ತಮಿಳುನಾಡು ಮುಖ್ಯಮಂತ್ರಿಯಾಗಿ ವಿಜಯ್ ಅಧಿಕಾರ ವಹಿಸಿಕೊಂಡ ಬಗ್ಗೆ ಚೆನ್ನೈ ವಿಮಾನ ನಿಲ್ದಾಣದಲ್ಲಿ ಪತ್ರಕರ್ತರು ಕೇಳಿದ ಪ್ರಶ್ನೆಗೆ, ರಜನಿಕಾಂತ್ ಉತ್ತರಿಸದೆ ಮೌನವಾಗಿ ಕೈಮುಗಿದಿರುವುದು. ಈ ಹಿಂದೆ ವಿಜಯ್‌ಗೆ ಶುಭ ಕೋರಿದ್ದ ರಜನಿಕಾಂತ್ ಅವರ ಈ ನಡೆ ಈಗ ಸಾಮಾಜಿಕ ಜಾಲತಾಣದಲ್ಲಿ ಚರ್ಚೆಗೆ ಗ್ರಾಸವಾಗಿದೆ.

ಚೆನ್ನೈ (ಮೇ.13): ಚೆನ್ನೈನಲ್ಲಿ ತಮಿಳು ಚಿತ್ರರಂಗದ ಸೂಪರ್‌ಸ್ಟಾರ್ ರಜನಿಕಾಂತ್ ಅವರ ಒಂದು ಕ್ಷಣದ ನಡೆ ಈಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಅವರು ನೀಡಿದ ಪ್ರತಿಕ್ರಿಯೆ ವೈರಲ್ ಆಗಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ವಿಜಯ್ ಸಿಎಂ ಆಗಿರುವ ಬಗ್ಗೆ ನಿಮ್ಮ ಅಭಿಪ್ರಾಯವೇನು?

ವಿಜಯ್ ತಮಿಳುನಾಡು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬಳಿಕ, ಚೆನ್ನೈ ವಿಮಾನ ನಿಲ್ದಾಣದಲ್ಲಿ ರಜನಿಕಾಂತ್ ಅವರನ್ನು ಪತ್ರಕರ್ತರು ಸುತ್ತುವರಿದಿದ್ದರು. 'ವಿಜಯ್ ಸಿಎಂ ಆಗಿರುವ ಬಗ್ಗೆ ನಿಮ್ಮ ಅಭಿಪ್ರಾಯ ಏನು?' ಎಂದು ಪ್ರಶ್ನೆ ಕೇಳಲಾಗಿದೆ.

ಪತ್ರಕರ್ತರ ಪ್ರಶ್ನೆಗೆ ಕೈಮುಗಿದ ರಜನಿಕಾಂತ್!

ಆದರೆ ರಜನಿಕಾಂತ್ ಯಾವುದೇ ಉತ್ತರ ನೀಡದೆ ನಗುತ್ತಾ ಕೈ ಮುಗಿದು ಮುಂದೆ ಸಾಗಿದ್ದಾರೆ. ಅವರ ಈ ಮೌನ ಪ್ರತಿಕ್ರಿಯೆಯ ವಿಡಿಯೋ ಈಗ ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕವಾಗಿ ಹರಡುತ್ತಿದೆ.

ಗಮನಾರ್ಹವಾಗಿ, ಫಲಿತಾಂಶ ಪ್ರಕಟವಾದ ಮೇ 4 ರಂದು ಟಿವಿಕೆ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದಾಗ ರಜನಿಕಾಂತ್ ಅವರು ಸಾಮಾಜಿಕ ಜಾಲತಾಣದಲ್ಲಿ ವಿಜಯ್‌ಗೆ ಶುಭಾಶಯ ಕೋರಿದ್ದರು. ಈಗಿನ ಮೌನ ನಡೆ ಮಾತ್ರ ಮತ್ತಷ್ಟು ಕುತೂಹಲ ಹೆಚ್ಚಿಸಿದೆ.

Scroll to load tweet…