Asianet Suvarna News Asianet Suvarna News

‘ಮೀಸಲಾತಿ’ ಮೂಲಭೂತ ಹಕ್ಕಲ್ಲ'; ಸುಪ್ರೀಂ ಕೋರ್ಟ್‌ ಮಹತ್ವದ ಅಭಿಪ್ರಾಯ

 ‘ಮೀಸಲು ಎಂಬುದು ಮೂಲಭೂತ ಹಕ್ಕು ಅಲ್ಲ’ ಎಂದು ಸುಪ್ರೀಂ ಕೋರ್ಟ್‌ ಮಹತ್ವದ ಅಭಿಪ್ರಾಯ ವ್ಯಕ್ತಪಡಿಸಿದೆ. ತಮಿಳುನಾಡಿನ ವೈದ್ಯ ಕಾಲೇಜುಗಳಲ್ಲಿ ಇತರ ಹಿಂದುಳಿದ ವರ್ಗಕ್ಕೆ (ಒಬಿಸಿ) ಮೀಸಲು ನೀಡಿಲ್ಲ. ಇದರಿಂದ ತಮ್ಮ ಮೂಲಭೂತ ಹಕ್ಕಿಗೆ ಚ್ಯುತಿ ಆಗಿದೆ ಎಂದು ಅರ್ಜಿಗಳನ್ನು ಸಲ್ಲಿಸಲಾಗಿತ್ತು. ಈ ಕುರಿತು ವಿಚಾರಣೆ ನಡೆಸಿದ ನ್ಯಾ ಎಲ್‌. ನಾಗೇಶ್ವರರಾವ್‌ ಅವರಿದ್ದ ಪೀಠ, ‘ಮೀಸಲು ಹಕ್ಕು ಎನ್ನುವುದು ಮೂಲಭೂತ ಹಕ್ಕು ಅಲ್ಲ. ಇದು ಇಂದಿನ ಕಾನೂನು’ ಎಂದು ಮಹತ್ವದ ಅಭಿಪ್ರಾಯ ವ್ಯಕ್ತಪಡಿಸಿತು.

Reservation not a fundamental right supreme court
Author
Bengaluru, First Published Jun 12, 2020, 9:47 AM IST

ನವದೆಹಲಿ (ಜೂ. 12):  ‘ಮೀಸಲು ಎಂಬುದು ಮೂಲಭೂತ ಹಕ್ಕು ಅಲ್ಲ’ ಎಂದು ಸುಪ್ರೀಂ ಕೋರ್ಟ್‌ ಮಹತ್ವದ ಅಭಿಪ್ರಾಯ ವ್ಯಕ್ತಪಡಿಸಿದೆ. ತಮಿಳುನಾಡಿನ ವೈದ್ಯ ಕಾಲೇಜುಗಳಲ್ಲಿ ಇತರ ಹಿಂದುಳಿದ ವರ್ಗಕ್ಕೆ (ಒಬಿಸಿ) ಮೀಸಲು ನೀಡಿಲ್ಲ. ಇದರಿಂದ ತಮ್ಮ ಮೂಲಭೂತ ಹಕ್ಕಿಗೆ ಚ್ಯುತಿ ಆಗಿದೆ ಎಂದು ಅರ್ಜಿಗಳನ್ನು ಸಲ್ಲಿಸಲಾಗಿತ್ತು.

ಈ ಕುರಿತು ವಿಚಾರಣೆ ನಡೆಸಿದ ನ್ಯಾ ಎಲ್‌. ನಾಗೇಶ್ವರರಾವ್‌ ಅವರಿದ್ದ ಪೀಠ, ‘ಮೀಸಲು ಹಕ್ಕು ಎನ್ನುವುದು ಮೂಲಭೂತ ಹಕ್ಕು ಅಲ್ಲ. ಇದು ಇಂದಿನ ಕಾನೂನು’ ಎಂದು ಮಹತ್ವದ ಅಭಿಪ್ರಾಯ ವ್ಯಕ್ತಪಡಿಸಿತು. ಅಲ್ಲದೆ, ಈ ಅರ್ಜಿಗಳನ್ನು ಮದ್ರಾಸ್‌ ಹೈಕೋರ್ಟ್‌ನಲ್ಲಿ ಸಲ್ಲಿಸಿ ಎಂದು ಸೂಚನೆ ನೀಡಿತು.

ವಲಸಿಗ ಕಾರ್ಮಿಕರ ನೆರವಿಗೆ ಧಾವಿಸಲು ರಾಜ್ಯಗಳಿಗೆ ಗಡುವು!

ಫೆಬ್ರವರಿಯಲ್ಲಿ ಉತ್ತರಾಖಂಡದ ಪ್ರಕರಣಕ್ಕೆ ಸಂಬಂಧಿಸಿದಂತೆ ತೀರ್ಪು ನೀಡಿದ್ದ ಸುಪ್ರೀಂ ಕೋರ್ಟ್‌, ‘ಸರ್ಕಾರಿ ಉದ್ಯೋಗದಲ್ಲಿ ಮೀಸಲು ಎಂಬುದು ಮೂಲಭೂತ ಹಕ್ಕು ಅಲ್ಲ. ಎಸ್‌ಸಿ-ಎಸ್‌ಟಿ ವರ್ಗದವರಿಗೆ ಮೀಸಲು ನೀಡಿ ಎಂದು ಕೋರ್ಟ್‌ಗಳಿಗೆ ಆದೇಶ ನೀಡಲು ಅಧಿಕಾರವಿಲ್ಲ’ ಎಂದಿತ್ತು. ಈ ತೀರ್ಪಿನ ಬಗ್ಗೆ ದೇಶದಲ್ಲಿ ವ್ಯಾಪಕ ಚರ್ಚೆ ನಡೆದಿದ್ದವು. ಇದರ ಬೆನ್ನಲ್ಲೇ ಈಗ ಶಿಕ್ಷಣದಲ್ಲಿ ಮೀಸಲಿಗೆ ಸಂಬಂಧಿಸಿದ ಕೋರ್ಟ್‌ನ ಈ ಅಭಿಪ್ರಾಯ ಹೊರಬಿದ್ದಿದೆ.

Follow Us:
Download App:
  • android
  • ios