‘ವೋಟ್‌ ಚೋರ್‌ ಗದ್ದೀ ಛೋಡ್‌’ ರ್‍ಯಾಲಿಯಲ್ಲಿ ಮಾತನಾಡಿದ ಖರ್ಗೆ, ‘ಬಿಜೆಪಿಗರು ದ್ರೋಹಿಗಳು ಮತ್ತು ಡ್ರಾಮೆಬಾಜ್‌ (ನಾಟಕ) ಮಾಡುತ್ತಾರೆ. ಅವರನ್ನು ಅಧಿಕಾರದಿಂದ ಕೆಳಗಿಳಿಸಬೇಕು ಎಂದು ಮಲ್ಲಿಕಾರ್ಜುನ್ ಖರ್ಗೆ ಆಗ್ರಹಿಸಿದರು.

ನವದೆಹಲಿ: ‘ಮತಗಳವಿನಲ್ಲಿ ತೊಡಗಿರುವವರು ದ್ರೋಹಿಗಳು. ಮತದಾನದ ಹಕ್ಕು ಮತ್ತು ಸಂವಿಧಾನವನ್ನು ರಕ್ಷಿಸಲು ಅವರನ್ನು ಅಧಿಕಾರದಿಂದ ತೆಗೆದುಹಾಕಬೇಕು’ ಎಂದು ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಗುಡುಗಿದ್ದಾರೆ.

ಮತಚೋರಿಯನ್ನು ವಿರೋಧಿಸಿ ಪಕ್ಷ ಹಮ್ಮಿಕೊಂಡಿದ್ದ ‘ವೋಟ್‌ ಚೋರ್‌ ಗದ್ದೀ ಛೋಡ್‌’ ರ್‍ಯಾಲಿಯಲ್ಲಿ ಮಾತನಾಡಿದ ಖರ್ಗೆ, ‘ಬಿಜೆಪಿಗರು ದ್ರೋಹಿಗಳು ಮತ್ತು ಡ್ರಾಮೆಬಾಜ್‌ (ನಾಟಕ) ಮಾಡುತ್ತಾರೆ. ಅವರನ್ನು ಅಧಿಕಾರದಿಂದ ಕೆಳಗಿಳಿಸಬೇಕು. ಆರ್‌ಎಸ್‌ಎಸ್‌ ಸಿದ್ಧಾಂತಗಳು ದೇಶಕ್ಕೆ ಮಾರಕ. ಆದ್ದರಿಂದ ದೇಶದ ಉಳಿವಿಗೆ ಎಲ್ಲಾ ಭಾರತೀಯರು ಒಟ್ಟಾಗಿ ಕಾಂಗ್ರೆಸ್‌ ಸಿದ್ಧಾಂತವನ್ನು ಬಲಗೊಳಿಸುವ ಅಗತ್ಯವಿದೆ’ ಎಂದು ಕರೆ ನೀಡಿದ್ದಾರೆ.

ಮಗನ ಸರ್ಜರಿಗೂ ಹೋಗಲಿಲ್ಲ: ಖರ್ಗೆ

ಇದೇ ವೇಳೆ, ‘ನನ್ನ ಮಗ ಬೆಂಗಳೂರಲ್ಲಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರೂ ಅಲ್ಲಿಗೆ ಹೋಗುವ ಬದಲು 140 ಕೋಟಿ ಜನರ ಉಳಿವನ್ನು ಆದ್ಯತೆಯಾಗಿಟ್ಟುಕೊಂಡು ಇಲ್ಲಿಗೆ ಬಂದೆ’ ಎಂದು ಖರ್ಗೆ ಹೇಳಿದರು.

ಮೆಸ್ಸಿ ಕಾರ್ಯಕ್ರಮ ಆಯೋಜಕನನ್ನು ಫ್ಲೈಟಿಂದ ಇಳಿಸಿ ಬಂಧಿಸಿದ ಪೊಲೀಸ್‌!

ಕೋಲ್ಕತಾ: ಫುಟ್ಬಾಲ್‌ ದಿಗ್ಗಜ ಲಿಯೋನೆಲ್‌ ಮೆಸ್ಸಿಯನ್ನು ನೋಡಲಾಗದೆ ರೊಚ್ಚಿಗೆದ್ದ ಅಭಿಮಾನಿಗಳು ದಾಂಧಲೆ ನಡೆಸಿದ ಪ್ರಕರಣದಲ್ಲಿ ಶನಿವಾರ, ಕಾರ್ಯಕ್ರಮದ ಆಯೋಜಕ ಸದತ್ರು ದತ್ತ ಅವರನ್ನು ಕೋಲ್ಕತಾ ಪೊಲೀಸರು ಬಂಧಿಸಿದ್ದರು. ಭಾನುವಾರ ಅವರನ್ನು ಕೋರ್ಟ್‌ಗೆ ಹಾಜರು ಪಡಿಸಲಾಯಿತು. ಕೋರ್ಟ್‌ ಸದತ್ರು ಅವರಿಗೆ ಜಾಮೀನಿ ನಿರಾಕರಿಸಿ 14 ದಿನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿತು. ಶನಿವಾರ ಸಾಲ್ಟ್‌ ಲೇಕ್‌ ಕ್ರೀಡಾಂಗಣದಿಂದ ಮೆಸ್ಸಿ ಹಾಗೂ ಅವರ ಜೊತೆಗಾರರನ್ನು ಕರೆದುಕೊಂಡು ಸದತ್ರು ಹೈದ್ರಾಬಾದ್‌ಗೆ ಹೊರಟ್ಟಿದ್ದರು. ಆದರೆ ಕೋಲ್ಕತಾ ಪೊಲೀಸರು ಏರ್ಪೋರ್ಟ್‌ಗೆ ತೆರಳಿ, ವಿಮಾನ ಏರಿದ್ದ ಸದತ್ರುರನ್ನು ಕೆಳಕ್ಕಿಳಿಸಿ ವಶಕ್ಕೆ ಪಡೆದಿದ್ದರು ಎನ್ನುವ ವಿಚಾರ ಬೆಳಕಿಗೆ ಬಂದಿದೆ.

ತನಿಖೆ ಆರಂಭ: ಸಾಲ್ಟ್‌ ಲೇಕ್‌ ಕ್ರೀಡಾಂಗಣದ ದಾಂಧಲೆ ಪ್ರಕರಣದ ತನಿಖೆಯನ್ನು ಬಂಗಾಳ ಸರ್ಕಾರ ಕಲ್ಕತ್ತಾ ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಆಶಿಮ್‌ ಕುಮಾರ್‌ರ ನೇತೃತ್ವದಲ್ಲಿ ನಡೆಸಲು ನಿರ್ಧರಿಸಿದೆ. ಅವರು ಭಾನುವಾರ ಕ್ರೀಡಾಂಗಣಕ್ಕೆ ತೆರಳಿ ಪರಿಶೀಲನೆ ನಡೆಸಿದರು. ಬಂಗಾಳ ರಾಜ್ಯಪಾಲ ಆನಂದ ಬೋಸ್‌ ಕೂಡ ಕ್ರೀಡಾಂಗಣಕ್ಕೆ ತೆರಳಿ ಪರಿಸ್ಥಿತಿ ಅವಲೋಕಿಸಿದರು