Asianet Suvarna News Asianet Suvarna News

ಗ್ಯಾಸ್‌ ಬೆಲೆಯಲ್ಲಿ 100 ರೂಪಾಯಿ ಇಳಿಕೆ ಮಾಡಿದ ಕೇಂದ್ರ ಸರ್ಕಾರ, ಹೊಸ ದರ ಇಲ್ಲಿದೆ

ಮೂಲಗಳ ಪ್ರಕಾರ, ಇಂದಿನಿಂದ ದೆಹಲಿಯಲ್ಲಿ ವಾಣಿಜ್ಯ ಬಳಕೆಗೆ ಎಲ್‌ಪಿಜಿ ಗ್ಯಾಸ್‌ ಸಿಲಿಂಡರ್‌ನ ಚಿಲ್ಲರೆ ಮಾರಾಟ ಬೆಲೆ 1680 ರೂಪಾಯಿ ಆಗಿದ್ದು, 100 ರೂಪಾಯಿ ಇಳಿಕೆಯಾಗಿದೆ.
 

retail sales price of a commercial LPG slashed Check latest rates here san
Author
First Published Aug 1, 2023, 10:48 AM IST | Last Updated Aug 1, 2023, 10:48 AM IST

ನವದೆಹಲಿ (ಆ.1):ತೈಲ ಮಾರುಕಟ್ಟೆ ಕಂಪನಿಗಳು ವಾಣಿಜ್ಯ ಬಳಕೆಯ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳ ಬೆಲೆಯನ್ನು ಮಂಗಳವಾರ ಇಳಿಸಿವೆ. 19ಕೆಜಿ ವಾಣಿಜ್ಯ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳ ಬೆಲೆ (99.75 ರೂಪಾಯಿ) ಅಂದಾಜು 100 ರೂಪಾಯಿ ಇಳಿಕೆಯಾಗಿದೆ. ಆದರೆ, ಗೃಹಬಳಕೆಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯಲ್ಲಿ ಯಾವುದೇ ಬದಲಾವಣೆ ಮಾಡಲಾಗಿಲ್ಲ. 19 ಕೆಜಿ ವಾಣೀಜ್ಯ ಎಲ್‌ಪಿಜಿ ಸಿಲಿಂಡರ್‌ ದರವನ್ನು ಜುಲೈನಲ್ಲಿ ಕೊನೆಯದಾಗ ಪರಿಷ್ಕರಣೆ ಮಾಡಲಾಗಿತ್ತು.  ತೆರಿಗೆಗಳನ್ನು ಅವಲಂಬಿಸಿ ಬೆಲೆಗಳು ರಾಜ್ಯದಿಂದ ರಾಜ್ಯಕ್ಕೆ ಇದು ಬದಲಾಗುವ ಸಾಧ್ಯತೆ ಇದೆ. ಮೂಲಗಳ ಪ್ರಕಾರ, ಇಂದಿನಿಂದ ದೆಹಲಿಯಲ್ಲಿ ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್‌ನ ರಿಟೇಲ್‌ ದರ 1680 ರೂಪಾಯಿ ಆಗಿರಲಿದೆ ಎನ್ನಲಾಗಿದೆ. ಇನ್ನು ಕೋಲ್ಕತ್ತಾ, ಮುಂಬೈ ಹಾಗೂ ಚೆನ್ನೈನಲ್ಲಿ ಕ್ರಮವಾಗು 1802, 1640 ಹಾಗೂ 1852.50 ರೂಪಾಯಿ ಆಗಿರಲಿದೆ. ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿನ ಕಚ್ಚಾ ತೈಲ ಬೆಲೆಗಳು ದೇಶೀಯ ಮಾರುಕಟ್ಟೆಯಲ್ಲಿ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಗಳ ಮೇಲೆ ಪರಿಣಾಮ ಬೀರುತ್ತವೆ.

ಹಾಲಿ ವರ್ಷದ ಮಾರ್ಚ್‌ 1 ರಿಂದ 14.2 ಕೆಜಿ ಎಲ್‌ಪಿಜಿ ಗೃಹಬಳಕೆಯೆ ಗ್ಯಾಸ್‌ ಸಿಲಿಂಡರ್‌ ಬೆಲೆಯನ್ನು ಪರಿಷ್ಕರಣೆ ಮಾಡಲಾಗಿತ್ತು. ಸಬ್ಸಿಡಿ ರಹಿತ ದೇಶೀಯ ಎಲ್‌ಪಿಜಿ ಸಿಲಿಂಡರ್‌ನ ಬೆಲೆ ಕ್ರಮವಾಗಿ ದೆಹಲಿ, ಕೋಲ್ಕತ್ತಾ, ಮುಂಬೈ ಮತ್ತು ಚೆನ್ನೈನಲ್ಲಿ ₹1,103, ₹1,129, ₹1,102.50 ಮತ್ತು ₹1,118.50 ಆಗಿದೆ.

 

ತೆರಿಗೆ ಹೆಸರಲ್ಲಿ ಕಲೆಕ್ಷನ್‌ಗೆ ಕುಂತ ಸರ್ಕಾರ, ಬಡವರ ಬದುಕು ನಾಳೆಯಿಂದ ದುರ್ಬರ!

ಪ್ರತಿ ತಿಂಗಳೂ ಎಲ್‌ಪಿಜಿ ಬೆಲೆ ಪರಿಷ್ಕರಣೆ: ರಾಜ್ಯ ನಡೆಸುವ ತೈಲ ಮಾರುಕಟ್ಟೆ ಕಂಪನಿಗಳು (OMC ಗಳು) ಸಾಮಾನ್ಯವಾಗಿ ಪ್ರತಿ ತಿಂಗಳ ಮೊದಲ ದಿನದಂದು ಎಲ್‌ಪಿಜಿ ಬೆಲೆಗಳನ್ನು ಪರಿಷ್ಕರಿಸುತ್ತವೆ. ಸ್ಥಳೀಯ ತೆರಿಗೆಗಳನ್ನು ಅವಲಂಬಿಸಿ ದೇಶೀಯ ಅಡುಗೆ ಅನಿಲದ ಬೆಲೆಗಳು ರಾಜ್ಯದಿಂದ ರಾಜ್ಯಕ್ಕೆ ಬದಲಾಗುತ್ತವೆ. ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆಗಳು ದೇಶೀಯ ಎಲ್‌ಪಿಜಿ ಬೆಲೆಗಳ ಮೇಲೆ ಪರಿಣಾಮ ಬೀರುತ್ತವೆ. ಇಂದಿನಿಂದಲೇ ಹೊಸ ದರಗಳು ಅನ್ವಯವಾಗಲಿದೆ.

 

9 ವರ್ಷದಲ್ಲಿ 190 ಮಿಲಿಯನ್ LPG, ಎಲ್ಲಾ ಗ್ರಾಮಕ್ಕೆ ವಿದ್ಯುತ್ ಸಂಪರ್ಕ; ಜಿ20 ಸಭೆಯಲ್ಲಿ ಮೋದಿ ಭಾಷಣ!

Latest Videos
Follow Us:
Download App:
  • android
  • ios