿದರು. ರಾಮ ಮಂದಿರದ ಪ್ರತಿಷ್ಠಾಪನೆ ಮತ್ತು ಬಟದ್ರವದಲ್ಲಿರುವ ಶ್ರೀಮಂತ ಶಂಕರದೇವರ ಜನ್ಮಸ್ಥಳಕ್ಕೆ ಭೇಟಿ ನೀಡುವ ನಡುವೆ ಅನಗತ್ಯ ಸ್ಪರ್ಧೆಯ ಅಗತ್ಯವನ್ನು ಸಹ ಅಸ್ಸಾಂ ಸಿಎಂ ಹಿಮಂತ ಬಿಸ್ವಾಸ್‌ ಶರ್ಮಾ ಪ್ರಶ್ನಿಸಿದ್ದಾರೆ.

ಸಂಘರ್ಷದ ಘಟನೆಗಳು ಅಸ್ಸಾಂನ ಚಿತ್ರಣವನ್ನು ಋಣಾತ್ಮಕವಾಗಿ ಪರಿಣಾಮ ಬೀರಬಹುದು ಎಂದು ಕಳವಳ ವ್ಯಕ್ತಪಡಿಸಿದ ಸಿಎಂ ತಮ್ಮ ಪ್ಲ್ಯಾನ್‌ಗಳನ್ನು ಮರುಪರಿಶೀಲಿಸುವಂತೆ ರಾಹುಲ್‌ ಗಾಂಧಿಯನ್ನು ಮನವಿ ಮಾಡಿದರು.

ಟಿವಿ ಚಾನೆಲ್‌ಗಳು ಒಂದೆಡೆ ರಾಮಮಂದಿರ ಪ್ರಾಣ ಪ್ರತಿಷ್ಠಾ ಸಮಾರಂಭ ಹಾಗೂ ಮತ್ತೊಂದೆಡೆ ಮಹಾಪುರುಷ ಶ್ರೀಮಂತ ಶಂಕರದೇವರ ಜನ್ಮಸ್ಥಳಕ್ಕೆ ಭೇಟಿ ನೀಡುವುದರಿಂದ ರಾಮಮಂದಿರ ಮತ್ತು ಬಟದ್ರವ ಸತ್ರದ ನಡುವೆ ಪೈಪೋಟಿ ಇದೆ ಎಂಬ ಕಲ್ಪನೆಯನ್ನು ಹುಟ್ಟು ಹಾಕಬೇಡಿ ಎಂದು ನಾನು ರಾಹುಲ್ ಗಾಂಧಿಗೆ ಮನವಿ ಮಾಡುತ್ತೇನೆ. ಇದು ಅಸ್ಸಾಂಗೆ ಒಳ್ಳೆಯದಲ್ಲ ಎಂದೂ ಹಿಮಂತ ಬಿಸ್ವಾಸ್‌ ಶರ್ಮಾ ಹೇಳಿದ್ದಾರೆ.

ಇನ್ನೊಂದೆಡೆ, ಅಸ್ಸಾಂನಲ್ಲಿ ಭಾರತ್ ಜೋಡೋ ನ್ಯಾಯ್ ಯಾತ್ರೆಯ ಬೆಂಗಾವಲು ಪಡೆಗಳ ಮೇಲೆ "ಯೋಜಿತ ದಾಳಿ" ಎಂದು ಆರೋಪಿಸಿ ಕಾಂಗ್ರೆಸ್ ಇಂದು ಸಂಜೆ ರಾಷ್ಟ್ರವ್ಯಾಪಿ ಪ್ರತಿಭಟನೆಗಳನ್ನು ಘೋಷಿಸಿದೆ. 
 

Follow Us:
Download App:
  • android
  • ios