2 ವರ್ಷ ಜೈಲು ಶಿಕ್ಷೆ ಪ್ರಶ್ನಿಸಿ ಇಂದು ರಾಹುಲ್ ಗಾಂಧಿ ಮೇಲ್ಮನವಿ: ಸೂರತ್ ಸೆಶನ್ಸ್ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಕೆ
2 ವರ್ಷ ಜೈಲು ಶಿಕ್ಷೆ ಪ್ರಶ್ನಿಸಿ ಇಂದು ರಾಹುಲ್ ಮೇಲ್ಮನವಿ ಸಲ್ಲಿಕೆ ಮಾಡಲಿದ್ದು, ಸೂರತ್‌ನ ಸೆಶನ್ಸ್ ಕೋರ್ಟ್‌ನಲ್ಲಿ ಮೇಲ್ಮನವಿ ಅರ್ಜಿ ಸಲ್ಲಿಕೆ ಮಾಡಲಿದ್ದಾರೆ. ಈ ವೇಳೆ ರಾಹುಲ್ ಗಾಂಧಿ ಹಾಜರಿರಲಿದ್ದು, ಈ ವೇಳೆ ಹಿರಿಯರು ಸಾಥ್ ಕೊಡಲಿದ್ದಾರೆ ಎಂದು ತಿಳಿದುಬಂದಿದೆ.
ಸೂರತ್ (ಏಪ್ರಿಲ್ 3, 2023): ಮೋದಿ ಉಪನಾಮ ಟೀಕೆ ಪ್ರಕರಣದಲ್ಲಿ ತಮಗೆ 2 ವರ್ಷ ಜೈಲು ಶಿಕ್ಷೆ ವಿಧಿಸಿದ ಸ್ಥಳೀಯ ಮ್ಯಾಜಿಸ್ಪ್ರೇಟ್ ಕೋರ್ಟ್‌ನ ತೀರ್ಪನ್ನು ಪ್ರಶ್ನಿಸಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸೋಮವಾರ ಮೇಲ್ಮನವಿ ಸಲ್ಲಿಸಲಿದ್ದಾರೆ. ಮ್ಯಾಜಿಸ್ಪ್ರೇಟ್ ಕೋರ್ಟ್‌ನ ಆದೇಶವನ್ನು ಪ್ರಶ್ನಿಸಿ ಸೂರತ್‌ನ ಸೆಶನ್ಸ್ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಲಾಗುತ್ತಿದ್ದು, ಈ ವೇಳೆ ಸ್ವತಃ ರಾಹುಲ್ ಗಾಂಧಿ ಹಾಜರಿರಲಿದ್ದಾರೆ. ಈ ವೇಳೆ ಗುಜರಾತ್‌ನ ಹಲವು ಹಿರಿಯ ಕಾಂಗ್ರೆಸ್ ನಾಯಕರು ಕೂಡಾ ಉಪಸ್ಥಿತರಿರಲಿದ್ದಾರೆ.
2019ರ ಲೋಕಸಭಾ ಚುನಾವಣೆಯಲ್ಲಿ (Lok Sabha Election) ಕೋಲಾರದಲ್ಲಿ (Kolar) ಪ್ರಚಾರ ಸಭೆಯಲ್ಲಿ ಭಾಗಿಯಾಗಿದ್ದ ರಾಹುಲ್ ಗಾಂಧಿ (Rahul Gandhi) , ಕಳ್ಳರೆಲ್ಲಾ ಮೋದಿ (Modi) ಎಂಬ ಹೆಸರನ್ನೇ ಏಕೆ ಇಟ್ಟುಕೊಂಡಿರುತ್ತಾರೆ ಎಂದು ವ್ಯಂಗ್ಯವಾಡಿದ್ದರು. ಈ ಹೇಳಿಕೆ ವಿರುದ್ಧ ಗುಜರಾತ್‌ನ (Gujarat) ಬಿಜೆಪಿ ಶಾಸಕ (BJP MLA) ಪೂರ್ಣೇಶ್ ಮೋದಿ (Purnesh Modi) ಮಾನನಷ್ಟ ಪ್ರಕರಣ (Defamation Case) ದಾಖಲಿಸಿದ್ದರು.
ಇದನ್ನು ಓದಿ: From the India Gate: ಮಲಯಾಳಂ ನಟನ ಇನ್ನೋಸೆಂಟ್ ರಾಜಕೀಯ; ತೆಲಂಗಾಣದಲ್ಲಿ ಉಪ್ಪಿನಕಾಯಿಯಾದ ‘ಕಮಲ’..!
ಈ ಕುರಿತು ಸುದೀರ್ಘ ವಿಚಾರಣೆ ನಡೆಸಿದ್ದ ನ್ಯಾಯಾಲಯ (Court) ಮಾರ್ಚ್ 23ರಂದು ನೀಡಿದ ತನ್ನ ತೀರ್ಪಿನಲ್ಲಿ ರಾಹುಲ್ ಗಾಂಧಿಯನ್ನು ದೋಷಿಯೆಂದು ಘೋಷಿಸಿ 2 ವರ್ಷ ಜೈಲು ಶಿಕ್ಷೆ ಮತ್ತು 15000 ರೂ. ದಂಡ ವಿಧಿಸಿತ್ತು. ಆದರೆ ತಕ್ಷಣವೇ ರಾಹುಲ್‌ಗೆ ಜಾಮೀನು ನೀಡುವುದರ ಜೊತೆಗೆ ಈ ತೀರ್ಪಿನ ವಿರುದ್ಧ ಮೇಲ್ಮನವಿ ಸಲ್ಲಿಸಲು ಅನುವಾಗುವಂತೆ ಶಿಕ್ಷೆ ಜಾರಿಯನ್ನು 30 ದಿನ ಅಮಾನತು ಮಾಡಿತ್ತು. ಅದರ ಬೆನ್ನಲ್ಲೇ ಮಾರ್ಚ್ 24ರಂದು ಜನಪ್ರತಿನಿಧಿ ಕಾಯ್ದೆಯಡಿ ರಾಹುಲ್ ಗಾಂಧಿ ಅವರ ಲೋಕಸಭಾ ಸದಸ್ಯತ್ವವನ್ನು (Lok Sabha Membership) ಲೋಕಸಭೆಯ ಸ್ಪೀಕರ್ (Speaker) ಅನರ್ಹಗೊಳಿಸಿದ್ದರು.
ಇದೇ ಹೇಳಿಕೆ ಸಂಬಂಧ ಬಿಹಾರದ ಬಿಜೆಪಿ ನಾಯಕ ಸುಶೀಲ್ ಕುಮಾರ್ ಮೋದಿ (Sushil Kumar Modi) ಕೂಡಾ ರಾಹುಲ್ ವಿರುದ್ಧ ಇತ್ತೀಚೆಗೆ ಪ್ರಕರಣ ದಾಖಲಿಸಿದ್ದಾರೆ. ಈ ಪ್ರಕರಣ ಸಂಬಂಧ ಏಪ್ರಿಲ್ 12ರಂದು ನ್ಯಾಯಾಲಯಕ್ಕೆ ಹಾಜರಾಗುವಂತೆ ಕೋರ್ಟ್ ರಾಹುಲ್‌ಗೆ ಸೂಚಿಸಿದೆ.
ಇದನ್ನೂ ಓದಿ: ಶಿಕ್ಷೆ ಪ್ರಶ್ನಿಸಲು ರಾಹುಲ್ ಗಾಂಧಿ ರೆಡಿ: ಮೋದಿ ಉಪನಾಮ ಟೀಕೆ ಕೇಸಲ್ಲಿ ಪುನರ್‌ಪರಿಶೀಲನಾ ಅರ್ಜಿ ಸಲ್ಲಿಸಲು ಸಿದ್ಧತೆ