ಪ್ರಧಾನಿ ನರೇಂದ್ರ ಮೋದಿ ಅವರನ್ನು 'ಹುಚ್ಚ ಮೋದಿ' ಎಂದು ಕರೆಯವ ಮೂಲಕ ಮತ್ತೊಂದು ವಿವಾದ ಎಬ್ಬಿಸಿದ್ದ ಕಾಂಗ್ರೆಸ್‌ ಸಂಸದ ಅಧೀರ್‌ ರಂಜನ್‌ ಚೌಧರಿ ಇದಕ್ಕೆ ಸ್ಪಷ್ಟನೆ ನೀಡಿದ್ದು, ನಾನು ಸಾರ್ವಜನಿಕರ ಭಾವನೆಗಳನ್ನು ಪ್ರತಿಧ್ವನಿಸುವ ಮಾತನಾಡಿದ್ದಷ್ಟೇ ಎಂದು ಹೇಳಿದ್ದಾರೆ. 

ನವದೆಹಲಿ (ಮೇ.24): ಪಶ್ಚಿಮ ಬಂಗಾಳದ ಕಾಂಗ್ರೆಸ್ ಮುಖ್ಯಸ್ಥ ಅಧೀರ್ ರಂಜನ್ ಚೌಧರಿ ಅವರು ಬುಧವಾರ ಪ್ರಧಾನಿ ನರೇಂದ್ರ ಮೋದಿಯವರನ್ನು "ಪಗ್ಲಾ ಮೋದಿ" (ಹುಚ್ಚ ಮೋದಿ) ಎಂದು ಹೇಳುವ ಮೂಲಕ ವಿವಾದವನ್ನು ಹುಟ್ಟುಹಾಕಿದ್ದಾರೆ. ತಮ್ಮ ಹೇಳಿಕೆ ವಿವಾದವಾಗುವುದನ್ನು ಅರಿತ ಬೆನ್ನಲ್ಲಿಯೇ ಅಧೀರ್‌ ರಂಜನ್‌ ಚೌಧರಿ ಸ್ಪಷ್ಟನೆ ನೀಡಿದ್ದು, ನಾನು ಸಾರ್ವಜನಿಕರಲ್ಲಿ 2 ಸಾವಿರ ರೂಪಾಯಿ ನೋಟು ಹಿಂತೆಗೆದುಕೊಳ್ಳುವ ನಿರ್ಧಾರಕ್ಕೆ ಯಾವ ಭಾವನೆ ಇದೆ ಅನ್ನೋದನ್ನು ಮಾತ್ರವೇ ಪ್ರತಿನಿಧಿಸುತ್ತಿದ್ದೆ. ಅದರ ಹೊರತಾಗಿ ಬಢರೆ ಯಾವ ಉದ್ದೇಶವಿರಲಿಲ್ಲ ಎಂದು ಹೇಳಿದ್ದಾರೆ. ಆರ್‌ಬಿಐ ಈಗಾಗಲೇ 2 ಸಾವಿರ ರೂಪಾಯಿ ನೋಟುಗಳನ್ನು ಹಿಂತೆಗೆದುಕೊಳ್ಳುವ ನಿರ್ಧಾರ ಮಾಡಿದೆ. ಈ ಕುರಿತಾಗಿ ಪ್ರತಿಕ್ರಿಯೆ ನೀಡಿದ ಅಧೀರ್‌ ರಂಜನ್‌ ಚೌಧರಿ, 'ಅವರು ಕೇವಲ ಮೋದಿಯಲ್ಲಿ ಪಗ್ಲಾ ಮೋದಿ (ಹುಚ್ಚ ಮೋದಿ), ಜನರು ಅವರನ್ನು ಪಗ್ಲಾ ಮೋದಿ ಎಂದೇ ಕರೆಯುತ್ಥಾರೆ' ಎಂದಿದ್ದರು.

ಆಮ್ ಆದ್ಮಿ ಪಕ್ಷದ (ಎಎಪಿ) ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಮತ್ತು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಡುವೆ ಇತ್ತೀಚೆಗೆ ನಡೆದ ಸಭೆಯ ಕುರಿತು ಪ್ರತಿಕ್ರಿಯಿಸಿದ ಚೌಧರಿ, "ಭಾರತದ ಜನರಲ್ಲಿ ಮೋದಿ ಬಗ್ಗೆ ಹತಾಶೆ ಹೆಚ್ಚುತ್ತಿದೆ. ಜನರು ಮೋದಿಯನ್ನು 'ಪಾಗಲ್‌' ಎಂದು ಕರೆಯುತ್ತಿದ್ದಾರೆ. ಸಾರ್ವಜನಿಕ ಭಾವನೆಗಳು ಮೋದಿ ವಿರುದ್ಧ ತಿರುಗಿಬಿದ್ದು, ಎಎಪಿ ಮತ್ತು ಟಿಎಂಸಿಯಂತಹ ಪಕ್ಷಗಳು ಪ್ರಸ್ತುತತೆಯನ್ನು ಮರಳಿ ಪಡೆಯಲು ಪ್ರಯತ್ನಿಸುತ್ತಿವೆ' ಎಂದು ಹೇಳಿದ್ದರು.

ಅಧೀರ್‌ ರಂಜನ್‌ ಚೌಧರಿ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ಬಂಗಾಳ ಭಾರತೀಯ ಜನತಾ ಪಕ್ಷದ ಮುಖ್ಯಸ್ಥ ಸುಕಾಂತ ಮಜುಂದಾರ್‌, ಅಧೀರ್‌ ರಂಜನ್‌ ಪದೇ ಪದೇ ತಪ್ಪು ಮಾಡುವ ವ್ಯಕ್ತಿ. ಅವರು ತಾವು ಹೇಳಿರುವ ಮಾತಿಗೆ ಕ್ಷಮೆ ಯಾಚಿಸಲೇಬೇಕು ಎಂದು ಪಟ್ಟು ಹಿಡಿದಿದ್ದಾರೆ.

'ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಪ್ರಧಾನಿ ಮೋದಿಯನ್ನು ಮತ್ತೆ ನಿಂದಿಸಿ ಅವರನ್ನು 'ಪಗ್ಲಾ' ಎಂದು ಕರೆದಿದ್ದಾರೆ. ಅವರು ಪದೇ ಪದೇ ಪ್ರಧಾನಿ ವಿರುದ್ಧ ನಿಂದನೀಯ ಪದಗಳನ್ನು ಬಳಸಿದ್ದಾರೆ. ಅವರು ಪದೇ ಪದೇ ಅಪರಾಧ ಮಾಡುತ್ತಿದ್ದಾರೆ. ನಾನು ಇದನ್ನು ತೀವ್ರವಾಗಿ ಖಂಡಿಸುತ್ತೇನೆ. ಅವರು ತಕ್ಷಣವೇ ಕ್ಷಮೆಯಾಚಿಸಬೇಕು," ಎಂದು ಅವರು ಹೇಳಿದ್ದಾರೆ.

ಅತಿ ಹೆಚ್ಚು ಮೌಲ್ಯದ ಕರೆನ್ಸಿ ನೋಟುಗಳನ್ನು ಚಲಾವಣೆಯಿಂದ ರದ್ದುಗೊಳಿಸಿದ ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) ಕ್ರಮದ ಬಗ್ಗೆ ವಿರೋಧ ಪಕ್ಷಗಳು ಸರ್ಕಾರವನ್ನು ಕಟುವಾಗಿ ಟೀಕಿಸಿವೆ. ಅವರು ಅದನ್ನು 2016 ರಲ್ಲಿ ಮೋದಿ ಸರ್ಕಾರದ ನೋಟು ಅಮಾನ್ಯೀಕರಣದ ನಿರ್ಧಾರದೊಂದಿಗೆ ಹೋಲಿಸಿದ್ದಾರೆ. 2 ಸಾವಿರ ರೂಪಾಯಿ ನೋಟಿನ ಹಿಂಪಡೆತ ಸಾಮಾನ್ಯ ಜನರಿಗೆ ಮತ್ತೊಮ್ಮೆ ಏಟು ನೀಡಲಿದೆ ಎಂದು ಪ್ರತಿಪಕ್ಷಗಳು ಟೀಕಿಸಿವೆ.

Scroll to load tweet…

ರಾಷ್ಟ್ರಪತ್ನಿ ಹೇಳಿಕೆ, ದ್ರೌಪದಿ ಮುರ್ಮು ಬಳಿ ಕ್ಷಮೆ ಕೇಳಿದ ಕಾಂಗ್ರೆಸ್ ನಾಯಕ ಅಧೀರ್ ರಂಜನ್!

ಹಾಗಿದ್ದರೂ ಬಿಜೆಪಿಯು ಪ್ರತಿಪಕ್ಷಗಳ ದಾಳಿಯನ್ನು ಹತಾಶ ಮತ್ತು ಸಾರ್ವಜನಿಕರಲ್ಲಿ ಭಯವನ್ನು ಹುಟ್ಟುಹಾಕುವ ಪ್ರಯತ್ನ ಎಂದು ಹೇಳಿದೆ. ಸಾಂಕ್ರಾಮಿಕ ಸಮಯದಲ್ಲಿ ಕೋವಿಡ್ -19 ಲಸಿಕೆ ಬಗ್ಗೆ ವದಂತಿಗಳನ್ನು ಹರಡಲು ಅದೇ ತಂತ್ರವನ್ನು ಬಳಸಲಾಗಿತ್ತು ಎಂದು ಹೇಳಿದೆ.

ಚೌಧರಿ ಎಡವಟ್ಟು, ಶಾ ಏಟು: ಸೋನಿಯಾ ಬೈದರು ದಿಕ್ಕೆಟ್ಟು!