Asianet Suvarna News Asianet Suvarna News

Raksha Bandhan ರಾಖಿ ಹಬ್ಬಕ್ಕೆ ಶುಭಕೋರಿ ಹಳೆ ನೆನಪುಗಳ ತೆರೆದಿಟ್ಟ ರಾಹುಲ್ ಗಾಂಧಿ!

ಭಾರತದಲ್ಲಿ ರಕ್ಷಾ ಬಂಧನ ಹಬ್ಬ ಸಂಭ್ರಮದಿಂದ ಆಚರಿಸಲಾಗಿದೆ.  ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸಮಸ್ತ ಭಾರತೀಯರಿಗೆ ರಾಖಿ ಹಬ್ಬದ ಶುಭಾಶಯ ಹೇಳಿದ್ದಾರೆ.  ಇದೇ ವೇಳೆ ರಾಹುಲ್ ಗಾಂಧಿ ತಮ್ಮ ರಕ್ಷಾ ಬಂಧನ ಹಬ್ಬ ಆಚರಣೆಯ ನೆನಪುಗಳನ್ನು ಬಿಚ್ಚಿಟ್ಟಿದ್ದಾರೆ.
 
Rahul Gandhi wish Raksha Bandhan and celebrate rakhi with Priyanaka vadra heartwarming pictures viral ckm
Author
Bengaluru, First Published Aug 11, 2022, 6:07 PM IST

ನವದೆಹಲಿ(ಆ.11): ಅಣ್ಣ ತಿಂಗಿಯರ ಸಂಬಂಧ ಗಟ್ಟಿಗೊಳಿಸುವ ರಕ್ಷಾ ಬಂಧನ ಹಬ್ಬಕ್ಕೆ ವಿಶೇಷ ಸ್ಥಾನ ಹಾಗೂ ಮಹತ್ವವಿದೆ. ಇಂದು ದೇಶಾದ್ಯಂತ ರಕ್ಷಾ ಬಂಧನ ಹಬ್ಬ ಆಚರಿಸಲಾಗುತ್ತಿದೆ. ಈ ರಾಖಿ ಹಬ್ಬಕ್ಕೆ ದೇಶದ ಜನತೆಗೆ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಹಲವು ಗಣ್ಯರು ಶುಭಕೋರಿದ್ದಾರೆ. ಇದೇ ವೇಳೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ದೇಶದ ಜನತೆಗೆ ವಿಶೇವಾಗಿ ಶುಭಕೋರಿದ್ದಾರೆ. ರಕ್ಷಾ ಬಂಧನ ಪವಿತ್ರ ಸಹೋದರ ಸಹೋದರಿಯರ ಹಬ್ಬ ಎಂದು ರಾಹುಲ್ ಗಾಂಧಿ ಬಣ್ಣಿಸಿದ್ದಾರೆ. ಪ್ರಿಯಾಂಗಾ ಗಾಂಧಿ ವಾದ್ರಾ ಜೊತೆಗಿನ ರಾಖಿ ಹಬ್ಬದ ದಿನಗಳು, ಮಾಜಿ ಪ್ರಧಾನಿ ಹಾಗೂ ತಂದೆ ರಾಜೀವ್ ಗಾಂಧಿ, ಅಜ್ಜಿ ಇಂದಿರಾ ಗಾಂಧಿ ಜೊತೆಗಿನ ಕೆಲ ಫೋಟೋಗಳನ್ನು ರಾಹುಲ್ ಗಾಂಧಿ ಹಂಚಿಕೊಂಡಿದ್ದಾರೆ. 

ಅಣ್ಮ ತಂಗಿಯರ ಪವಿತ್ರ ಸಂಬಂಧದ ಅತ್ಯಂತ ಸುಂದರ ಹಬ್ಬ ರಕ್ಷಾ ಬಂಧನ. ರಾಖಿ ಹಬ್ಬವನ್ನು ದೇಶಾದ್ಯಂತ ಅತ್ಯಂತ ಗೌರವ ಹಾಗೂ ವಿಜೃಂಭಣೆಯಿಂದ ಆಚರಿಸಲಾಗುತ್ತಿದೆ. ರಕ್ಷಾ ಹಬ್ಬದ ಈ ಸಂದರ್ಭದಲ್ಲಿ ಎಲ್ಲಾ ದೇಶವಾಸಿಗಳಿಗೆ ಹೃತ್ಪೂರ್ವಕ ಶುಭಾಶಯ. ದೇಶದಲ್ಲಿನ ಅಣ್ಣ ತಂಗಿಯರ ನಡುವಿನ ಪ್ರೀತಿ ವಿಶ್ವಾಸ ಶಾಶ್ವತವಾಗಿ ಉಳಿಯಲಿ ಎಂದು ರಾಹುಲ್ ಗಾಂಧಿ ಹಾರೈಸಿದ್ದಾರೆ. 

Raksha Bandhan 2022: ನೀವು ತಿಳಿದಿರಬೇಕಾದ 7 ವಿಷಯಗಳು

ರಾಹುಲ್ ಗಾಂಧಿ ಟ್ವೀಟ್ ಮೂಲಕ ಶುಭಾಶಯ ತಿಳಿಸಿ, ಪ್ರಿಯಾಂಕಾ ಗಾಂಧಿ ಜೊತೆಗಿನ ಬಾಲ್ಯದ ಹಾಗೂ ಹಳೇ ಪಟೋಗಳನ್ನು ಹಂಚಿಕೊಂಡಿದ್ದಾರೆ. ಈ ಫೋಟೋಗಳಲ್ಲಿ ತಂದೆ ರಾಜೀವ್ ಗಾಂಧಿ, ತಾಯಿ ಸೋನಿಯಾ ಗಾಂಧಿ, ಅಜ್ಜಿ ಇಂದಿರಾ ಗಾಂಧ ಫೋಟೋಗಳು ಇವೆ. ಹಳೇ ನೆನೆಪಗಳನ್ನು ರಾಖಿ ಹಬ್ಬದಂದು ರಾಹುಲ್ ತರೆದಿಟ್ಟಿದ್ದಾರೆ.

ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಪ್ರಧಾನಿ ನರೇಂದ್ರ ಮೋದಿ ಹರ್ ಘರ್ ತಿರಂಗಾ ಅಭಿಯಾನಕ್ಕೆ ಕರೆ ನೀಡಿದ್ದಾರೆ. ಇದರ ಅಂಗವಾಗಿ ಸಾಮಾಜಿಕ ಜಾಲತಾಣ ಖಾತೆಗಳಲ್ಲೂ ತಿರಂಗ ಬಳಸುವಂತೆ ಮನವಿ ಮಾಡಿದ್ದಾರೆ. ಮೋದಿ ಕರೆಗೆ ತಿರುಗೇಟು ನೀಡಿದ್ದ ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಮಾಜಿ ಪ್ರಧಾನಿ ಜವಾಹರ್ ಲಾಲ್ ನೆಹರೂ ರಾಷ್ಟ್ರ ಧ್ವಜ ಹಿಡಿದಿರುವ ಫೋಟೋವನ್ನು ಸಾಮಾಜಿಕ ಜಾಲತಾಣ ಖಾತೆಗಳಿಗೆ ಹಾಕಿದೆ. ಇದರ ಜೊತೆಗೆ ಕೇಂದ್ರದ ಸರ್ವಾಧಿಕಾರಿ ಧೋರಣೆ ವಿರುದ್ಧ ಕಿಡಿ ಕಾರಿದ್ದರು. ಕೇಂದ್ರ ಸರ್ಕಾರವು ಪ್ರಜಾಪ್ರಭುತ್ವದ ಹತ್ಯೆ ಮಾಡುತ್ತಿದೆ. ಸರ್ವಾಧಿಕಾರದ ವಿರುದ್ಧ ದನಿ ಎತ್ತಿದವರನ್ನು ಜೈಲಿಗೆ ತಳ್ಳುತ್ತಿದೆ ಎಂದು ಕಾಂಗ್ರೆಸ್‌ ಮುಖಂಡ ರಾಹುಲ್‌ ಗಾಂಧಿ ಆಕ್ರೋಶ ವ್ಯಕ್ತಪಡಿಸಿದ್ದರು. 

ನಾವು ಇಲ್ಲಿ ಬೆಲೆ ಏರಿಕೆ ವಿಷಯದ ಬಗ್ಗೆ ಗಮನ ಸೆಳೆಯಲು ಪ್ರತಿಭಟನೆ ನಡೆಸುತ್ತಿದ್ದೇವೆ. ಇಂಥ ಶಕ್ತಿಗಳ ವಿರುದ್ಧ ಸಿಡಿದೇಳುವುದು ನಮ್ಮ ಕರ್ತವ್ಯ. ಭಾರತದಲ್ಲಿ ಪ್ರಜಾಪ್ರಭುತ್ವ ಕಾಪಾಡುವುದು ನಮ್ಮ ಕರ್ತವ್ಯ. ಜನರ ಸಮಸ್ಯೆಗಳ ಬಗ್ಗೆ ಗಮನ ಸೆಳೆಯುವುದು ನಮ್ಮ ಕರ್ತವ್ಯ, ಅದನ್ನು ನಾವು ಮಾಡುತ್ತಿದ್ದೇವೆ. ಆದರೆ ಇಲ್ಲಿ ಪ್ರಜಾಪ್ರಭುತ್ವದ ಹತ್ಯೆ ನಡೆಯುತ್ತಿದೆ. ನಮ್ಮ ಕೆಲ ಸಂಸದರ ಮೇಲೆ ಪೊಲೀಸರು ಹಲ್ಲೆ ನಡೆಸಿದ್ದಾರೆ. ಈ ಸರ್ವಾಧಿಕಾರಿ ಸರ್ಕಾರ ಹೆದರಿಕೊಂಡಿದೆ ಎಂಬುದಕ್ಕೆ ಇದೇ ಸಾಕ್ಷಿ’ ಎಂದು ರಾಹುಲ್ ಗಾಂಧಿ ಕಿಡಿಕಾರಿದರು.

ಸಹೋದರ ಸಾಯುವಂತೆ ಸಹೋದರಿಯ ಶಾಪ: ಭಾರತದ ಈ ರಾಜ್ಯದಲ್ಲಿದೆ ವಿಶಿಷ್ಟ ಸಂಪ್ರದಾಯ

ಅಣ್ಣ ತಿಂಗಿಯರ ಸಂಬಂಧ ಗಟ್ಟಿಗೊಳಿಸುವ ರಕ್ಷಾ ಬಂಧನ ಹಬ್ಬಕ್ಕೆ ವಿಶೇಷ ಸ್ಥಾನ ಹಾಗೂ ಮಹತ್ವವಿದೆ. ಇಂದು ದೇಶಾದ್ಯಂತ ರಕ್ಷಾ ಬಂಧನ ಹಬ್ಬ ಆಚರಿಸಲಾಗುತ್ತಿದೆ. ಈ ರಾಖಿ ಹಬ್ಬಕ್ಕೆ ದೇಶದ ಜನತೆಗೆ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಹಲವು ಗಣ್ಯರು ಶುಭಕೋರಿದ್ದಾರೆ. ಇದೇ ವೇಳೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ದೇಶದ ಜನತೆಗೆ ವಿಶೇವಾಗಿ ಶುಭಕೋರಿದ್ದಾರೆ. ರಕ್ಷಾ ಬಂಧನ ಪವಿತ್ರ ಸಹೋದರ ಸಹೋದರಿಯರ ಹಬ್ಬ ಎಂದು ರಾಹುಲ್ ಗಾಂಧಿ ಬಣ್ಣಿಸಿದ್ದಾರೆ. ಪ್ರಿಯಾಂಗಾ ಗಾಂಧಿ ವಾದ್ರಾ ಜೊತೆಗಿನ ರಾಖಿ ಹಬ್ಬದ ದಿನಗಳು, ಮಾಜಿ ಪ್ರಧಾನಿ ಹಾಗೂ ತಂದೆ ರಾಜೀವ್ ಗಾಂಧಿ, ಅಜ್ಜಿ ಇಂದಿರಾ ಗಾಂಧಿ ಜೊತೆಗಿನ ಕೆಲ ಫೋಟೋಗಳನ್ನು ರಾಹುಲ್ ಗಾಂಧಿ ಹಂಚಿಕೊಂಡಿದ್ದಾರೆ. 

ಅಣ್ಮ ತಂಗಿಯರ ಪವಿತ್ರ ಸಂಬಂಧದ ಅತ್ಯಂತ ಸುಂದರ ಹಬ್ಬ ರಕ್ಷಾ ಬಂಧನ. ರಾಖಿ ಹಬ್ಬವನ್ನು ದೇಶಾದ್ಯಂತ ಅತ್ಯಂತ ಗೌರವ ಹಾಗೂ ವಿಜೃಂಭಣೆಯಿಂದ ಆಚರಿಸಲಾಗುತ್ತಿದೆ. ರಕ್ಷಾ ಹಬ್ಬದ ಈ ಸಂದರ್ಭದಲ್ಲಿ ಎಲ್ಲಾ ದೇಶವಾಸಿಗಳಿಗೆ ಹೃತ್ಪೂರ್ವಕ ಶುಭಾಶಯ. ದೇಶದಲ್ಲಿನ ಅಣ್ಣ ತಂಗಿಯರ ನಡುವಿನ ಪ್ರೀತಿ ವಿಶ್ವಾಸ ಶಾಶ್ವತವಾಗಿ ಉಳಿಯಲಿ ಎಂದು ರಾಹುಲ್ ಗಾಂಧಿ ಹಾರೈಸಿದ್ದಾರೆ. 

ರಾಹುಲ್ ಗಾಂಧಿ ಟ್ವೀಟ್ ಮೂಲಕ ಶುಭಾಶಯ ತಿಳಿಸಿ, ಪ್ರಿಯಾಂಕಾ ಗಾಂಧಿ ಜೊತೆಗಿನ ಬಾಲ್ಯದ ಹಾಗೂ ಹಳೇ ಪಟೋಗಳನ್ನು ಹಂಚಿಕೊಂಡಿದ್ದಾರೆ. ಈ ಫೋಟೋಗಳಲ್ಲಿ ತಂದೆ ರಾಜೀವ್ ಗಾಂಧಿ, ತಾಯಿ ಸೋನಿಯಾ ಗಾಂಧಿ, ಅಜ್ಜಿ ಇಂದಿರಾ ಗಾಂಧ ಫೋಟೋಗಳು ಇವೆ. ಹಳೇ ನೆನೆಪಗಳನ್ನು ರಾಖಿ ಹಬ್ಬದಂದು ರಾಹುಲ್ ತರೆದಿಟ್ಟಿದ್ದಾರೆ.

ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಪ್ರಧಾನಿ ನರೇಂದ್ರ ಮೋದಿ ಹರ್ ಘರ್ ತಿರಂಗಾ ಅಭಿಯಾನಕ್ಕೆ ಕರೆ ನೀಡಿದ್ದಾರೆ. ಇದರ ಅಂಗವಾಗಿ ಸಾಮಾಜಿಕ ಜಾಲತಾಣ ಖಾತೆಗಳಲ್ಲೂ ತಿರಂಗ ಬಳಸುವಂತೆ ಮನವಿ ಮಾಡಿದ್ದಾರೆ. ಮೋದಿ ಕರೆಗೆ ತಿರುಗೇಟು ನೀಡಿದ್ದ ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಮಾಜಿ ಪ್ರಧಾನಿ ಜವಾಹರ್ ಲಾಲ್ ನೆಹರೂ ರಾಷ್ಟ್ರ ಧ್ವಜ ಹಿಡಿದಿರುವ ಫೋಟೋವನ್ನು ಸಾಮಾಜಿಕ ಜಾಲತಾಣ ಖಾತೆಗಳಿಗೆ ಹಾಕಿದೆ. ಇದರ ಜೊತೆಗೆ ಕೇಂದ್ರದ ಸರ್ವಾಧಿಕಾರಿ ಧೋರಣೆ ವಿರುದ್ಧ ಕಿಡಿ ಕಾರಿದ್ದರು. ಕೇಂದ್ರ ಸರ್ಕಾರವು ಪ್ರಜಾಪ್ರಭುತ್ವದ ಹತ್ಯೆ ಮಾಡುತ್ತಿದೆ. ಸರ್ವಾಧಿಕಾರದ ವಿರುದ್ಧ ದನಿ ಎತ್ತಿದವರನ್ನು ಜೈಲಿಗೆ ತಳ್ಳುತ್ತಿದೆ ಎಂದು ಕಾಂಗ್ರೆಸ್‌ ಮುಖಂಡ ರಾಹುಲ್‌ ಗಾಂಧಿ ಆಕ್ರೋಶ ವ್ಯಕ್ತಪಡಿಸಿದ್ದರು. 

ನಾವು ಇಲ್ಲಿ ಬೆಲೆ ಏರಿಕೆ ವಿಷಯದ ಬಗ್ಗೆ ಗಮನ ಸೆಳೆಯಲು ಪ್ರತಿಭಟನೆ ನಡೆಸುತ್ತಿದ್ದೇವೆ. ಇಂಥ ಶಕ್ತಿಗಳ ವಿರುದ್ಧ ಸಿಡಿದೇಳುವುದು ನಮ್ಮ ಕರ್ತವ್ಯ. ಭಾರತದಲ್ಲಿ ಪ್ರಜಾಪ್ರಭುತ್ವ ಕಾಪಾಡುವುದು ನಮ್ಮ ಕರ್ತವ್ಯ. ಜನರ ಸಮಸ್ಯೆಗಳ ಬಗ್ಗೆ ಗಮನ ಸೆಳೆಯುವುದು ನಮ್ಮ ಕರ್ತವ್ಯ, ಅದನ್ನು ನಾವು ಮಾಡುತ್ತಿದ್ದೇವೆ. ಆದರೆ ಇಲ್ಲಿ ಪ್ರಜಾಪ್ರಭುತ್ವದ ಹತ್ಯೆ ನಡೆಯುತ್ತಿದೆ. ನಮ್ಮ ಕೆಲ ಸಂಸದರ ಮೇಲೆ ಪೊಲೀಸರು ಹಲ್ಲೆ ನಡೆಸಿದ್ದಾರೆ. ಈ ಸರ್ವಾಧಿಕಾರಿ ಸರ್ಕಾರ ಹೆದರಿಕೊಂಡಿದೆ ಎಂಬುದಕ್ಕೆ ಇದೇ ಸಾಕ್ಷಿ’ ಎಂದು ರಾಹುಲ್ ಗಾಂಧಿ ಕಿಡಿಕಾರಿದರು.

Follow Us:
Download App:
  • android
  • ios