'ಬೀದಿ ನಾಯಿಗಿಂತ ಜಾಸ್ತಿ ಇಡಿ ಅಧಿಕಾರಿಗಳು ತಿರುಗಾಡ್ತಿದ್ದಾರೆ..' ರಾಜಸ್ಥಾನ ಸಿಎಂ ಗೆಹ್ಲೋಟ್ ವಿವಾದಿತ ಹೇಳಿಕೆ!
ರಾಜಸ್ಥಾನದಲ್ಲಿ ಕಾಂಗ್ರೆಸ್ ನಾಯಕ ವಿರುದ್ಧ ಜಾರಿ ನಿರ್ದೇಶನಾಲಯದ ಕ್ರಮವನ್ನು ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಕಟುವಾಗಿ ಟೀಕಿಸಿದ್ದಾರೆ. ಬೀದಿನಾಯಿಗಿಂತ ಅವರೇ ಹೆಚ್ಚು ತಿರುಗಾಡ್ತಿದ್ದಾರೆ ಎಂದು ಹೇಳಿದ್ದಾರೆ.

ನವದೆಹಲಿ (ಅ.27): ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಗುರುವಾರ ರಾಜಸ್ಥಾನದಲ್ಲಿ ಕೆಲವು ಕಾಂಗ್ರೆಸ್ ನಾಯಕರ ನಿವಾಸ ಹಾಗೂ ಕಚೇರಿಗಳ ಮೇಲೆ ದಾಳಿ ಮಾಡಿದ ಒಂದು ದಿನದ ಬಳಿಕ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ತನಿಖಾ ಸಂಸ್ಥೆಯ ವಿರುದ್ಧ ಕಿಡಿಕಾರಿದ್ದಾರೆ. ಬೀದಿನಾಯಿಗಿಂತ ಹೆಚ್ಚಾಗಿ ಜಾರಿ ನಿರ್ದೇಶನಾಲದ ಅಧಿಕಾರಿಗಳೇ ತಿರುಗಾಡ್ತಿದ್ದಾರೆ ಎಂದು ಅವರು ಕಿಡಿಕಾರಿದ್ದಾರೆ. ಜೈಪುರದಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಗೆಹ್ಲೋಟ್, "ನಾಯಿಗಳಿಗಿಂತಲೂ ಹೆಚ್ಚಾಗಿ ಜಾರಿ ನಿರ್ದೇಶನಾಲಯವು ದೇಶದಲ್ಲಿ ಓಡಾಡುತ್ತಿದೆ" ಎಂದು ವಿವಾದಿತ ಹೇಳಿಕೆ ನೀಡಿದ್ದಾರೆ. ಇದಲ್ಲದೆ, ಪ್ರಧಾನಿ ನರೇಂದ್ರ ಮೋದಿ ಅವರು ಕಾಂಗ್ರೆಸ್ ಸರ್ಕಾರ ಅದರಲ್ಲೂ ರಾಜಸ್ಥಾನ ಸರ್ಕಾರದ ಗ್ಯಾರಂಟಿ ಮಾಡೆಲ್‌ಅನ್ನು ಅನುಸರಿಸುತ್ತಿದ್ದಾರೆ ಎಂದು ಹೇಳಿದ್ದಾರೆ. ನಾನು ಜಾರಿ ನಿರ್ದೇಶನಾಲಯ ಮತ್ತು ಸಿಬಿಐ ಮುಖ್ಯಸ್ಥರಿಂದ ಸಮಯ ಕೋರಿದೆ, ಆದರೆ ಈಗ ಇವು ರಾಜಕೀಯ ಅಸ್ತ್ರವಾಗಿ ಮಾರ್ಪಟ್ಟಿವೆ. ಮೋದಿ ಅವರಿಗೆ ಕೌಂಟ್‌ಡೌನ್ ಪ್ರಾರಂಭವಾಗಿದೆ ಎನ್ನುವುದು ತಿಳಿದಿಲ್ಲ ಅವರು ಈಗ ನಮ್ಮ 'ಗ್ಯಾರಂಟಿ ಮಾದರಿ'ಯನ್ನು ಅನುಸರಿಸುತ್ತಿದ್ದಾರೆ" ಎಂದು ಗೆಹ್ಲೋಟ್ ಹೇಳಿದ್ದಾರೆ.
ಗುರುವಾರ, ಜಾರಿ ನಿರ್ದೇಶನಾಲಯವು ಜೈಪುರ ಮತ್ತು ಸಿಕರ್‌ನಲ್ಲಿರುವ ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಗೋವಿಂದ್ ಸಿಂಗ್ ದೋತಾಸ್ರಾ ಅವರ ನಿವಾಸ ಹಾಗೂ ಕಚೇರಿಯ ಮೇಲೆ ದಾಳಿ ನಡೆಸಿದ್ದು, ಆಪಾದಿತ ಪರೀಕ್ಷಾ ಪತ್ರಿಕೆ ಸೋರಿಕೆ ಪ್ರಕರಣದ ಹಣ ವರ್ಗಾವಣೆ ತನಿಖೆಯ ಭಾಗವಾಗಿ ಮತ್ತು ವಿದೇಶಿ ವಿನಿಮಯ ಉಲ್ಲಂಘನೆ ಪ್ರಕರಣದಲ್ಲಿ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರ ಮಗನಿಗೆ ಸಮನ್ಸ್ ನೀಡಲಾಗಿದೆ.
ಮಾಜಿ ಶಾಲಾ ಶಿಕ್ಷಣ ಸಚಿವ 59 ವರ್ಷದ ದೋತಸ್ರಾ ಅವರ ಆವರಣದ ಜೊತೆಗೆ, ಸಂಸ್ಥೆಯು ದೌಸಾದ ಮಹುವಾ ಕ್ಷೇತ್ರದಿಂದ ಪಕ್ಷದ ಅಭ್ಯರ್ಥಿ ಓಂಪ್ರಕಾಶ್ ಹುಡ್ಲಾ ಮತ್ತು ಇತರ ಕೆಲವರ ಆವರಣವನ್ನು ಸಹ ಶೋಧಿಸಿದೆ. ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್‌ಎ)ಯ ಕಾಯ್ದೆಯ ಅಡಿಯಲ್ಲಿ ಈ ದಾಳಿಗಳನ್ನು ಕೈಗೊಳ್ಳಲಾಗಿದೆ. ಗುರುವಾರವೂ ಸಹ, ಮುಖ್ಯಮಂತ್ರಿ ಗೆಹ್ಲೋಟ್ ಈ ಕ್ರಮವನ್ನು ಖಂಡಿಸಿದರು, ದೇಶದಲ್ಲಿ ಭಯೋತ್ಪಾದನೆಯನ್ನು ತುಂಬಿಸಲಾಗುತ್ತಿದೆ ಎಂದು ಹೇಳಿದರು. ತಮ್ಮ ಸರ್ಕಾರವನ್ನು ಬೀಳಿಸಲು ಸಾಧ್ಯವಾಗದ ಕಾರಣ ಬಿಜೆಪಿಯು ಇಂತಹ ದಾಳಿಗಳ ಮೂಲಕ ತನ್ನನ್ನು ಗುರಿಯಾಗಿಸುತ್ತಿದೆ ಎಂದು ಅವರು ಆರೋಪಿಸಿದರು.
ಚುನಾವಣೆಗೆ ಮೊದಲು ಕೈಗೆ ಇಡಿ ಶಾಕ್: ರಾಜಸ್ಥಾನ ಕಾಂಗ್ರೆಸ್ ಅಧ್ಯಕ್ಷನ ಮನೆ ಮೇಲೆ ಇ.ಡಿ. ದಾಳಿ
200 ಸದಸ್ಯ ಬಲದ ರಾಜಸ್ಥಾನ ವಿಧಾನಸಭೆಗೆ ನವೆಂಬರ್ 25 ರಂದು ಚುನಾವಣೆ ನಡೆಯಲಿದೆ. ಡಿಸೆಂಬರ್ 3 ರಂದು ಫಲಿತಾಂಶ ಪ್ರಕಟವಾಗಲಿದೆ.
ರಾಜಸ್ಥಾನದಲ್ಲೂ ಕಾಂಗ್ರೆಸ್‌ನಿಂದ ಗೃಹಲಕ್ಷ್ಮಿ ಸ್ಕೀಂ: 500ಕ್ಕೆ ಸಿಲಿಂಡರ್, ಮನೆ ಒಡತಿಗೆ 10 ಸಾವಿರ