Breaking: ಭಾರತದ ಮಹಾಉದ್ಯಮಿ ರತನ್ ಟಾಟಾ ವಿಧಿವಶ
ಭಾರತ ಕಂಡ ಶ್ರೇಷ್ಠ ಉದ್ಯಮಿ, ಟಾಟಾ ಸನ್ಸ್‌ನ ಅಧ್ಯಕ್ಷ ರತನ್ ಟಾಟಾ ತಮ್ಮ 86ನೇ ವಯಸ್ಸಿನಲ್ಲಿ ನಿಧನರಾದರು. ಅವರು ಅನಾರೋಗ್ಯದ ಕಾರಣದಿಂದ ಮುಂಬೈನ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು. 1991 ರಿಂದ 2012 ರವರೆಗೆ ಟಾಟಾ ಸನ್ಸ್ ಅಧ್ಯಕ್ಷರಾಗಿದ್ದ ಅವರು, ಟಾಟಾ ಸಾಮ್ರಾಜ್ಯವನ್ನು ಹೊಸ ಎತ್ತರಕ್ಕೆ ಕೊಂಡೊಯ್ದರು.
ಮುಂಬೈ (ಅ.9): ಭಾರತ ಕಂಡ ಶ್ರೇಷ್ಠ ಉದ್ಯಮಿ, ಟಾಟಾ ಸನ್ಸ್‌ನ ಅಧ್ಯಕ್ಷ ರತನ್ ಟಾಟಾ ತಮ್ಮ 86ನೇ ವಯಸ್ಸಿನಲ್ಲಿ ನಿಧನರಾದರು. ಎರಡು ದಿನಗಳ ಹಿಂದೆ ಅವರು ಅನಾರೋಗ್ಯದ ಕಾರಣಕ್ಕಾಗಿ ಮುಂಬೈನ ಆಸ್ಪತ್ರೆಗೆ ದಾಖಲಾಗಿದ್ದರೂ, ಬಳಿಕ ಈ ಬಗ್ಗೆ ಸ್ವತಃ ಅವರೇ ಸ್ಪಷ್ಟೀಕರಣ ನೀಡಿ ತಾವು ಚೆನ್ನಾಗಿದ್ದೇನೆ ಎಂದು ಹೇಳಿದ್ದರು. ಬುಧವಾರ ಸಂಜೆಯ ವೇಳೆಗೆ ಮತ್ತೊಮ್ಮೆ ಗಂಭೀರ ಸ್ಥಿತಿಯಲ್ಲಿ ಮುಂಬೈನ ಬ್ರಿಚ್ ಕ್ಯಾಂಡಿ ಆಸ್ಪತ್ರೆಯಲ್ಲಿ ದಾಖಲಾಗಿದ್ದ ರತನ್ ಟಾಟಾ ರಾತ್ರಿಯ ವೇಳೆ ಇಹಲೋಕ ತ್ಯಜಿಸಿದ್ದಾರೆ. ಚಿಕಿತ್ಸೆ ಫಲಿಸದೇ ಅವರು ಅಸುನೀಗಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. 1991ರಲ್ಲಿ ಟಾಟಾ ಸನ್ಸ್‌ನ ಚೇರ್ಮನ್ ಆಗಿದ್ದ ರತನ್ ಟಾಟಾ, 2012ರವರೆಗೂ ಈ ಹುದ್ದೆಯಲ್ಲಿದ್ದರು. ತಮ್ಮ ಮರಿ ಮುತ್ತಜ್ಜ ಸ್ಥಾಪನೆ ಮಾಡಿದ್ದ ಗ್ರೂಪ್ ಅನ್ನು ದೊಡ್ಡ ಮಟ್ಟದಲ್ಲಿ ಯಶಸ್ಸಿನ ಪಥದಲ್ಲಿ ಸಾಗಿಸಿದ್ದರು. 1996ರಲ್ಲಿ ಟಾಟಾ ಟೆಲಿಸರ್ವೀಸಸ್ ಕಂಪನಿ ಸ್ಥಾಪನೆ ಮಾಡಿದ್ದರೆ, 2004ರಲ್ಲಿ ಟಾಟಾ ಕನ್ಸಲ್ಟೆನ್ಸಿ ಸರ್ವೀಸ್ ಕಂಪನಿಯನ್ನು ಸಾರ್ವಜನಿಕ ಪಾಲುದಾರ ಕಂಪನಿಯನ್ನಾಗಿ ಮಾಡಿದ್ದರು.
ನಾನು ಚೆನ್ನಾಗಿದ್ದೇನೆ ಎಂದು ಎರಡು ದಿನಗಳ ಹಿಂದೆಯಷ್ಟೇ ಹೇಳಿದ್ದ ಟಾಟಾ: ರತನ್ ಟಾಟಾ ಅವರ ಆರೋಗ್ಯ ಹದಗೆಟ್ಟಿದೆ ಎನ್ನುವ ಬಗ್ಗೆ ಸೋಮವಾರವೇ ವರದಿ ಹೊರಬಂದಿತ್ತು. ಆದರೆ, ಈ ವೇಳೆ ಸ್ವತಃ ಅವರೇ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್‌ಅನ್ನು ಹಂಚಿಕೊಂಡು, ದೈನಂದಿನ ಚೆಕಪ್‌ಗಾಗಿ ಆಸ್ಪತ್ರೆಗೆ ಬಂದಿದ್ದೇನೆ ನಾನು ಚೆನ್ನಾಗಿದ್ದೇನೆ ಎಂದು ಹೇಳಿದ್ದರು. ಪೋಸ್ಟ್‌ನಲ್ಲಿ ನನ್ನ ಆರೋಗ್ಯದ ಬಗ್ಗೆ ಚಿಂತೆ ಮಾಡುತ್ತಿರುವ ಎಲ್ಲರಿಗೂ ಆಭಾರಿಯಾಗಿದ್ದೇನೆ. ನಾನು ಸಂಪೂರ್ಣವಾಗಿ ಚೆನ್ನಾಗಿದ್ದೇನೆ. ಆತಂಕ ಪಡುವಂಥದ್ದೇನೂ ಇಲ್ಲ, ವೃದ್ಧಾಪ್ಯಕ್ಕೆ ಸಂಬಂಧಿಸಿದ ಕಾಯಿಲೆಗಳ ನಿತ್ಯ ತಪಾಸಣೆಗಾಗಿ ಆಸ್ಪತ್ರೆಗೆ ಬಂದಿದ್ದೇನೆ. ಆದರೆ ಈ ಬಾರಿ ಅವರು ಆಸ್ಪತ್ರೆಯಿಂದ ಹಿಂತಿರುಗಲಾಗದೆ, ಶಾಶ್ವತವಾಗಿ ಅಂತಿಮ ಯಾತ್ರೆಗೆ ತೆರಳಿದರು ಎಂಬ ನೋವು ದೇಶಕ್ಕೆ ಇರುತ್ತದೆ.
Breaking: ರತನ್ ಟಾಟಾ ಆರೋಗ್ಯ ಸ್ಥಿತಿ ಗಂಭೀರ, ಐಸಿಯುನಲ್ಲಿ ಚಿಕಿತ್ಸೆ!
ಬುಧವಾರ ಸಂಜೆ, ಅವರ ಆರೋಗ್ಯ ಹದಗೆಟ್ಟಿದೆ ಎಂಬ ಸುದ್ದಿ ವರದಿಯಾಗಿತ್ತು. ಅವರಿಗೆ ಚಿಕಿತ್ಸೆ ನೀಡುತ್ತಿರುವ ಹಂತದಲ್ಲಿಯೇ ಅವರು ಇಹಲೋಕ ತ್ಯಜಿಸಿದ್ದಾರೆ ಎಂದು ವರದಿಗಳು ಬಂದಿದ್ದವು. ಆದರೆ, ರಾತ್ರಿಯವರೆಗೂ ಈ ವಿಚಾರವನ್ನು ಖಚಿತಪಡಿಸಿರಲಿಲ್ಲ. ರತನ್ ಟಾಟಾ ಅವರ ನಿಧನ ದೇಶಕ್ಕೆ ದೊಡ್ಡ ನಷ್ಟ. ಆದರೆ, ದೇಶ ಅವರನ್ನು ಎಂದಿಗೂ ಮರೆಯುವುದಿಲ್ಲ. ಅವರು ದೇಶಕ್ಕಾಗಿ ಅನೇಕ ಮಹತ್ತರವಾದ ಕೆಲಸಗಳನ್ನು ಮಾಡಿದ ಶ್ರೇಷ್ಠ ಮಾನವತಾವಾದಿ. ಟಾಟಾ ಗ್ರೂಪ್ ಅನ್ನು ಎತ್ತರಕ್ಕೆ ಕೊಂಡೊಯ್ಯುವಲ್ಲಿ ರತನ್ ಟಾಟಾ ಪ್ರಮುಖ ಪಾತ್ರ ವಹಿಸಿದ್ದಾರೆ. ದೇಶಕ್ಕಾಗಿ ಮತ್ತು ಜನಸಾಮಾನ್ಯರಿಗಾಗಿ ಅವರು ಇಂತಹ ಅನೇಕ ಕೆಲಸಗಳನ್ನು ಮಾಡಿದರು, ಅದಕ್ಕಾಗಿ ಅವರು ಯಾವಾಗಲೂ ಸ್ಮರಣೀಯರಾಗಿದ್ದಾರೆ. ರತನ್ ಟಾಟಾ ಅವರು ಉದಾರ ವ್ಯಕ್ತಿ ಮಾತ್ರವಲ್ಲ ಕಷ್ಟದ ಸಮಯದಲ್ಲಿ ದೇಶಕ್ಕೆ ಸಹಾಯ ಮಾಡಲು ಯಾವಾಗಲೂ ಸಿದ್ಧವಿದ್ದ ಅಪ್ಪಟ ದೇಶಪ್ರೇಮಿ.
ಆ್ಯಪಲ್ ಐಫೋನ್ 16 ಖರೀದಿಸುವವರಿಗೆ ಗುಡ್ ನ್ಯೂಸ್ ನೀಡಿದ ರತನ್ ಟಾಟಾ!
ರತನ್ ಟಾಟಾ ಜನಿಸಿದ್ದು 1937ರ ಡಿಸೆಂಬರ್ 28 ರಂದು. ಅವರು 1991 ರಿಂದ 2012 ರವರೆಗೆ ಟಾಟಾ ಗ್ರೂಪ್‌ನ ಅಧ್ಯಕ್ಷರಾಗಿದ್ದರು ಮತ್ತು ಈ ಸಮಯದಲ್ಲಿ ಅವರು ವ್ಯಾಪಾರ ವಲಯದಲ್ಲಿ ಅನೇಕ ದಾಖಲೆಗಳನ್ನು ಸ್ಥಾಪಿಸಿದರು ಮತ್ತು ದೇಶದ ಅತ್ಯಂತ ಹಳೆಯ ವ್ಯಾಪಾರ ಸಂಸ್ಥೆಗಳಲ್ಲಿ ಒಂದಾದ ಟಾಟಾ ಗ್ರೂಪ್ ಅನ್ನು ಮಹಾ ಎತ್ತರಕ್ಕೆ ಕೊಂಡೊಯ್ಯುವಲ್ಲಿ ಅವರ ಪಾತ್ರವೇ ಹಿರಿದಾಗಿತ್ತು.ರತನ್ ಟಾಟಾ ಅವರ ವ್ಯಕ್ತಿತ್ವವನ್ನು ಗಮನಿಸಿದರೆ, ಅವರು ಕೇವಲ ಉದ್ಯಮಿಯಾಗದೆ ಸರಳ, ಉದಾತ್ತ ಮತ್ತು ಉದಾರ ವ್ಯಕ್ತಿಯಾಗಿದ್ದರು. ಅವರು ದೇಶಕ್ಕೆ ಸದಾ ಆದರ್ಶ ಮತ್ತು ಸ್ಪೂರ್ತಿ. ಅವರು ತಮ್ಮ ಗುಂಪಿನ ಚಿಕ್ಕ ನೌಕರನನ್ನೂ ತಮ್ಮ ಕುಟುಂಬವೆಂದು ಪರಿಗಣಿಸಿದ್ದರು.