ನಿರೀಕ್ಷಿತ ಫಲಿತಾಂಶ ಬರದಿದ್ದರೆ ರಾಹುಲ್ ಗಾಂಧಿ ಹಿಂದೆ ಸರಿಯವುದು ಒಳಿತು, ಪ್ರಶಾಂತ್ ಕಿಶೋರ್!

10 ವರ್ಷದಲ್ಲಿ ರಾಹುಲ್ ಗಾಂಧಿ ಹಲವು ಪ್ರಯತ್ನ ಮಾಡಿ ಯಶಸ್ಸು ಕಂಡಿಲ್ಲ. ಹೀಗಿರುವಾಗಿ ಬ್ರೇಕ್ ತೆಗೆದುಕೊಳ್ಳುವುದರಿಂದ ತಪ್ಪಿಲ್ಲ ಎಂದು ಪ್ರಶಾಂತ್ ಕಿಶೋರ್ ಹೇಳಿದ್ದಾರೆ. ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್‌ಗೆ ರಾಹುಲ್ ಗಾಂಧಿ ನೀಡಿದ ಮಹತ್ವದ ಸಲಹೆ ಏನು?
 

Rahul Gandhi Should take break from politics if Congress does not get desired election result says Prashant Kishor ckm

ನವದೆಹಲಿ(ಏ.08) ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ನಿರೀಕ್ಷಿತ ಫಲಿತಾಂಶ ಪಡೆಯುವಲ್ಲಿ ವಿಫಲವಾದರೆ ರಾಹುಲ್ ಗಾಂಧಿ ಕಾಂಗ್ರೆಸ್ ನಾಯಕತ್ವದಿಂದ ಹಿಂದೆ ಸರಿಯುವುದರಲ್ಲಿ ತಪ್ಪಿಲ್ಲ ಎಂದು ಚುನಾವಣಾ ತಂತ್ರಗಾರ ಪ್ರಶಾಂತ್ ಕಿಶೋರ್ ಹೇಳಿದ್ದಾರೆ. ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಪ್ರಶಾಂತ್ ಕಿಶೋರ್ ಕಾಂಗ್ರೆಸ್ ಹಾಗೂ ರಾಹುಲ್ ಗಾಂಧಿಗೆ ಕೆಲ ಮಹತ್ವದ ಸಲಹೆ ನೀಡಿದ್ದಾರೆ. ಪ್ರಮುಖವಾಗಿ ಕಳದ 10 ವರ್ಷದಲ್ಲಿ ರಾಹುಲ್ ಗಾಂಧಿ ಹಲವು ಪ್ರಯತ್ನ ಮಾಡಿದ್ದಾರೆ. ಆದರೆ ಯಾವೂದು ಕೈಗೂಡಿಲ್ಲ. ಹೀಗಾಗಿ ಆತ್ಮಾವಲೋಕನ ಮಾಡಿಕೊಳ್ಳುವುದು ಉತ್ತಮ ಎಂದು ಪ್ರಶಾಂತ್ ಕಿಶೋರ್ ಹೇಳಿದ್ದಾರೆ.

ಕಳೆದ 10 ವರ್ಷದಿಂದ  ರಾಹುಲ್ ಗಾಂಧಿ ಕೆಲಸ ಮಾಡಿದ್ದಾರೆ. ಆದರೆ ಯಾವುದೇ ರೀತಿಯ ಯಶಸ್ಸು ಕಂಡಿಲ್ಲ. ಹೀಗಿರುವಾಗ ರಾಜಕೀಯಿಂದ ಬ್ರೇಕ್ ತೆಗೆದುಕೊಳ್ಳುವುದರಲ್ಲಿ ತಪ್ಪೇನಿಲ್ಲ. ರಾಜಕೀಯಿಂದ ಹಿಂದೆ ಸರಿದು ಬೇರೊಬ್ಬ ಉತ್ತಮ ನಾಯಕನಿಗೆ ದಾರಿ ಮಾಡಿಕೊಡುವುದು ಒಳಿತು. ಮುಂದಿನ 5 ವರ್ಷ ಆತ ಪಕ್ಷವನ್ನು ಯಶಸ್ವಿಯಾಗಿ ಮುನ್ನಡೆಸಲು ಎಲ್ಲಾ ನೆರವು ನೀಡಬೇಕು. ಈ ಕೆಲಸವನ್ನು ಸೋನಿಯಾ ಗಾಂಧಿ ಮಾಡಿದ್ದರು ಎಂದು ಪ್ರಶಾಂತ್ ಕಿಶೋರ್ ಹೇಳಿದ್ದಾರೆ.

ಲೋಕ ಚುನಾವಣೆ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನಂ.1 ಪಕ್ಷವಾಗಲಿದೆ: ಚುನಾವಣಾ ತಂತ್ರಜ್ಞ ಪ್ರಶಾಂತ್ ಕಿಶೋರ್

ರಾಜೀವ್ ಗಾಂಧಿ ಹತ್ಯೆ ಬಳಿಕ ಸೋನಿಯಾ ಗಾಂಧಿ ಮೇಲೆ ಒತ್ತಡ ಹೆಚ್ಚಿತ್ತು. ಆದರೆ ಸೋನಿಯಾ ಗಾಂಧಿ ರಾಜಕೀಯದಿಂದ ದೂರ ಉಳಿದರು. ಸುದೀರ್ಘ ಬ್ರೇಕ್ ತೆಗೆದುಕೊಂಡಿದ್ದರು. 1991ರಲ್ಲಿ ಪಿವಿ ನರಸಿಂಹ ರಾವ್ ಕಾಂಗ್ರೆಸ್ ಪಕ್ಷವನ್ನು ಮುನ್ನಡೆಸಿದ್ದರು. ಈ ಕೆಲಸವನ್ನು ರಾಹುಲ್ ಗಾಂಧಿ ಮಾಡಬೇಕು ಎಂದು ಪ್ರಶಾಂತ್ ಕಿಶೋರ್ ಹೇಳಿದ್ದಾರೆ.

ಇಲ್ಲಿ ಪ್ರಮುಖ ಸಮಸ್ಯೆ ಎಂದರೆ ರಾಹುಲ್ ಗಾಂಧಿ ತನಗೆಲ್ಲಾ ಗೊತ್ತಿದೆ ಎಂದು ತಿಳಿದುಕೊಂಡಿದ್ದಾರೆ. ಹೀಗಾಗಿ ರಾಹುಲ್ ಗಾಂಧಿಗೆ ಸಲಹೆ ನೀಡಲು ಯಾರು ಮುಂದಾಗುತ್ತಿಲ್ಲ. 2019ರಲ್ಲಿ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ ರಾಹುಲ್ ಗಾಂಧಿ ಬೇರೆಯವರಿಗೆ ಅವಕಾಶ ನೀಡುವಂತೆ ಹೇಳಿದ್ದರು. ಆದರೆ ಎಲ್ಲಾ ಕ್ಷೇತ್ರದಲ್ಲೂ ರಾಹುಲ್ ಗಾಂಧಿ ಕೈಯಾಡಿಸುವ ಬದಲು ಹೊಸ ಪ್ರಬಲ ನಾಯಕರನ್ನು ಬೆಳೆಸಿ ಅವರು ಪಕ್ಷ ಮುನ್ನಡೆಸುವಂತೆ ಮಾಡಬೇಕು. ಇದರಲ್ಲಿ ಹಸ್ತಕ್ಷೇಪ ಮಾಡಬಾರದು ಎಂದು ಪ್ರಶಾಂತ್ ಕಿಶೋರ್ ಸಲಹೆ ನೀಡಿದ್ದಾರೆ.

ಕಳೆದ 10 ವರ್ಷದಲ್ಲಿ 4ನೇ ಬಾರಿ ನಿತೀಶ್‌ ಪಲ್ಟಿ; 2025ರ ವಿಧಾನಸಭೆ ಚುನಾವಣೇಲಿ 20 ಸೀಟೂ ಗೆಲ್ಲಲ್ಲ: ಪ್ರಶಾಂತ್ ಕಿಶೋರ್

ಕಾಂಗ್ರೆಸ್‌ನಲ್ಲಿ ಹಲವು ನಾಯರು ಯಾವುದೇ ಒಂದು ನಿರ್ಧಾರ ತೆಗೆದುಕೊಳ್ಳಲು ಅವಕಾಶವಿಲ್ಲ. ಸೀಟು ಹಂಚಿಕೆ ಕೂಡ ಕೆಲವೊಬ್ಬರು ನಿರ್ಧರಿಸುತ್ತಾರೆ. ಇದರಿಂದ ಪಕ್ಷ ಬೆಳೆಯಲು ಸಾಧ್ಯವಿಲ್ಲ. ಸಮಸ್ಯೆಗಳೇ ಹೆಚ್ಚಾಗುತ್ತದೆ ಎಂದು ಕಿಶೋರ್ ಹೇಳಿದ್ದಾರೆ.
 

Latest Videos
Follow Us:
Download App:
  • android
  • ios