Breaking: ಮೋದಿ ಸರ್‌ನೇಮ್ ಕೇಸ್: ಗುಜರಾತ್ ಹೈಕೋರ್ಟ್ ತೀರ್ಪಿನ ವಿರುದ್ಧ ಸುಪ್ರೀಂಕೋರ್ಟ್ ಮೊರೆ ಹೋದ ರಾಹುಲ್ ಗಾಂಧಿ
2019 ರ ಮಾನನಷ್ಟ ಮೊಕದ್ದಮೆಯಲ್ಲಿ ತಮ್ಮ ಶಿಕ್ಷೆಯನ್ನು ತಡೆಹಿಡಿಯಲು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರ ಮನವಿಯನ್ನು ಗುಜರಾತ್ ಹೈಕೋರ್ಟ್ ತಿರಸ್ಕರಿಸಿದ ಹಿನ್ನೆಲೆ ಈ ಆದೇಶದ ವಿರುದ್ಧ ಸುಪ್ರೀಂಕೋರ್ಟ್ ಮೊರೆ ಹೋಗಿದ್ದಾರೆ.
ನವದೆಹಲಿ (ಜುಲೈ 15, 2023): ಮೋದಿ ಸರ್‌ನೇಮ್ ಕೇಸ್‌ನಲ್ಲಿ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ಎದುರಿಸುತ್ತಿರುವ ಕಾಂಗ್ರೆಸ್ ನಾಯಕ ಹಾಗೂ ಮಾಜಿ ಸಂಸದ ರಾಹುಲ್ ಗಾಂಧಿ ಈಗ ಸುಪ್ರೀಂಕೋರ್ಟ್ ಮೊರೆ ಹೋಗಿದ್ದಾರೆ. ರಾಹುಲ್ ಗಾಂಧಿಗೆ ವಿಧಿಸಿದ್ದ 2 ವರ್ಷ ಜೈಲು ಶಿಕ್ಷೆ ತೀರ್ಪನ್ನು ತಡೆ ಹಿಡಿಯಲು ಗುಜರಾತ್ ಹೈಕೋರ್ಟ್ ತಿರಸ್ಕರಿಸಿತ್ತು. ಈ ಹಿನ್ನೆಲೆ ರಾಹುಲ್ ಗಾಂಧಿ ಈಗ ಸರ್ವೋಚ್ಛ ನ್ಯಾಯಾಲಯದ ಮೊರೆ ಹೋಗಿದ್ದಾರೆ.
2019 ರ ಮಾನನಷ್ಟ ಮೊಕದ್ದಮೆಯಲ್ಲಿ ತಮ್ಮ ಶಿಕ್ಷೆಯನ್ನು ತಡೆಹಿಡಿಯಲು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರ ಮನವಿಯನ್ನು ಗುಜರಾತ್ ಹೈಕೋರ್ಟ್ ತಿರಸ್ಕರಿಸಿದ ನಂತರ ಸುಪ್ರೀಂ ಕೋರ್ಟ್‌ನಲ್ಲಿ ಈ ತೀರ್ಪಿನ ವಿರುದ್ಧ ರಾಹುಲ್ ಗಾಂಧಿ ಅರ್ಜಿ ಸಲ್ಲಿಸಿದರು. ಇದಕ್ಕೂ ಮುನ್ನ ಗುಜರಾತ್ ಹೈಕೋರ್ಟ್ ತನ್ನ ಶಿಕ್ಷೆಗೆ ತಡೆ ಕೋರಿ ರಾಹುಲ್ ಗಾಂಧಿ ಸಲ್ಲಿಸಿದ್ದ ಮನವಿಯನ್ನು ವಜಾಗೊಳಿಸಿತ್ತು.
ಇದನ್ನು ಓದಿ: ಸಂಸತ್ ಸ್ಥಾನ ಕಳ್ಕೊಂಡ ರಾಹುಲ್ ಗಾಂಧಿಗೆ ಈಗ ಹೊಸ ಪಾಸ್‌ಪೋರ್ಟ್ ಪಡೆಯಲೂ ಸಂಕಷ್ಟ!
2019 ರ ಕರ್ನಾಟಕ ಚುನಾವಣಾ ರ‍್ಯಾಲಿಯಲ್ಲಿ ಮೋದಿ ಎಂಬ ಉಪನಾಮದ ಬಗ್ಗೆ ಮಾಡಿದ ಹೇಳಿಕೆಗಳ ನಂತರ ಬಿಜೆಪಿ ಗುಜರಾತ್ ಶಾಸಕ ಪೂರ್ಣೇಶ್ ಮೋದಿ ಅವರು ರಾಹುಲ್ ಗಾಂಧಿ ವಿರುದ್ಧ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯನ್ನು ದಾಖಲಿಸಿದ್ದಾರೆ. ನಂತರ, ಸೂರತ್ ನ್ಯಾಯಾಲಯವು ರಾಹುಲ್ ಗಾಂಧಿಯನ್ನು ಅಪರಾಧಿ ಎಂದು ಘೋಷಿಸಿತು ಮತ್ತು ದಂಡದ ಜೊತೆಗೆ ಎರಡು ವರ್ಷಗಳ ಶಿಕ್ಷೆಯನ್ನು ವಿಧಿಸಿತು. ಸೂರತ್ ಜಿಲ್ಲಾ ನ್ಯಾಯಾಲಯ ಮತ್ತು ಗುಜರಾತ್ ಹೈಕೋರ್ಟುಗಳು ಸಹ ರಾಹುಲ್ ಗಾಂಧಿಯನ್ನು ಖಂಡಿಸುವುದರ ಜೊತೆಗೆ ಯಾವುದೇ ವಿನಾಯತಿ ನೀಡಲು ಮತ್ತು ಶಿಕ್ಷೆಯನ್ನು ರದ್ದುಗೊಳಿಸಲು ನಿರಾಕರಿಸಿವೆ.
ಈ ಮಧ್ಯೆ, ಶಿಕ್ಷೆಯನ್ನು ಪ್ರಶ್ನಿಸುವ ಸಲುವಾಗಿ ರಾಹುಲ್ ಗಾಂಧಿ ಅವರ ತಂಡವು ಸುಪ್ರೀಂ ಕೋರ್ಟ್‌ನ ಬೇಸಿಗೆ ರಜೆಯ ಅವಧಿಯ ಮುಕ್ತಾಯಕ್ಕಾಗಿ ಕಾಯುತ್ತಿತ್ತು. ಈ ಮಧ್ಯೆ, ಪೂರ್ಣೇಶ್ ಮೋದಿ ಅವರು ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ್ದು, ರಾಹುಲ್ ಗಾಂಧಿ ಅಥವಾ ಯಾವುದೇ ಸಂಬಂಧಿತ ಪಕ್ಷವು ಗುಜರಾತ್ ಹೈಕೋರ್ಟ್‌ನ ತೀರ್ಪನ್ನು ಪ್ರಶ್ನಿಸಿದಾಗ ತಮ್ಮ ವಾದವನ್ನೂ ಆಲಿಸಬೇಕು ಎಂದು ಒತ್ತಾಯಿಸಿದ್ದಾರೆ. ಪೂರ್ಣೇಶ್ ಮೋದಿ ಅವರಿಗೆ ತಮ್ಮ ಪರ ವಾದ ಮಂಡಿಸಲು ಅವಕಾಶ ನೀಡದೆ ನ್ಯಾಯಾಲಯ ಯಾವುದೇ ನಿರ್ಧಾರ ತೆಗೆದುಕೊಳ್ಳಬಾರದು ಎಂದು ಕೇವಿಯಟ್ ಒತ್ತಿ ಹೇಳಿದೆ.
ಇದನ್ನೂ ಓದಿ: ಹೇಳಿಕೆಗಳು ಎಲ್ಲೆ ಮೀರಬಾರದು: ರಾಹುಲ್ ಗಾಂಧಿಗೆ ಹೈಕೋರ್ಟ್ ಸಲಹೆ
ಮೋದಿ ಉಪನಾಮ ಮಾನನಷ್ಟ ಪ್ರಕರಣ
ಗುಜರಾತ್‌ನ ಬಿಜೆಪಿ ಶಾಸಕ ಪೂರ್ಣೇಶ್ ಮೋದಿ ಅವರು 2019 ರಲ್ಲಿ ಸಲ್ಲಿಸಿದ ಪ್ರಕರಣದಲ್ಲಿ ಭಾರತೀಯ ದಂಡ ಸಂಹಿತೆ (IPC) ಸೆಕ್ಷನ್ 499 ಮತ್ತು 500 (ಕ್ರಿಮಿನಲ್ ಮಾನನಷ್ಟ) ಅಡಿಯಲ್ಲಿ ದೋಷಾರೋಪಣೆ ಮಾಡಿದ ನಂತರ ಮಾರ್ಚ್ 23 ರಂದು ಸೂರತ್‌ನ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯವು ರಾಹುಲ್ ಗಾಂಧಿಗೆ ಎರಡು ವರ್ಷಗಳ ಜೈಲು ಶಿಕ್ಷೆ ವಿಧಿಸಿತು. "ಎಲ್ಲಾ ಕಳ್ಳರು ಮೋದಿಯನ್ನು ಸಾಮಾನ್ಯ ಉಪನಾಮವನ್ನಾಗಿ ಮಾಡಿಕೊಂಡರೆ ಹೇಗೆ?" ಎಂಬ ರಾಹುಲ್ ಗಾಂಧಿ ಅವರ ಹೇಳಿಕೆಗೆ ಅವರ ವಿರುದ್ಧ ಶಾಸಕರು ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು. ಏಪ್ರಿಲ್ 13, 2019 ರಂದು ಕರ್ನಾಟಕದ ಕೋಲಾರದಲ್ಲಿ ಚುನಾವಣಾ ರ‍್ಯಾಲಿಯಲ್ಲಿ ಅವರು ಈ ಹೇಳಿಕೆ ನೀಡಿದ್ದರು.
ಈ ಆದೇಶವನ್ನು ರಾಹುಲ್ ಗಾಂಧಿಯವರು ಸೂರತ್‌ನ ಸೆಷನ್ಸ್ ನ್ಯಾಯಾಲಯದಲ್ಲಿ ಪ್ರಶ್ನಿಸಿ, ಶಿಕ್ಷೆಗೆ ತಡೆ ಕೋರಿ ಅರ್ಜಿ ಸಲ್ಲಿಸಿದರು. ಅದರೆ, ಅವರಿಗೆ ಜಾಮೀನು ನೀಡಿದರೂ ಏಪ್ರಿಲ್ 20 ರಂದು ನ್ಯಾಯಾಲಯವು ಶಿಕ್ಷೆಗೆ ತಡೆ ನೀಡಲು ನಿರಾಕರಿಸಿತು. ನಂತರ ಅವರು ಹೈಕೋರ್ಟ್ ಮೊರೆ ಹೋಗಿದ್ದರು.
ಇದನ್ನೂ ಓದಿ: ಮೋದಿ ಸರ್‌ನೇಮ್ ಕೇಸ್: ಜೈಲು ಶಿಕ್ಷೆಗೆ ತಡೆ ಕೋರಿ ಹೈಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿದ ರಾಹುಲ್ ಗಾಂಧಿ