ಧ್ರುವ್ ರಾಥಿ ವಿಡಿಯೋ ಹಂಚಿ ತಪ್ಪುಮಾಡಿದ್ದೇನೆ, ಸುಪ್ರೀಂ ಕೋರ್ಟ್‌ನಲ್ಲಿ ಕೇಜ್ರಿವಾಲ್ ತಪ್ಪೊಪ್ಪಿಗೆ!
ಬಿಜೆಪಿ ವಿರುದ್ಧ ಮಾನಹಾನಿಕರ ವಿಡಿಯೋ ಮಾಡಿದ್ದ ಯೂಟ್ಯೂಬರ್ ಧ್ರುವ್ ರಾಥಿ ವಿಡಿಯೋವನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡು ತಪ್ಪು ಮಾಡಿದ್ದೇನೆ ಎಂದು ಸುಪ್ರೀಂ ಕೋರ್ಟ್‌ನಲ್ಲಿ ಸಿಎಂ ಅರವಿಂದ್ ಕೇಜ್ರಿವಾಲ್ ಕ್ಷಮೆ ಕೇಳಿದ್ದಾರೆ.
ನವದೆಹಲಿ(ಫೆ.26) ಕ್ರಿಮಿನಲ್ ಢಿಫಮೇಶನ್ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸುಪ್ರೀಂ ಕೋರ್ಟ್‌ನಲ್ಲಿ ತಪ್ಪೊಪ್ಪಿಕೊಂಡಿದ್ದಾರೆ. ಬಿಜೆಪಿ ವಿರುದ್ಧ ಮಾನಹಾನಿಕರ ವಿಡಿಯೋ ಒಂದನ್ನು ಯೂಟ್ಯೂಬರ್ ಧ್ರುವ್ ರಾಠಿ ಪೋಸ್ಟ್ ಮಾಡಿದ್ದರು. ಈ ವಿಡಿಯೋವನ್ನು ಅರವಿಂದ್ ಕೇಜ್ರಿವಾಲ್ ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡು ಬಿಜೆಪಿ ವಿರುದ್ಧ ಹರಿಹಾಯ್ದಿದ್ದರು. ಈ ಪ್ರಕರಣ ವಿರುದ್ಧ ಬಿಜೆಪಿ ಐಟಿ ವಿಭಾಗ ಕ್ರಿಮಿನಲ್ ಡಿಫಮೇಶನ್ ಪ್ರಕರಣ ದಾಖಲಿಸಿತ್ತು. ಈ ಪ್ರಕರಣ ಸಂಬಂಧ ಇಂದು ಸುಪ್ರೀಂ ಕೋರ್ಟ್‌ನಲ್ಲಿ ಅರವಿಂದ್ ಕೇಜ್ರಿವಾಲ್, ನನ್ನಿಂದ ತಪ್ಪಾಗಿದೆ ಎಂದು ತಪ್ಪೊಪ್ಪಿಕೊಂಡಿದ್ದಾರೆ.
ಅರವಿಂದ್ ಕೇಜ್ರಿವಾಲ್ ಪರ ವಕೀಲ ಅಭಿಷೇಕ್ ಅನುಸಿಂಗ್ವಿ ಕೋರ್ಟ್‌ಗೆ ಹಾಜರಾಗಿದ್ದರು. ಈ ಪ್ರಕರಣದಿಂದ ಪಾರಾಗಲು ಅರವಿಂದ್ ಕೇಜ್ರಿವಾಲ್‌ಗೆ ಬೇರೆ ದಾರಿಗಳು ಕಾಣದಾಗಿದೆ. ಬಿಜೆಪಿ ವಿರುದ್ಧ ಮಾನಹಾನಿಕರ ವಿಡಿಯೋವನ್ನು ಪೋಸ್ಟ್ ಮಾಡಿದ್ದು ತಪ್ಪು. ಇದನ್ನು ನಾನು ಒಪ್ಪಿಕೊಳ್ಳುತ್ತೇನೆ ಎಂದು ಕೇಜ್ರಿವಾಲ್ ಪರ ವಕೀಲರು ಕೋರ್ಟ್ ಮುಂದೆ ಹೇಳಿದ್ದಾರೆ
ಲೋಕಸಭಾ ಚುನಾವಣೆಗೂ ಸಿಎಂ ಕೇಜ್ರಿವಾಲ್ ಫ್ರೀ ಆಫರ್ ಘೋಷಣೆ, 7ಸ್ಥಾನ ಗೆದ್ದರೆ ಉಚಿತ, ಉಚಿತ!
ನ್ಯಾಯಮೂರ್ತಿ ಸಂಜೀವ್ ಖನ್ನ ಹಾಗೂ ನ್ಯಾಯಮೂರ್ತಿ ದೀಪಾಂಕರ್ ದತ್ತ ಈ ಕುರಿತು ವಿಚಾರಣೆ ನಡೆಸಿದ್ದಾರೆ. ಈ ವೇಳೆ ಕೇಜ್ರಿವಾಲ್ ತಪ್ಪೊಪ್ಪಿಕೊಂಡಿರುವ ಕಾರಣ ಇದೇ ಪ್ರಕರಣ ಸಂಬಂಧ ದೆಹಲಿ ಹೈಕೋರ್ಟ್‌ನಲ್ಲಿ ನಡೆಯುತ್ತಿದ್ದ ಮಾನನಷ್ಟ ಮೊಕದ್ದಮೆ ಪ್ರಕರಣಕ್ಕೆ ತಡೆ ನೀಡಿದೆ. ಇಷ್ಟೇ ಅಲ್ಲ ಮುಂದಿನ ವಿಚಾರಣೆಯನ್ನು ಮಾರ್ಚ್ 11ಕ್ಕೆ ಮುಂದೂಡಿದೆ. ಇತ್ತ ದೂರುದಾರರಲ್ಲಿ ಈ ಪ್ರಕರಣವನ್ನು ಅಂತ್ಯಗೊಳಿಸಲು ಬಯಸುತ್ತಿದ್ದೀರಾ ಎಂದು ಸುಪ್ರೀಂ ಕೋರ್ಟ್ ಪ್ರಶ್ನಿಸಿದೆ.
ಧ್ರುವ್ ರಾಥಿ ಬಿಜೆಪಿ ವಿರುದ್ಧ, ಪ್ರಧಾನಿ ನರೇಂದ್ರ ಮೋದಿ ವಿರುದ್ದ ಹಲವು ವಿಡಿಯೋಗಳನ್ನು ಪೋಸ್ಟ್ ಮಾಡಿದ್ದಾರೆ. ಈ ಪೈಕಿ ಬಿಜೆಪಿ ಐಟಿ ಸೆಲ್ ಕುರಿತು ಮಾನಹಾನಿಕರ ವಿಡಿಯೋವನ್ನು ಸಿಎಂ ಅರವಿಂದ್ ಕೇಜ್ರಿವಾಲ್ ಟ್ವೀಟ್ ಮಾಡಿದ್ದರು. ಈ ವಿಡಿಯೋ ಟ್ವೀಟ್ ಮಾಡಿ , ಬಿಜೆಪಿ ವಿರುದ್ದ ಹರಿಹಾಯ್ದಿದ್ದರು. ಅರವಿಂದ್ ಕೇಜ್ರಿವಾಲ್ ಬಿಜೆಪಿ ವಿರುದ್ದ ಸುಳ್ಳು ಸುದ್ದಿ ಹರಡುತ್ತಿದ್ದಾರೆ. ಅಪಪ್ರಚಾರ ಮಾಡಿ, ಜನರಲ್ಲಿ ಗೊಂದಲ ಸೃಷ್ಟಿಸುತ್ತಿದ್ದಾರೆ ಎಂದು ಬಿಜೆಪಿ ಐಟಿ ಸೆಲ್ ಕೇಜ್ರಿವಾಲ್ ವಿರುದ್ದ ಮಾನನಷ್ಟ ಮೊಕದಮ್ಮೆ ದಾಖಲಿಸಿತ್ತು.
7ನೇ ಬಾರಿ ಇಡಿ ವಿಚಾರಣೆಯಿಂದ ತಪ್ಪಿಸಿಕೊಂಡ ಸಿಎಂ ಕೇಜ್ರಿವಾಲ್, ಹೊಸ ದಾಳ ಉರುಳಿಸಿದ ಆಪ್!
ಇತ್ತ ದೆಹಲಿ ಅಬಕಾರಿ ಹಗರಣದಲ್ಲಿ ಅರವಿಂದ್ ಕೇಜ್ರಿವಾಲ್ 7ನೇ ಬಾರಿಗೆ ಇಡಿ ವಿಚಾರಣೆಗ ಗೈರಾಗಿದ್ದಾರೆ. ಇಡೀ 7ನೇ ಬಾರಿಗೆ ಸಮನ್ಸ್ ನೀಡಿತ್ತು. ಆದರೆ ಪ್ರಕರಣ ದೆಹಲಿ ಹೈಕೋರ್ಟ್‌ನಲ್ಲಿರುವ ಕಾರಣ ತೀರ್ಪು ಬಂದ ಬಳಿಕ ನಿರ್ಧರಿಸುವುದಾಗಿ ಹೇಳಿದ್ದಾರೆ.