ನವದೆಹಲಿ(ನ.10):  ಉಪ ಚುನಾವಣೆ ಕದನ ಕುತೂಹಲಕ್ಕೆ ತೆರೆ ಬಿದ್ದಿದೆ. ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಬಿಜೆಪಿ ಅಭೂತಪೂರ್ವ ಗೆಲುವು ದಾಖಲಿಸಿದೆ. ವಿಶೇಷವಾಗಿ ತೆಲಂಗಾಣದ ಡುಬ್ಬಕಾ ಕ್ಷೇತ್ರ ಚುನಾವಣಾ ಪ್ರಚಾರದ ವೇಳೆ ಭಾರಿ ಸಂಚಲನ ಸೃಷ್ಟಿಸಿತ್ತು. ಇದೀಗ ಫಲಿತಾಂಶ ಹೊರಬಿದ್ದಿದ್ದು ಬಿಜೆಪಿ ಅಭ್ಯರ್ಥಿ ಎಂ.ರಘುನಂದನ್ ರಾವ್ ಭರ್ಜರಿ ಗೆಲುವು ದಾಖಲಿಸಿದ್ದಾರೆ. ಬಿಜೆಪಿ ರಾಷ್ಟ್ರೀಯ ವಕ್ತಾರ ಹಾಗೂ ರಾಜ್ಯ ಸಭಾ ಸದಸ್ಯ ರಾಜೀವ್ ಚಂದ್ರಶೇಖರ್ ಡುಬ್ಬಕಾ ಗೆಲುವಿಗೆ ಕಾರಣರಾದ ಕ್ಷೇತ್ರದ ಮತದಾರ, ಅಭ್ಯರ್ಥಿ  ರಘುನಂದನ್ ಹಾಗೂ ತೆಲಂಗಾಣ ಬಿಜೆಪಿಗೆ ಅಭಿನಂದನೆ ಸಲ್ಲಿಸಿದ್ದಾರೆ. ಇದೇ ವೇಳೆ ಕೆಸಿ ಚಂದ್ರಶೇಕರ್ ರಾವ್ ಸರ್ಕಾರದ ಕೊಳಕು ರಾಜಕೀಯಕ್ಕೆ ಮತದಾರ ನೀಡಿದ ಉತ್ತರ ಎಂದು ತಿರುಗೇಟು ನೀಡಿದ್ದಾರೆ.

RR ನಗರದಲ್ಲಿ ಗೆಲುವು ಸಾಧಿಸಿದ ಮುನಿರತ್ನ: ಕಾಂಗ್ರೆಸ್ ತಂತ್ರಗಳು ಉಲ್ಟಾ..!.

ಬೆಜಿಪಿಗೆ ಮತ ನೀಡಿ ಗೆಲ್ಲಿಸಿದ ಎಲ್ಲಾ ಡುಬ್ಬಕಾ ಕ್ಷೇತ್ರದ ಮತದಾರರ ಬಂಧುಗಳಿಗೆ ಅಭಿನಂದನೆಗಳು. ಚಂದ್ರಶೇಖರ್ ರಾವ್ ಸರ್ಕಾರದ ಕೊಳಕು ರಾಜಕೀಯ, ಬಿಜೆಪಿ ನಾಯಕರ ಬಂಧನ ಸೇರಿದಂತೆ ಕೆಟ್ಟ ರಾಜಕೀಯ ಪರಿಸ್ಥಿತಿ ನಡುವೆ ಅಭೂತಪೂರ್ವ ಗೆಲುವು ಸಾಧಿಸಿದ ಬಿಜೆಪಿ ಅಭ್ಯರ್ಥಿ ಎಂ. ರಘುನಂದನ್ ರಾವ್, ತೆಲಂಗಾಣ ಬೆಜಿಪಿ ರಾಜ್ಯಾಧ್ಯಕ್ಷ ಬಂಡಿ ಸಂಜಯ್ ಕುಮಾರ್ ಹಾಗೂ ತೆಲಂಗಾಣದ ಎಲ್ಲಾ ಬಿಜೆಪಿ ಕಾರ್ಯಕರ್ತರಿಗೆ ಅಭಿನಂದನೆಗಳು ಎಂದು ರಾಜೀವ್ ಚಂದ್ರಶೇಖರ್ ಟ್ವೀಟ್ ಮೂಲಕ ಹೇಳಿದ್ದಾರೆ.

 

ವಿಜಯೇಂದ್ರ ತಂತ್ರಗಳ ಫಲ: ಮೊದಲ ಬಾರಿಗೆ ಶಿರಾದಲ್ಲಿ ಅರಳಿದ ಕಮಲ

ಸಿದ್ದಪೇಟೆ ಉಪಚುನಾವಣೆ ಪ್ರಚಾರದ ವೇಳೆ ಬಿಜೆಪಿ ಅಭ್ಯರ್ಥಿ ರಘುನಂದನ್, ಬಂಡಿ ಸಂಜಯ್ ಕುಮಾರ್ ಸೇರಿದಂತೆ ಹಲವು ಬಿಜೆಪಿ ಕಾರ್ಯಕರ್ತರನ್ನು ವಿನಾ ಕಾರಣಕ್ಕೆ ಬಂಧಿಸಲಾಗಿತ್ತು. ಕೆ ಚಂದ್ರಶೇಖರ್ ರಾವ್ ಸರ್ಕಾರದ ಈ ನಡೆಯನ್ನು ರಾಜೀವ್ ಚಂದ್ರಶೇಕರ್ ಸೇರಿದಂತೆ ಬಿಜೆಪಿ ನಾಯಕರು ಖಂಡಿಸಿದ್ದರು. ಇದೀಗ ಮತದಾರ ಬಿಜೆಪಿಗೆ ಗೆಲುವು ನೀಡಿ ಸ್ಪಷ್ಟ ಸಂದೇಶ ರವಾನಿಸಿದ್ದಾರೆ ಎಂದು ರಾಜೀವ್ ಚಂದ್ರಶೇಖರ್ ಹೇಳಿದ್ದಾರೆ.

ಅಧಿವೇಶನದಲ್ಲಿ ಬಯಲಾದ ವಿಪಕ್ಷಗಳ ಬಣ್ಣ

ಜಿದ್ದಾಜಿದ್ದಿನಿಂದ ಕೂಡಿದ ಡುಬ್ಬಕಾ ಉಪಚುನಾವಣೆಯಲ್ಲಿ ರಘುನಂದನ್ ರಾವ್ 1079 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. 21 ಸುತ್ತಿನ ಮತ ಎಣಿಕೆ ಬಳಿಕ ಬಿಜೆಪಿ ಅಭ್ಯರ್ಥಿ ರಘುನಂದನ್ 62,772 ಮತ ಪಡೆದಿದ್ದಾರೆ. ಇನ್ನು ಕೆಸಿಆರ್ ನೇತೃತ್ವ ತೆಲಂಗಾಣ ರಾಷ್ಟ್ರೀಯ ಸಮಿತಿ ಅಭ್ಯರ್ಥಿ ಸೊಲಿಪೇಟ ಸುಜಾತ 61,302 ಮತ ಪಡೆದಿದ್ದಾರೆ. ಕಾಂಗ್ರೆಸ್‌ ಚೀರುಕು ಶ್ರೀನಿವಾಸ ರೆಡ್ಡಿ 21,819 ಮತ ಪಡೆದಿದ್ದಾರೆ.