ಜೈಲಿನಲ್ಲಿರುವ ಅರವಿಂದ್ ಕೇಜ್ರಿವಾಲ್, ಹೇಮಂತ್ ಸೊರನ್ ಅವರನ್ನು ತಕ್ಷಣವೇ ಜೈಲಿನಿಂದ ಬಿಡುಗಡೆಗೊಳಿಸಬೇಕು. ಬಿಜೆಪಿಯ ಚುನಾವಣಾ ಬಾಂಡ್ ಕುರಿತು SIT ತನಿಖೆ ಮಾಡಬೇಕು ಸೇರಿದಂತೆ ಪ್ರಮುಖ 5 ಬೇಡಿಕೆಗಳನ್ನು ಇಂಡಿಯಾ ಮೈತ್ರಿ ಕೂಟ ಮುಂದಿಟ್ಟಿದೆ. ಪ್ರಿಯಾಂಕಾ ಗಾಂಧಿ ಈ ಕುರಿತು ಘೋಷಣೆ ಮಾಡಿದ್ದಾರೆ. 

ನವದೆಹಲಿ(ಮಾ.31) ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಬಂಧನ ವಿರೋಧಿಸಿ ಇಂಡಿಯಾ ಮೈತ್ರಿ ಒಕ್ಕೂಟ ದೆಹಲಿ ರಾಮಲೀಲಾ ಮೈದಾನದಲ್ಲಿ ಬೃಹತ್ ರ್ಯಾಲಿ ನಡೆಸುತ್ತಿದೆ. ದಿಗ್ಗಜ ನಾಯಕರು ಪ್ರಧಾನಿ ಮೋದಿ ಹಾಗೂ ಬಿಜೆಪಿ ಸರ್ಕಾರದ ವಿರುದ್ದ ವಾಗ್ದಾಳಿ ನಡೆಸಿದ್ದಾರೆ. ಇದೇ ರ್ಯಾಲಿಯಲ್ಲಿ ಪಾಲ್ಗೊಂಡಿರುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಬಿಜೆಪಿ ಸರ್ಕಾರದ ವಿರುದ್ದ ಗುಡುಗಿದ್ದಾರೆ. ತಕ್ಷಣವೇ ಬಂಧನದಲ್ಲಿರುವ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಹಾಗೂ ಜಾರ್ಖಂಡ್ ಮಾಜಿ ಮುಖ್ಯಮಂತ್ರಿ ಹೇಮಂತ್ ಸೊರೆನ್ ಬಿಡುಗಡೆ ಮಾಡುವಂತೆ ಆಗ್ರಹಿಸಿದ್ದಾರೆ. 

ಪ್ರತಿಭಟನಾ ಸಮಾವೇಶದಲ್ಲಿ ಮಾತನಾಡಿದ ಪ್ರಿಯಾಂಕಾ ಗಾಂಧಿ, ಇಂಡಿಯಾ ಒಕ್ಕೂಟದ 5 ಪ್ರಮುಖ ಬೇಡಿಕೆಗಳನ್ನು ಮುಂದಿಟ್ಟಿದ್ದಾರೆ. ಈ ಪೈಕಿ ಮೊದಲ ಬೇಡಿಕೆ ಕೇಜ್ರಿವಾಲ್ ಹಾಗೂ ಸೊರನೆ ಬಿಡುಗಡೆಯಾಗಿದ್ದರೆ, ಎರಡನೇ ಬೇಡಿಕೆ, ಚುನಾವಣಾ ಬಾಂಡ್ ಮೂಲಕ ಬಿಜೆಪಿ ಪಡೆದಿರುವ ಹಣದ ಕುರಿತು ಎಸ್‌ಐಟಿ ತನಿಖೆಯಾಗಬೇಕು ಎಂದು ಆಗ್ರಹಿಸಿದೆ. 

ಇಂದು ದಿಲ್ಲಿಯಲ್ಲಿ ಇಂಡಿಯಾ ಕೂಟದ ಶಕ್ತಿ ಪ್ರದರ್ಶನ: ಲೋಕತಂತ್ರ ಬಚಾವೋ ರ್‍ಯಾಲಿ

ಲೋಕಸಭಾ ಚುನಾವಣೆಯಲ್ಲಿ ಆಯೋಗ ಎಲ್ಲರಿಗೂ ಸಮಾನ ಅವಕಾಶ ಕಲ್ಪಿಸಬೇಕು. ಇಡಿ, ಸಿಬಿಐ ಸೇರಿದಂತೆ ಕೇಂದ್ರ ತನಿಖಾ ಸಂಸ್ಥೆಗಳನ್ನು ಕೇಂದ್ರ ಸರ್ಕಾರ ತನ್ನಿಷ್ಟಕ್ಕೆ ಬಳಸಿಕೊಳ್ಳುವುದನ್ನು ಚುನಾವಣಾ ಆಯೋಗ ತಡೆಯಬೇಕು. ವಿಪಕ್ಷಗಳನ್ನು ಆರ್ಥಿಕವಾಗಿ ದುರ್ಬಲಗೊಳಿಸುವ ಕ್ರಮವನ್ನು ತಡೆಯಬೇಕು ಎಂದು ಒಟ್ಟು 5 ಬೇಡಿಕೆಗಳನ್ನು ಇಂಡಿಯಾ ಮೈತ್ರಿ ಒಕ್ಕೂಟ ಮುಂದಿಟ್ಟಿದೆ.

Scroll to load tweet…

ಅರವಿಂದ್ ಕೇಜ್ರಿವಾಲ್ ಬಂಧನ ಬೆನ್ನಲ್ಲೇ ಆಮ್ ಆದ್ಮಿಪಾರ್ಟಿ ದೇಶಾದ್ಯಂತ ಪ್ರತಿಭಟನೆ ನಡೆಸಿತ್ತು. ಇದೀಗ ಇಂಡಿಯಾ ಒಕ್ಕೂಟ ರಾಮಲೀಲಾ ಮೈದಾನದಲ್ಲಿ ಬೃಹತ್ ರ್ಯಾಲಿ ಹಮ್ಮಿಕೊಂಡಿದೆ. ಪ್ರಜಾಪ್ರಭುತ್ವ ಉಳಿಸಿ ಎಂದು ಹೋರಾಟ ನಡೆಸುತ್ತಿದೆ. ಬಿಜೆಪಿ ಸರ್ಕಾರ ಇಡಿ, ಸಿಬಿಐ ಅಸ್ತ್ರ ಬಳಸಿಕೊಂಡು ವಿಪಕ್ಷಗಳ ಮೇಲೆ ದ್ವೇಷ ಸಾಧಿಸುತ್ತಿದೆ. ಈ ಮೂಲಕ ಪ್ರಜಾಪ್ರಭುತ್ವದ ಕಗ್ಗೂಲೆ ಮಾಡುತ್ತಿದೆ ಎಂದು ಇಂಡಿಯಾ ಮೈತ್ರಿ ಒಕ್ಕೂಟದ ನಾಯಕರು ಆರೋಪಿಸಿದ್ದಾರೆ.

ಕೇಜ್ರಿವಾಲ್‌ ಸಿಂಹ ಇದ್ದಂತೆ, ಜಾಸ್ತಿ ದಿನ ಅವರನ್ನ ಜೈಲಿನಲ್ಲಿ ಇರಿಸಲಾಗದು: ಸುನಿತಾ ಕೇಜ್ರಿವಾಲ್‌!

ದೆಹಲಿ ಅಬಕಾರಿ ನೀತಿ ಹಗರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಇಡಿ ಅಧಿಕಾರಿಗಳು ಬಂಧಿಸಿದ್ದಾರೆ. ಮಾರ್ಚ್ 21ರಂದು ಬಂಧಿಸಿ ಮಾರ್ಚ್ 28ರ ವರೆಗೆ ಇಡಿ ಕಸ್ಟಡಿಗೆ ನೀಡಲಾಗಿತ್ತು. ಬಳಿಕ ಇಡಿ ಕಸ್ಟಡಿ ಅವಧಿಯನ್ನು ಏಪ್ರಿಲ್ 1ರ ವರೆಗೆ ವಿಸ್ತರಿಸಿಲಾಗಿತ್ತು.