ರಕ್ಷಣಾ ಸಂಸದೀಯ ಸಮಾಲೋಚನಾ ಸಮಿತಿಗೆ ಪ್ರಜ್ಞಾ ಸಿಂಗ್ ಠಾಕೂರ್| ರಕ್ಷಣಾ ಸಚಿವ ರಾಜನಾಥ್ ಸಿಂಗ್ ನೇತೃತ್ವದ ಸಮಿತಿ| 21 ಸದಸ್ಯರ ಸಂಸದೀಯ ಸಮಾಲೋಚನಾ ಸಮಿತಿ|ಮಾಲೆಗಾಂವ್ ಬಾಂಬ್ ಸ್ಫೋಟ ಪ್ರಕರಣದಲ್ಲಿ ಆರೋಪಿಯಾಗಿದ್ದ ಸಾಧ್ವಿ| ಸಾಧ್ವಿ ಪ್ರಜ್ಞಾ ಸಿಂಗ್ ನೇಮಕಕ್ಕೆ ವಿಪಕ್ಷಗಳ ಅಸಮಾಧಾನ|

ನವದೆಹಲಿ(ನ.21): ಮಹತ್ವದ ಬೆಳವಣಿಗೆಯೊಂದರಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ನೇತೃತ್ವದ ಸಂಸದೀಯ ಸಮಾಲೋಚನಾ ಸಮಿತಿಗೆ, ಮಾಲೆಗಾಂವ್ ಸ್ಫೋಟದ ಆರೋಪಿ ಹಾಗೂ ಬಿಜೆಪಿ ಸಂಸದೆ ಪ್ರಜ್ಞಾ ಠಾಕೂರ್ ಅವರನ್ನು ನೇಮಕ ಮಾಡಲಾಗಿದೆ. 

ಪ್ರಧಾನಿ ಮೋದಿ ಯೋಜನೆಯ ಅಣಕ : ಬಿಜೆಪಿ ಸಂಸದೆ ಸಾಧ್ವಿಗೆ ನೋಟಿಸ್

ರಕ್ಷಣಾ ಸಚಿವ ರಾಜನಾಥ್ ಸಿಂಗ್ ನೇತೃತ್ವವಹಿಸಿರುವ 21 ಸದಸ್ಯರ ರಕ್ಷಣಾ ಸಚಿವಾಲಯದ ಸಂಸದೀಯ ಸಮಾಲೋಚನಾ ಸಮಿತಿಯಲ್ಲಿ ಪ್ರಜ್ಞಾ ಠಾಕೂರ್ ಕೂಡ ಸ್ಥಾನ ಪಡೆದಿರುವುದು ವಿವಾದಕ್ಕೆ ಕಾರಣವಾಗಿದೆ.

Scroll to load tweet…

ಮಾಲೆಗಾಂವ್ ಬಾಂಬ್ ಸ್ಫೋಟ ಪ್ರಕರಣದಲ್ಲಿ ಆರೋಪಿಯಾಗಿದ್ದ ಪ್ರಜ್ಞಾ ಠಾಕೂರ್, ರಕ್ಷಣೆಗೆ ಸಂಬಂಧಿಸಿದ ಸಮಿತಿಗೆ ನೇಮಕವಾಗಿರುವುದು ವಿಪಕ್ಷಗಳ ಕೆಂಗೆಣ್ಣಿಗೆ ಗುರಿಯಾಗಿದೆ.

ಗಾಂಧಿ ಹಂತಕ ನಾಥುರಾಮ್ ಗೋಡ್ಸೆ ದೇಶಭಕ್ತ: ಸಾಧ್ವಿ!

2019ರ ಲೋಕಸಭಾ ಚುನಾವಣೆಯಲ್ಲಿ ಭೋಪಾಲ್ ಕ್ಷೇತ್ರದಿಂದ ಸ್ಪರ್ಧಿಸಿದ್ದ ಪ್ರಜ್ಞಾ, ಕಾಂಗ್ರೆಸ್ ಹಿರಿಯ ನಾಯಕ ದಿಗ್ವಿಜಯ್ ಸಿಂಗ್ ಅವರನ್ನು ಸೋಲಿಸಿದ್ದರು. 

ನನ್ನ ಶಾಪ ಮತ್ತು ಅವರ ಕರ್ಮದ ಫಲವಾಗಿ ಹೇಮಂತ್ ಕರ್ಕರೆ ಸಾವು: ಸಾಧ್ವಿ ಪ್ರಜ್ಞಾ!