ತೆಲಂಗಾಣದ 2ನೇ ಮುಖ್ಯಮಂತ್ರಿಯಾಗಿ ರೇವಂತ್ ರೆಡ್ಡಿ ಪ್ರಮಾಣ ವಚನ ಸ್ವೀಕಾರ!
ತೆಲಂಗಾಣ ನೂತನ ಮುಖ್ಯಮಂತ್ರಿಯಾಗಿ ರೇವಂತ್ ರೆಡ್ಡಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಇನ್ನು ಉಪಮುಖ್ಯಮಂತ್ರಿ ಸೇರಿದಂತೆ 12 ಸಚಿವರು ಇದೇ ಸಮಾರಂಭದಲ್ಲಿ ರೇವಂತ್ ರೆಡ್ಡಿ ಸಂಪುಟ ಸೇರಿಕೊಂಡಿದ್ದಾರೆ.
ಹೈದರಾಬಾದ್(ಡಿ.07) ಪಂಚ ರಾಜ್ಯ ಚುನಾವಣೆಯಲ್ಲಿ ತೆಲಂಗಾಣದಲ್ಲಿ ಪೂರ್ಣ ಬಹುಮತ ಪಡೆದ ಕಾಂಗ್ರೆಸ್ ಸರ್ಕಾರ ರಚಿಸಿದೆ. ತೆಲಂಗಾಣದ ನೂತನ ಮುಖ್ಯಮಂತ್ರಿಯಾಗಿ ರೇವಂತ್ ರೆಡ್ಡಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ತೆಲಂಗಾಣ ರಾಜ್ಯಪಾಲೆ ತಮಿಳ್‌ಸಾಯಿ ಸೌಂದರ್ಯರಾಜನ್ ಪ್ರತಿಜ್ಞಾವಿಧಿ ಬೋಧಿಸಿದ್ದಾರೆ. ಉಪಮುಖ್ಯಮಂತ್ರಿಯಾಗಿ ಭಟ್ಟಿ ವಿಕ್ರಮಾರ್ಕ ಮಲ್ಲು ಪ್ರಮಾಣ ವಚನ ಸ್ವೀಕರಿಸಿದ್ದಾರೆ. ರೇವಂತ್ ರೆಡ್ಡಿ ಜೊತೆ 12 ಸಚಿವರು ಪ್ರಮಾಣ ವಚನ ಸ್ವೀಕರಿಸಿದ್ದಾರೆ.
ಎಲ್‌ಬಿ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಪ್ರಮಾಣ ವಚನ ಸಮಾರಂಭ ಕಾರ್ಯಕ್ರಮಕ್ಕೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಸೋನಿಯಾ ಗಾಂಧಿ ಹಿಮಾಚಲ ಪ್ರದೇಶ ಸಿಎಂ, ಕರ್ನಾಟಕ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಪ್ರಿಯಾಂಕಾ ಗಾಂಧಿ ಸೇರಿದಂತೆ ಹಲವು ನಾಯಕರು ಪಾಲ್ಗೊಂಡಿದ್ದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ರಾಫಿಕ್‌ನಲ್ಲಿ ಸಿಲುಕಿದ ಕಾರಣ ತಕ್ಕ ಸಮಯಕ್ಕೆ ಕಾರ್ಯಕ್ರಮದಲ್ಲಿ ಹಾಜರಾಗಲು ಸಾಧ್ಯವಾದಲಿಲ್ಲ. ರೇವಂತ್ ರೆಡ್ಡಿ ಸೇರಿದಂತೆ 12 ನಾಯಕರು ಪ್ರಮಾಣ ವಚನ ಸ್ವೀಕರಿಸಿದ್ದಾರೆ.
ಕೇಂದ್ರ ಸಚಿವ ಜೈಪಾಲ್ ರೆಡ್ಡಿ ಮಗಳನ್ನೇ ಪ್ರೀತಿಸಿ ಮದುವೆಯಾಗಿದ್ದ ರೇವಂತ್ ರೆಡ್ಡಿ!
ತೆಲಂಗಾಣ ಸಚಿವ ಸಂಪುಟ
ರೇವಂತ್ ರೆಡ್ಡಿ : ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಾರ
ಭಟ್ಟಿ ವಿಕ್ರಮಾರ್ಕ ಮಲ್ಲು: ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಾರ
ನಲಮಾಡ ಉತ್ತಮ ಕುಮಾರ್ ರೆಡ್ಡಿ: ಸಚಿವರಾಗಿ ಪ್ರಮಾಣ ವಚನ ಸ್ವೀಕಾರ
ಸಿ ದಾಮೋದರ್ ರಾಜನರಸಂಹ:ಸಚಿವರಾಗಿ ಪ್ರಮಾಣ ವಚನ ಸ್ವೀಕಾರ
ಕೊಮಾಟಿ ರೆಡ್ಡಿ ವೆಂಕಟ ರೆಡ್ಡಿ:ಸಚಿವರಾಗಿ ಪ್ರಮಾಣ ವಚನ ಸ್ವೀಕಾರ
ದುದ್ದಿಲ್ಲಾ ಶ್ರೀಧರ್ ಬಾಬು:ಸಚಿವರಾಗಿ ಪ್ರಮಾಣ ವಚನ ಸ್ವೀಕಾರ
ಪೊನಗುಲೇತಿ ಶ್ರೀನಿವಾಸ್ ರೆಡ್ಡಿ:ಸಚಿವರಾಗಿ ಪ್ರಮಾಣ ವಚನ ಸ್ವೀಕಾರ
ಪೊನ್ನಂ ಪ್ರಭಾಕರ್:ಸಚಿವರಾಗಿ ಪ್ರಮಾಣ ವಚನ ಸ್ವೀಕಾರ
ಕೊಂಡಾ ಸುರೇಖಾ:ಸಚಿವರಾಗಿ ಪ್ರಮಾಣ ವಚನ ಸ್ವೀಕಾರ
ಡಿ ಅನಸೂಯ ಸೀತಕ್ಕಾ:ಸಚಿವರಾಗಿ ಪ್ರಮಾಣ ವಚನ ಸ್ವೀಕಾರ
ತುಮ್ಮಲ ನಾಗೇಶ್ವರ್ ರಾವ್:ಸಚಿವರಾಗಿ ಪ್ರಮಾಣ ವಚನ ಸ್ವೀಕಾರ
ಜುಪ್ಪಲಿ ಕೃಷ್ಣ ರಾವ್:ಸಚಿವರಾಗಿ ಪ್ರಮಾಣ ವಚನ ಸ್ವೀಕಾರ
ಗದ್ದಂ ಪ್ರಸಾದ್ ಕುಮಾರ್ :ಸಚಿವರಾಗಿ ಪ್ರಮಾಣ ವಚನ ಸ್ವೀಕಾರ
ಕನುಗೋಲು ಮಾತು ಕೇಳದೆ 2 ರಾಜ್ಯ ಸೋತ ಕಾಂಗ್ರೆಸ್: ಕಮಲನಾಥ್, ಗೆಹ್ಲೋಟ್‌ರಿಂದ ನಿರ್ಲಕ್ಷ್ಯ
ಇತ್ತೀಚೆಗೆ ನಡೆದ ವಿಧಾನಸಭಾ ಚುನಾವಣೆಯಲ್ಲಿ 119 ಸ್ಥಾನಗಳ ಪೈಕಿ ಕಾಂಗ್ರೆಸ್ 64 ಸ್ಥಾನ ಗೆದ್ದು ಅಧಿಕಾರಕ್ಕೆ ಬಂದಿತ್ತು. ಸಂಸದರೂ ಆಗಿರುವ ರೇವಂತ್ ರೆಡ್ಡಿ ರಾಜ್ಯ ಕಾಂಗ್ರೆಸ್ ಘಟಕದ ಅಧ್ಯಕ್ಷರಾಗಿಯೂ ಪಕ್ಷವನ್ನು ಮುನ್ನಡೆಸಿದ್ದರು. ಈ ಹಿನ್ನೆಲೆಯಲ್ಲಿ ಅವರನ್ನು ಸಿಎಂ ಸ್ಥಾನಕ್ಕೆ ಆಯ್ಕೆ ಮಾಡಲಾಗಿದೆ. ಇವರು, ಕೇಂದ್ರದ ಮಾಜಿ ಸಚಿವ ಜೈಪಾಲ್ ರೆಡ್ಡಿ ಅವರ ಅಳಿಯ.