ನವದೆಹಲಿ(ಫೆ.05): ಪೋರ್ನೋಗ್ರಾಫಿ(ಅಶ್ಲೀಲ ಚಿತ್ರ ವೀಕ್ಷಣೆ) ದೇಶಕ್ಕೆ ಮಾರಿಯಾಗಿ ಪರಿಣಮಿಸಿದ್ದು, ಇದನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಇನ್ನಿಲ್ಲದ ಪ್ರಯತ್ನ ನಡೆಸಿದೆ ಎಂದು ಕೇಂದ್ರ ಸಚಿವ ರವಿಶಂಕರ್ ಪ್ರಸಾದ್ ಹೇಳಿದ್ದಾರೆ.

ಲೋಕಸಭೆಯಲ್ಲಿ ಈ ಕುರಿತು ಮಾಹಿತಿ ನೀಡಿದ ರವಿಶಂಕರ್ ಪ್ರಸಾದ್, ಅಶ್ಲೀಲ ಚಿತ್ರ ಪ್ರಸಾರವನ್ನು ತಡೆಯಲು ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರಗಳು ಹಾಗೂ ಪೊಲೀಸ್ ವ್ಯವಸ್ಥೆ ಒಟ್ಟಾಗಿ ಕೆಲಸ ಮಾಡುತ್ತಿದೆ ಎಂದು  ಸ್ಪಷ್ಟಪಡಿಸಿದರು.

ಕದ್ದುಮುಚ್ಚಿ ಪೋರ್ನ್ ನೋಡ್ತೀರಾ? ನಿಮ್ಮೇಲೆ ಕಣ್ಣಿಟ್ಟಿದ್ದಾರೆ ಇವ್ರು!

ಅಶ್ಲೀಲ ಚಿತ್ರ ಅದರಲ್ಲೂ ಪ್ರಮುಖವಾಗಿ ಮಕ್ಕಳ ಅಶ್ಲೀಲ ಚಿತ್ರ ಪ್ರಸಾರ ಹಾಗೂ ವೀಕ್ಷಣೆ ಗಂಭೀರ ಸಾಮಾಜಿಕ ಸಮಸ್ಯೆಯಾಗಿದ್ದು, ಇದನ್ನು ನಿರ್ಮುಲನೆ ಮಾಡಲು ಕೇಂದ್ರ ಸರ್ಕಾರ ಪ್ರಾಮಾಣಿಕ ಪ್ರಯತ್ನ ಮಾಡುತ್ತಿದೆ ಎಂದು ಪ್ರಸಾದ್ ನುಡಿದರು.

ವಾಟ್ಸಪ್, ಫೇಸ್ ಬುಕ್‌ನಲ್ಲಿ ಗ್ರೂಪ್ ಸೃಷ್ಟಿ ಮಾಡಿ ಅಶ್ಲೀಲ ವಿಡಿಯೋ ಶೇರ್!