ಬಿಜೆಪಿ ಅಧಿಕಾರದಲ್ಲಿ ಸರ್ಕಾರಿ ಸ್ವಾಯತ್ತೆ ಸಂಸ್ಥೆಗಳ ಚೇತರಿಕೆ: ನಿರ್ಮಲಾ ಸೀತಾರಾಮನ್

ಸರ್ಕಾರಿ ಸ್ವಾಯತ್ತೆ ಸಂಸ್ಥೆಗಳನ್ನು ಕಾಂಗ್ರೆಸ್‌ ಸರ್ಕಾರ ನಿರ್ಲಕ್ಷಿಸಿದ್ದು, ನಮ್ಮ ಬಿಜೆಪಿ ಸರ್ಕಾರದ ಅಧಿಕಾರ ಅವಧಿಯಲ್ಲಿ ಅವುಗಳು ಚೇತರಿಕೆ ಕಂಡಿವೆ ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಬುಧವಾರ ತಿಳಿಸಿದ್ದಾರೆ. 

Recovery of autonomous government bodies under BJP rule Says Nirmala Sitharaman gvd

ನವದೆಹಲಿ (ಮೇ.09): ಸರ್ಕಾರಿ ಸ್ವಾಯತ್ತೆ ಸಂಸ್ಥೆಗಳನ್ನು ಕಾಂಗ್ರೆಸ್‌ ಸರ್ಕಾರ ನಿರ್ಲಕ್ಷಿಸಿದ್ದು, ನಮ್ಮ ಬಿಜೆಪಿ ಸರ್ಕಾರದ ಅಧಿಕಾರ ಅವಧಿಯಲ್ಲಿ ಅವುಗಳು ಚೇತರಿಕೆ ಕಂಡಿವೆ ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಬುಧವಾರ ತಿಳಿಸಿದ್ದಾರೆ. ಬಿಜೆಪಿ ಅವಧಿಯಲ್ಲಿ ಸರ್ಕಾರಿ ಸ್ವಾಯತ್ತೆ ಸಂಸ್ಥೆಗಳು ಹೀನಾಯಸ್ಥಿತಿಗೆ ತಲುಪಿವೆ ಎಂದು ಕಾಂಗ್ರೆಸ್‌ ನಾಯಕ ರಾಹುಲ್‌ ಆರೋಪಿಸಿದ ಬೆನ್ನಲ್ಲೇ ಅದಕ್ಕೆ ಉತ್ತರ ನೀಡಿದ್ದಾರೆ. ಸರ್ಕಾರಿ ಸ್ವಾಯತ್ತೆ ಸಂಸ್ಥೆಯಾದ ಹಿಂದೂಸ್ತಾನ್‌ ಏರೋನಾಟಿಕ್‌ ಲಿಮಿಟೆಡ್‌ (ಎಚ್‌ಎಎಲ್‌) ಸೇರಿದಂತೆ ಅನೇಕ ಸಂಸ್ಥೆಗಳನ್ನು ಕಾಂಗ್ರೆಸ್‌ ಅಧಿಕಾರದಲ್ಲಿದ್ದಾಗ ನಿರ್ಲಕ್ಷಿಸಿದ್ದರು. 

ಆದರೆ ಮೋದಿ ಅಧಿಕಾರದಲ್ಲಿ ಇವುಗಳೆಲ್ಲವು ಚೇತರಿಕಂಡಿವೆ ಎಂದು ನಿರ್ಮಲಾ ಹೇಳಿದ್ದಾರೆ. 4 ವರ್ಷದಲ್ಲಿ ಎಚ್‌ಎಲ್‌ನ ಮಾರುಕಟ್ಟೆ ಮೌಲ್ಯ ಶೇ. 1370 ರಷ್ಟು ಏರಿಕೆ ಕಂಡಿದೆ. ಅದರಲ್ಲೂ 2020ರಲ್ಲಿ ಅದರ ಆದಾಯ 17,398 ಕೋಟಿ ರು. ನಷ್ಟಿದ್ದು, 2024ರಲ್ಲಿ 2.5 ಲಕ್ಷ ಕೋಟಿ ರು. ಗೆ ಏರಿಕೆ ಕಂಡಿದೆ. 2023-24ರ ಆರ್ಥಿಕ ವರ್ಷದಲ್ಲಿ ಎಚ್‌ಎಎಲ್‌ ಸುಮಾರು 29,810 ಕೋಟಿ ರು. ಅತ್ಯಧಿಕ ಆದಾಯವನ್ನು ಗಳಿಸಿದೆ ಎಂದು ತಿಳಿಸಿದ್ದಾರೆ. ಮೋದಿ ಸರ್ಕಾರ ಪ್ರಮುಖವಾಗಿ ಭಾರತವನ್ನು ಇಂದು ಶಸ್ತ್ರಾಸ್ತ್ರಗಳ ರಫ್ತು ಮಾಡುವ ದೇಶವನ್ನಾಗಿ ಬದಲಾಯಿಸಿದೆ ಎಂದು ಹೇಳಿದ್ದಾರೆ. 

ಭಾರತ ಅಭಿವೃದ್ಧಿಗೆ ಪ್ರಧಾನಿ ಮೋದಿಯೇ ಕಾರಣ: ಅಮೆರಿಕ ಉದ್ಯಮಿ

ಪ್ರಜ್ವಲ್‌ ವಿರುದ್ಧ ಸಿದ್ದು ಸರ್ಕಾರ ಕ್ರಮ ಕೈಗೊಂಡಿಲ್ಲ: ಕರ್ನಾಟಕದ ಹಾಸನದ ಜೆಡಿಎಸ್‌ ಸಂಸದ ಪ್ರಜ್ವಲ್‌ ರೇವಣ್ಣ ಮಹಿಳೆಯರನ್ನು ಲೈಂಗಿಕವಾಗಿ ಬಳಸಿಕೊಳ್ಳುತ್ತಿರುವ ಬಗ್ಗೆ ಕರ್ನಾಟಕ ಸರ್ಕಾರಕ್ಕೆ ಒಂದು ವರ್ಷದ ಹಿಂದೆಯೇ ಗೊತ್ತಿದ್ದರೂ ಯಾವುದೇ ರೀತಿಯ ಕ್ರಮ ಕೈಗೊಂಡಿಲ್ಲ ಎಂದು ಶನಿವಾರ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಆರೋಪಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ’ಕಾಂಗ್ರೆಸ್‌ ಸರ್ಕಾರ ಒಕ್ಕಲಿಗ ಮತಗಳನ್ನು ಕಳೆದುಕೊಳ್ಳಬಹುದೆಂಬ ಭಯದಲ್ಲಿ ಲೋಕಸಭೆ ಚುನಾವಣೆಯ ಕರ್ನಾಟಕದ ಮೊದಲ ಹಂತದ ಚುನಾವಣೆ ಮುಗಿಯುವವರೆಗೂ ಮೌನ ವಹಿಸಿದೆ. ಆದರೆ ಈಗ ಅದನ್ನೇ ದೊಡ್ಡ ಸುದ್ದಿ ಎಂಬಂತೆ ಬಿಂಬಿಸುತ್ತಿದೆ. ಇದು ಅವರ ಬೂಟಾಟಿಕೆಯನ್ನು ತೋರಿಸುತ್ತದೆ’ ಎಂದು ಕಿಡಿಕಾರಿದರು.

Latest Videos
Follow Us:
Download App:
  • android
  • ios