'ಮೋದಿ ಕಳ್ಳ' ಎಂದ ರಾಹುಲ್ ಗಾಂಧಿಗೆ ಸಮನ್ಸ್!
ಪ್ರಧಾನಿ ಮೋದಿ ಕಳ್ಳ ಎಂದ ರಾಹುಲ್ ಗಾಂಧಿಗೆ ಸಂಕಷ್ಟ| ರಾಹುಲ್ ಗಾಂಧಿಗೆ ಸಮನ್ಸ್ ಜಾರಿ ಮಾಡಿದ ರಾಂಚಿ ಸಿವಿಲ್ ನ್ಯಾಯಾಲಯ| ಫೆಬ್ರವರಿ 22ಕ್ಕೂ ಮುಂಚಿತವಾಗಿ ವಿಚಾರಣೆಗಾಗಿ ಹಾಜರಾಗುವಂತೆ ಸೂಚನೆ| ಲೋಕಸಭೆ ಪ್ರಚಾರ ಭಾಷಣದಲ್ಲಿ ಮೋದಿ ಕಳ್ಳ ಎಂದಿದ್ದ ರಾಹುಲ್ ಗಾಂಧಿ|
ನವದೆಹಲಿ(ಜ.19): ಪ್ರಧಾನಿ ನರೇಂದ್ರ ಮೋದಿ ಓರ್ವ ಕಳ್ಳ ಎಂದು ಹೇಳಿಕೆ ನೀಡಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಇದೀಗ ಸಂಕಷ್ಟಕ್ಕೆ ಸಿಲುಕಿದ್ದಾರೆ.
ಪ್ರಧಾನಿ ಕುರಿತು ಹಗುರವಾಗಿ ಮಾತನಾಡಿದ್ದಕ್ಕೆ ರಾಂಚಿ ಸಿವಿಲ್ ನ್ಯಾಯಾಲಯ ರಾಹುಲ್ ಗಾಂಧಿಗೆ ಸಮನ್ಸ್ ಜಾರಿ ಮಾಡಿದೆ.
ಕಿಡಿ ಹೊತ್ತಿಸಿದ ರಾಹುಲ್ 'ಚೆಡ್ಡಿ' ಹೇಳಿಕೆ: RSS ಬೈದ ರಾಹುಲ್‌ಗೆ ಇದೆಲ್ಲ ಬೇಕೆ?
ಫೆಬ್ರವರಿ 22ಕ್ಕೂ ಮುಂಚಿತವಾಗಿ ವಿಚಾರಣೆಗಾಗಿ ನ್ಯಾಯಾಲಯಕ್ಕೆ ಹಾಜರಾಗುವಂತೆ ರಾಹುಲ್ ಗಾಂಧಿ ಅವರಿಗೆ ಸೂಚಿಸಲಾಗಿದೆ. ಈ ಹಿಂದೆ ಜ. 18 ರಂದು ವಿಚಾರಣೆಗೆ ಹಾಜರಾಗುವಂತೆ ಕೋರ್ಟ್ ಆದೇಶಿಸಿತ್ತು.
ಕಳೆದ ಲೋಕಸಭಾ ಚುನಾವಣಾ ಪ್ರಚಾರದ ಸಂದರ್ಭದಲ್ಲಿ, ಪ್ರಧಾನಿ ಮೋದಿ ಓರ್ವ ಕಳ್ಳ ಎಂದು ರಾಹುಲ್ ಗಾಂಧಿ ವಿವಾದಾತ್ಮಕ ಹೇಳಿಕೆ ನೀಡಿದ್ದರು.
ನಿರವ್ ಮೋದಿ , ಲಲಿತ್ ಮೋದಿ, ನರೇಂದ್ರ ಮೋದಿ ಇವೆರೆಲ್ಲರ ಸರ್‌ನೇಮ್ ಒಂದೇ ಆಗಿದ್ದು, ಈ ಎಲ್ಲಾ ಕಳ್ಳರು ದೇಶವನ್ನು ಲೂಟಿ ಮಾಡಿದ್ದಾರೆ ಎಂದು ರಾಹುಲ್ ತಮ್ಮ ಭಾಷಣದಲ್ಲಿ ಹರಿಹಾಯ್ದಿದ್ದರು.
ರಾಹುಲ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಲು ಮುಂದಾದ ಸಾವರ್ಕರ್ ಮೊಮ್ಮಗ!
ರಾಹುಲ್ ಹೆಳಿಕೆ ವಿರುದ್ಧ ಭೂಪಾಲ್ ಸಿವಿಲ್ ನ್ಯಾಯಾಲಯದಲ್ಲಿ ಪ್ರದೀಪ್ ಮೋದಿ ಎಂಬವರು ಕೂಡ ದೂರು ದಾಖಲಿಸಿದ್ದರು. ರಾಹುಲ್ ಇಡೀ ಸಮುದಾಯಕ್ಕೆ ಅವಹೇಳನ ಮಾಡಿದ್ದು, ಅವರ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವುದಾಗಿ ಪ್ರದೀಪ್ ಸ್ಪಷ್ಟಪಡಿಸಿದ್ದರು.