* ರಂಜಾನ್ ತಿಂಗಳು ಆರಂಭವಾಗುತ್ತಿದ್ದಂತೆ ಮಸೀದಿಗಳಲ್ಲಿ ಧ್ವನಿವರ್ಧಕಗಳ ಸದ್ದು* ಗಟ್ಟಿ ಧ್ವನಿಯಲ್ಲಿ ಪ್ರಾರ್ಥನೆ ಸಲ್ಲಿಸುವ ಬಗ್ಗೆ ಮತ್ತೊಮ್ಮೆ ಚರ್ಚೆ ಆರಂಭ* ಮಸೀದಿಗಳಿಂದ ಧ್ವನಿವರ್ಧಕಗಳನ್ನು ತೆಗೆದುಹಾಕುವಂತೆ ರಾಜ್ ಠಾಕ್ರೆ ಎಚ್ಚರಿಕೆ

ಮುಂಬೈ(ಏ.03): ರಂಜಾನ್ ತಿಂಗಳು ಆರಂಭವಾಗುತ್ತಿದ್ದಂತೆ ಮಸೀದಿಗಳಲ್ಲಿ ಧ್ವನಿವರ್ಧಕಗಳ ಮೂಲಕ ಗಟ್ಟಿ ಧ್ವನಿಯಲ್ಲಿ ಪ್ರಾರ್ಥನೆ ಸಲ್ಲಿಸುವ ಬಗ್ಗೆ ಮತ್ತೊಮ್ಮೆ ಚರ್ಚೆ ಆರಂಭವಾಗಿದೆ. ಈ ಬಾರಿ ಮಹಾರಾಷ್ಟ್ರ ನವನಿರ್ಮಾಣ ಸೇನೆ ಮುಖ್ಯಸ್ಥ ರಾಜ್ ಠಾಕ್ರೆ ಇದರ ವಿರುದ್ಧ ಧ್ವನಿ ಎತ್ತಿದ್ದಾರೆ. ಮಸೀದಿಗಳಿಂದ ಧ್ವನಿವರ್ಧಕಗಳನ್ನು ತೆಗೆದುಹಾಕುವಂತೆ ಅವರು ಮಹಾರಾಷ್ಟ್ರದ ಉದ್ಧವ್ ಠಾಕ್ರೆ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಮುಂಬೈನ ಮುಸ್ಲಿಂ ಕೊಳೆಗೇರಿಗಳ ಮದರಸಾಗಳಲ್ಲಿ ಪಾಕಿಸ್ತಾನಿ ಬೆಂಬಲಿಗರು ಇರುವ ಬಗ್ಗೆ ರಾಜ್ ಠಾಕ್ರೆ ಮಾತನಾಡಿದ್ದು, ಈ ಮದರಸಾಗಳ ಮೇಲೆ ದಾಳಿ ನಡೆಸುವಂತೆ ಠಾಕ್ರೆ ಪ್ರಧಾನಿ ಮೋದಿಯವರನ್ನು ಒತ್ತಾಯಿಸಿದ್ದಾರೆ.

ಮುಂಬೈನ ಶಿವಾಜಿ ಪಾರ್ಕ್‌ನಲ್ಲಿ ನಡೆದ ರ್ಯಾಲಿಯಲ್ಲಿ ತಮ್ಮ ಬೆಂಬಲಿಗರನ್ನು ಉದ್ದೇಶಿಸಿ ಮಾತನಾಡಿದ ರಾಜ್ ಠಾಕ್ರೆ, "ಮಸೀದಿಗಳಲ್ಲಿ ಧ್ವನಿವರ್ಧಕಗಳನ್ನು ಏಕೆ ಜೋರಾಗಿ ನುಡಿಸಲಾಗುತ್ತದೆ? ಇದನ್ನು ನಿಲ್ಲಿಸದಿದ್ದರೆ ಮಸೀದಿಗಳ ಹೊರಗೆ ಧ್ವನಿವರ್ಧಕಗಳನ್ನು ಅಳವಡಿಸಿ ಜೋರಾಗಿ ಹನುಮಾನ್ ಚಾಲೀಸಾ ನುಡಿಸಲು ಪ್ರಾರಂಭಿಸುತ್ತೇವೆ ಎಂದು ಉದ್ಧವ್ ಠಾಕ್ರೆ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ. "ನಾನು ಪ್ರಾರ್ಥನೆ ಅಥವಾ ಯಾವುದೇ ನಿರ್ದಿಷ್ಟ ಧರ್ಮದ ವಿರೋಧಿಯಲ್ಲ. ನನ್ನ ಧರ್ಮದ ಬಗ್ಗೆ ನನಗೆ ಹೆಮ್ಮೆ ಇದೆ ಎಂದಿದ್ದಾರೆ. ಇದೇ ವೇಳೆ ತಮ್ಮ ಸೋದರ ಸಂಬಂಧಿ ಹಾಗೂ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ವಿರುದ್ಧ ವ್ಯಂಗ್ಯವಾಡಿದ ಎಂಎನ್‌ಎಸ್ ಮುಖ್ಯಸ್ಥ ರಾಜ್ ಠಾಕ್ರೆ, ಚುನಾವಣಾ ಸಮಯದಲ್ಲಿ ತಮ್ಮನ್ನು ವಿರೋಧಿಸಿದ ಶಕ್ತಿಗಳೊಂದಿಗೆ ಮೈತ್ರಿ ಮಾಡಿಕೊಂಡು ಸಿಎಂ ಸರ್ಕಾರ ರಚಿಸಿದ್ದಾರೆ. ಈ ಮೂಲಕ ಮತದಾರರಿಗೆ ದ್ರೋಹ ಬಗೆದಿದ್ದಾರೆ ಎಂದಿದ್ದಾರೆ.

ಪ್ರಧಾನಿ ಮೋದಿ ಯಾವಾಗಲೂ ದೇವೇಂದ್ರ ಫಡ್ನವೀಸ್ ಅವರನ್ನು ಮುಖ್ಯಮಂತ್ರಿ ಎಂದು ಬಿಂಬಿಸುತ್ತಿದ್ದರು

ಕಳೆದ ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ದೇವೇಂದ್ರ ಫಡ್ನವೀಸ್ ಅವರನ್ನು ಮುಖ್ಯಮಂತ್ರಿ ಎಂದು ಬಿಂಬಿಸಿದ್ದರು, ಆಗ ಉದ್ಧವ್ ಠಾಕ್ರೆ ಒಂದು ಮಾತನ್ನೂ ಆಡಲಿಲ್ಲ ಎಂದು ರಾಜ್ ಠಾಕ್ರೆ ಹೇಳಿದರು. ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ನಂತರವೇ ಅವರಿಗೆ ಮುಖ್ಯಮಂತ್ರಿಯಾಗುವ ಮತ್ತು ವಿರೋಧ ಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಳ್ಳುವ ಆಲೋಚನೆ ಬಂದಿತ್ತು ಎನ್ನುವ ಮೂಲಕ ರಾಜ್ ಠಾಕ್ರೆ ಅವರು ಉದ್ಧವ್ ಠಾಕ್ರೆ ನೇತೃತ್ವದ ಮಹಾ ವಿಕಾಸ್ ಅಘಾಡಿ ಸರ್ಕಾರದ ಭಾಗವಾಗಿರುವ ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ಮೇಲೆ ದಾಳಿ ನಡೆಸಿದರು.

ಮಹಾರಾಷ್ಟ್ರದಲ್ಲಿ ಎನ್‌ಸಿಪಿ ಜಾತಿವಾದವನ್ನು ಹರಡುತ್ತಿದೆ ರಾಜ್ ಠಾಕ್ರೆ ಆರೋಪ

ಸರ್ಕಾರ ರಚನೆಯಾದಾಗಿನಿಂದ ಮಹಾರಾಷ್ಟ್ರದಲ್ಲಿ ಎನ್‌ಸಿಪಿ ಜಾತಿ ಆಧಾರಿತ ದ್ವೇಷವನ್ನು ಹರಡುತ್ತಿದೆ ಎಂದು ರಾಜ್ ಠಾಕ್ರೆ ಆರೋಪಿಸಿದರು. ಎಂಎನ್‌ಎಸ್ ಮುಖ್ಯಸ್ಥರು, “ಇಂದು ಜನರು ರಾಜ್ಯದಲ್ಲಿ ಜಾತಿ ಸಮಸ್ಯೆಗಳ ಬಗ್ಗೆ ಹೋರಾಡುತ್ತಿದ್ದಾರೆ. ನಾವು ಇದರಿಂದ ಹೊರಬಂದು ಹಿಂದೂ ಆಗುವುದು ಯಾವಾಗ? ಎಂದು ಪ್ರಶ್ನಿಸಿದ್ದಾರೆ. ಇನ್ನು ಇತ್ತೀಚೆಗೆ ಮುಂಬೈನಲ್ಲಿ ಶಾಸಕರಿಗೆ ಮನೆ ನೀಡುವ ರಾಜ್ಯ ಸರ್ಕಾರದ ಘೋಷಣೆಯನ್ನು ರಾಜ್ ಠಾಕ್ರೆ ಟೀಕಿಸಿದ್ದರು ಎಂಬುವುದು ಉಲ್ಲೇಖನೀಯ.

ಮುಂಬೈನಲ್ಲಿ ಶಾಸಕರಿಗೆ ಫ್ಲಾಟ್‌ಗಳನ್ನು ನೀಡುವ ನಿರ್ಧಾರ ಟೀಕಿಸಿದ್ದಾ ಎಂಎನ್‌ಎಸ್ ಮುಖ್ಯಸ್ಥ

ಅವರ (ಶಾಸಕರ) ಪಿಂಚಣಿಯನ್ನು ಮೊದಲು ನಿಲ್ಲಿಸಬೇಕು ಎಂದು ಅವರು ಹೇಳಿದ್ದರು. ಅವರು ತಮ್ಮ ಕೆಲಸದಿಂದ ಜನರಿಗೆ ಏನಾದರೂ ಉಪಕಾರ ಮಾಡುತ್ತಿದ್ದಾರೆಯೇ? ಅವರ ಬಂಗಲೆಗಳನ್ನು ತೆಗೆದುಕೊಂಡು ನಂತರ ಅವರಿಗೆ ಮನೆಗಳನ್ನು ನೀಡಿ, ಈ ಯೋಜನೆಯಲ್ಲಿ ಮುಖ್ಯಮಂತ್ರಿಗಳಿಗೆ ಏನು ಇಷ್ಟ? ಈ ಯೋಜನೆಯಲ್ಲಿ ಆಸಕ್ತಿದಾಯಕ ಏನಾದರೂ ಇದೆಯೇ?" ಎಂದೂ ಪ್ರಶ್ನಿಸಿದ್ದರು.