ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರನ್ನು ಭ್ರಷ್ಟರು ಎಂದು ಕರೆದ ರಾಹುಲ್ ಗಾಂಧಿ, ಅವರು ಶೀಘ್ರದಲ್ಲೇ ಜೈಲಿಗೆ ಹೋಗುತ್ತಾರೆ ಎಂದು ಹೇಳಿದ್ದಾರೆ. ಶರ್ಮಾ ಅವರು ಅಸ್ಸಾಂನ ಭೂಮಿಯನ್ನು ಕದಿಯುತ್ತಿದ್ದಾರೆ ಎಂದು ಆರೋಪಿಸಿದರು.
ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ತಮ್ಮನ್ನು ತಾವು ರಾಜ ಎಂದು ಭಾವಿಸಿದ್ದಾರೆ. ಮುಂದೊಂದು ದಿನ ಜೈಲಿಗೆ ಹೋಗುತ್ತಾರೆ. ಅವರನ್ನ ಉಳಿಸಲು ಪ್ರಧಾನಿ ಮೋದಿ ಅಮಿತ್ ಶಾಗೂ ಸಾಧ್ಯವಾಗುವುದಿಲ್ಲ ಎಂದು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಗುಡುಗಿದರು.
ಅಸ್ಸಾಂನ ಚೈಗಾಂವ್‌ನಲ್ಲಿ ಕಾಂಗ್ರೆಸ್ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಬಿಜೆಪಿ ಮತ್ತು ಆರ್‌ಎಸ್‌ಎಸ್ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಹಿಮಂತ್ ರಾಜನಂತೆ ವರ್ತಿಸುವ ಭ್ರಷ್ಟ ವ್ಯಕ್ತಿ:
ಒಂದು ಕಡೆ ಆರ್‌ಎಸ್‌ಎಸ್ ದ್ವೇಷ, ವಿಭಜನೆ ಮತ್ತು ಹೋರಾಟದ ಸಿದ್ಧಾಂತವನ್ನು ಹೊಂದಿದ್ದರೆ, ಮತ್ತೊಂದೆಡೆ ಕಾಂಗ್ರೆಸ್ ದ್ವೇಷವನ್ನು ನಿರ್ಮೂಲನೆ ಮಾಡುವ ಸಿದ್ಧಾಂತವನ್ನು ಹೊಂದಿದೆ ಎಂದು ಅವರು ಹೇಳಿದರು. ಈ ಸಂದರ್ಭದಲ್ಲಿ , ಅಸ್ಸಾಂ ಮುಖ್ಯಮಂತ್ರಿ ಜೈಲಿಗೆ ಹೋಗುತ್ತಾರೆ ಎಂದು ಅವರು ಹೇಳಿದರು , ರಾಜನಂತೆ ವರ್ತಿಸುವ ಭ್ರಷ್ಟ ವ್ಯಕ್ತಿ. ಶರ್ಮಾ ಅವರು ಅಸ್ಸಾಂನ ಭೂಮಿಯನ್ನು ಸೋಲಾರ್ ಪಾರ್ಕ್, ರೆಸಾರ್ಟ್ ಹೆಸರಿನಲ್ಲಿ ಕದಿಯುತ್ತಿದ್ದಾರೆ ಎಂದು ಆರೋಪಿಸಿದ ರಾಹುಲ್, ಅಸ್ಸಾಂನ ಜನರು ಇದಕ್ಕೆ ತಕ್ಕ ಪಾಠ ಕಲಿಸುತ್ತಾರೆ. ಮುಂದೆ ಕಾಂಗ್ರೆಸ್ ಸಿಂಹ ಒಂದು ದಿನ ಶರ್ಮಾ ಅವರನ್ನು ಜೈಲಿಗೆ ಕಳುಹಿಸುತ್ತದೆ, ಅವರನ್ನು ಉಳಿಸಲು ಪ್ರಧಾನಿ ಮೋದಿ ಮತ್ತು ಅಮಿತ್ ಶಾ ಅವರಿಗೂ ಸಾಧ್ಯವಾಗುವುದಿಲ್ಲ ಎಂದು ತೀವ್ರ ವಾಗ್ದಾಳಿ ನಡೆಸಿದರು.
ಹಿಮಂತ ಬಿಸ್ವಾ ಶರ್ಮಾ ತಿರುಗೇಟು:
ರಾಹುಲ್ ಗಾಂಧಿಯವರ ಈ ಹೇಳಿಕೆಗೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿರುವ ಅಸ್ಸಾಂ ಸಿಎಂ, ರಾಹುಲ್ ಗಾಂಧಿ ನನ್ನನ್ನು ಜೈಲಿಗೆ ಕಳುಹಿಸುವ ಬಗ್ಗೆ ಮಾತನಾಡುತ್ತಾರೆ, ಆದರೆ ಅವರೇ ಜಾಮೀನಿನ ಮೇಲೆ ಹೊರಗಿದ್ದಾರೆ ಎಂಬುದನ್ನು ಮರೆತಿದ್ದಾರೆ. ಅಸ್ಸಾಂನ ಆತಿಥ್ಯವನ್ನು ಆನಂದಿಸಿ ಎಂದು ವ್ಯಂಗ್ಯವಾಡಿದ್ದಾರೆ.
ಬಿಹಾರದ ಮತದಾರರ ಪಟ್ಟಿ ವಿವಾದ: ಇದೇ ವೇಳೆ, ಬಿಹಾರದಲ್ಲಿ ಮತದಾರರ ಪಟ್ಟಿಯಿಂದ ಲಕ್ಷಾಂತರ ಜನರನ್ನು ತೆಗೆದುಹಾಕಲಾಗುತ್ತಿದೆ ಎಂದು ರಾಹುಲ್ ಆರೋಪಿಸಿದ್ದಾರೆ. 'ಬಿಜೆಪಿ ಮತ್ತು ಚುನಾವಣಾ ಆಯೋಗ ಮಹಾರಾಷ್ಟ್ರ ಚುನಾವಣೆ ಕದ್ದಿದೆ. ಬಿಹಾರದಲ್ಲೂ ಅದೇ ರೀತಿ ಮಾಡಲು ಪ್ರಯತ್ನಿಸುತ್ತಿದ್ದಾರೆ. ಬಡವರು, ಕಾರ್ಮಿಕರು, ರೈತರು ಮತ್ತು ಕಾಂಗ್ರೆಸ್-ಆರ್‌ಜೆಡಿ ಮತದಾರರನ್ನು ಪಟ್ಟಿಯಿಂದ ತೆಗೆಯಲಾಗುತ್ತಿದೆ. ಇದರ ವಿರುದ್ಧ ನಾವು ಪ್ರತಿಭಟಿಸುತ್ತೇವೆ ಎಂದು ಹೇಳಿದ್ದಾರೆ. ರಾಹುಲ್ ಗಾಂಧಿಯವರ ಈ ಹೇಳಿಕೆಗಳು ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿವೆ.


