ಪ್ರಧಾನಿ ನರೇಂದ್ರ ಮೋದಿ ಅವರ ಫೋಟೊವನ್ನು ಚುನಾವಣಾ ರಾಜ್ಯಗಳ ಕೋವಿಡ್ ವ್ಯಾಕ್ಸಿನ್ ಪ್ರಮಾಣ ಪತ್ರದಿಂದ ತೆಗೆದು ಹಾಕಲು ಮಹತ್ವದ ಆದೇಶ ನೀಡಲಾಗಿದೆ. 

ನವದೆಹಲಿ (ಮಾ.12): ಕೋವಿಡ್‌ ಲಸಿಕೆ ಪ್ರಮಾಣಪತ್ರದಲ್ಲಿ ಪ್ರಧಾನಿ ಮೋದಿ ಭಾವಚಿತ್ರವಿರುವುದು ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಎಂಬ ಆರೋಪ ಕೇಳಿಬಂದ ಬೆನ್ನಲ್ಲೇ, ಚುನಾವಣಾ ರಾಜ್ಯಗಳಲ್ಲಿನ ಕೋವಿಡ್‌ ಲಸಿಕೆ ಪ್ರಮಾಣ ಪತ್ರದಲ್ಲಿ ಪ್ರಧಾನಿ ಮೋದಿ ಫೋಟೋವನ್ನು ಕೇಂದ್ರ ಆರೋಗ್ಯ ಇಲಾಖೆ ತೆಗೆದುಹಾಕಿದೆ ಎಂದು ಮೂಲಗಳು ತಿಳಿಸಿವೆ.

 ಪಶ್ಚಿಮ ಬಂಗಾಳದಲ್ಲಿ ತೃಣಮೂಲ ಕಾಂಗ್ರೆಸ್‌ ಈ ಬಗ್ಗೆ ದೂರು ನೀಡಿದ ಬೆನ್ನಲ್ಲೇ ಫೋಟೋ ತೆಗೆದುಹಾಕುವಂತೆ ಚುನಾವಣಾ ಆಯೋಗ ಕೇಂದ್ರ ಆರೋಗ್ಯ ಇಲಾಖೆಗೆ ಸೂಚಿಸಿತ್ತು. 

ಪಂಚ ರಾಜ್ಯ ಚುನಾವಣೆಯಲ್ಲಿ ಇಂಧನ ಬೆಲೆ ಏರಿಕೆ ಬಿಸಿ; ಮತದಾರರ ಓಲೈಕೆಗೆ ಮುಂದಾಗುತ್ತಾ ಬಿಜೆಪಿ? ..

ಮಾ.9ರಂದು ಈ ಬಗ್ಗೆ ಆಯೋಗಕ್ಕೆ ಪತ್ರ ಬರೆದಿದ್ದ ಕೇಂದ್ರ ಆಯೋಗ್ಯ ಕಾರ‍್ಯದರ್ಶಿ ರಾಜೇಶ್‌ ಭೂಷಣ್‌, ‘ಅಸ್ಸಾಂ, ಕೇರಳ, ತಮಿಳುನಾಡು, ಪಶ್ಚಿಮಬಂಗಾಳ ಮತ್ತು ಪಾಂಡೀಚೇರಿಯಲ್ಲಿ ಕೋ-ವಿನ್‌ ಆ್ಯಪ್‌ನಲ್ಲಿ ಅಗತ್ಯ ಬದಲಾವಣೆಯನ್ನು ಮಾಡಲಾಗುವುದು’ ಎಂದು ತಿಳಿಸಿದ್ದರು.