ಕೇಂದ್ರ ಸರ್ಕಾರ ಸಂಪೂರ್ಣವಾಗಿ ಆರ್‌ಎಸ್ಎಸ್‌ಗೆ ಶರಣಾಗಿದೆ, ಬಿಜೆಪಿ ವಿರುದ್ಧ ಖರ್ಗೆ ವಾಗ್ದಾಳಿ!
ಸಂವಿಧಾನ ದಿನ ಕಾಂಗ್ರೆಸ್ ನೂತನ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಕೇಂದ್ರ ಸರ್ಕಾರ ಸಂಪೂರ್ಣವಾಗಿ ಆರ್‌ಎಸ್ಎಸ್‌ಗೆ ಶರಣವಾಗಿದೆ. ಭಾರದಲ್ಲಿ ಕಾನೂನು ರಹಿತ ಕಾನೂನಿದೆ ಎಂದಿದ್ದಾರೆ.

ನವದೆಹಲಿ(ನ.26): ದೇಶದಲ್ಲಿ ಸಂವಿಧಾನ ದಿನ ಆಚರಿಸಲಾಗಿದೆ. ಆದರೆ ಭಾರತದಲ್ಲಿ ಸಂವಿಧಾನ, ಕಾನೂನುಗಳನ್ನು ಗಾಳಿಗೆ ತೂರಲಾಗಿದೆ ಎಂದು ಕಾಂಗ್ರೆಸ್ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದಿಂದ ಸಂವಿಧಾನ ಮೂಲಭೂತ ಬಿಕ್ಕಟ್ಟು ಎದುರಿಸುತ್ತಿದೆ. ದೇಶವನ್ನು ಮತ್ತೆ ಒಗ್ಗಟ್ಟು ಮಾಡುವ ಕಾಲ ಬಂದಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. ಇದೇ ವೇಳೆ ಕೇಂದ್ರದ ವಿರುದ್ಧ ವಾಗ್ದಾಳಿ ನಡೆಸಿದ ಖರ್ಗೆ, ಕೇಂದ್ರ ಸರ್ಕಾರ ಸಂಪೂರ್ಣವಾಗಿ ಆರ್‌ಎಸ್‌ಎಸ್ ಆದೇಶಕ್ಕೆ ಶರಣಾಗಿದೆ ಎಂದು ಖರ್ಗೆ ಹೇಳಿದ್ದಾರೆ.
ಭಾರತ ಸಂವಿಧಾನ ಬಿಕ್ಕಟ್ಟಿನಲ್ಲಿದೆ. ಬಿಜೆಪಿ ಸರ್ಕಾರದಿಂದ ಕಾನೂನು ರಹಿತ ಕಾನೂನು ಭಾರತದಲ್ಲಿದೆ ಎಂದು ಮಲ್ಲಿಕಾರ್ಜುನ ಖರ್ಗೆ ಸುದೀರ್ಘ ಬರಹವನ್ನು ಟ್ವಿಟರ್‌ನಲ್ಲಿ ಪೋಸ್ಟ್ ಮಾಡಿದ್ದಾರೆ. 2014ರಲ್ಲಿ ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ಬಳಿಕ ದೇಶದಲ್ಲಿ ಸಾಂವಿಧಾನಿಕ ಬಿಕ್ಕಟ್ಟು ಆರಂಭವಾಗಿದೆ. ಬಿಜೆಪಿ ಸಿದ್ಧಾಂತದಿಂದ ಬಿಕ್ಕಟ್ಟು ಉದ್ಭವಿಸಿದೆ. ಇದಕ್ಕೆ ಆರ್‌ಎಸ್‌ಎಸ್ ನೀರೆರೆಯುತ್ತಿದೆ. ಭಾರತದಲ್ಲಿನ ಸ್ವಾತಂತ್ರ್ಯವನ್ನು ಮೊಟಕುಗೊಳಿಸಲು ಆರ್‌ಎಸ್‌ಎಸ್ ಬಿಜೆಪಿಯನ್ನು ಬಳಸಿಕೊಂಡಿದೆ ಎಂದು ಖರ್ಗೆ ಹೇಳಿದ್ದಾರೆ.
ಕಲಬುರಗಿ ಜಿಲ್ಲೆಯಲ್ಲಿ ಕೈ ಮಲ ಜಂಗಿ ಕುಸ್ತಿ: ಹಾಲಿ, ಮಾಜಿಗಳ ನಡುವೆ ಹೊಸಬರ ಫೈಟ್
ಸಂಸದೀಯ ವ್ಯವಹಾರಗಳ ಸಚಿವಾಲದಿಂದ ಸಂವಿಧಾನ ದಿವಸ
ಭಾರತದ ಸಂವಿಧಾನದ ಅಂಗೀಕಾರದ ಸ್ಮರಣಾರ್ಥ ಮತ್ತು ಸಂವಿಧಾನದ ಸ್ಥಾಪಕ ಪಿತಾಮಹರ ಕೊಡುಗೆಯನ್ನು ಗೌರವಿಸಲು ಮತ್ತು ಅಂಗೀಕರಿಸಲು ಸಂವಿಧಾನ ದಿವಸವನ್ನು ಇಂದು ಭಾರತದಾದ್ಯಂತ ಅತ್ಯಂತ ಉತ್ಸಾಹ ಮತ್ತು ಸಂಭ್ರಮದಿಂದ ಆಚರಿಸಲಾಯಿತು. ಸಂಸದೀಯ ವ್ಯವಹಾರಗಳ ಸಚಿವಾಲಯದ ಕಾರ್ಯದರ್ಶಿಯವರ ನೇತೃತ್ವದಲ್ಲಿ ಸಂಸದೀಯ ವ್ಯವಹಾರಗಳ ಸಚಿವಾಲಯದ ಸಿಬ್ಬಂದಿಗಳು ಮತ್ತು ಅಧಿಕಾರಿಗಳು ಇಂದು ನವದೆಹಲಿಯ ಸಂಸತ್ ಭವನದಲ್ಲಿ ಭಾರತದ ಸಂವಿಧಾನದ ಪೀಠಿಕೆಯನ್ನು ಓದಿದರು.ಸಂಸದೀಯ ವ್ಯವಹಾರಗಳ ಸಚಿವಾಲಯವು ಈ ರಾಷ್ಟ್ರೀಯ ಕಾರ್ಯಕ್ರಮದಲ್ಲಿ ಸಕ್ರಿಯ ಪಾಲ್ಗೊಳ್ಳುವವರಾಗಿ, ಎರಡು ಡಿಜಿಟಲ್ ಪೋರ್ಟಲ್‌ಗಳಲ್ಲಿ, ಒಂದು ಸಂವಿಧಾನದ ಪೀಠಿಕೆಯನ್ನು ಇಂಗ್ಲಿಷ್‌ನಲ್ಲಿ ಮತ್ತು 22 ಇತರ ಭಾಷೆಗಳಲ್ಲಿ ಸಂವಿಧಾನದ 8ನೇ ಪರಿಚ್ಛೇದದಲ್ಲಿ ಉಲ್ಲೇಖಿಸಲಾಗಿದೆ.
ಓಲೈಕೆಗಾಗಿ ಖರ್ಗೆ ಕುಟುಂಬದ ಅವಹೇಳನ ಸಲ್ಲ: ಬಿಜೆಪಿ ವಿರುದ್ಧ ಕಾಂಗ್ರೆಸ್ ಆಕ್ರೋಶ
ಮೋದಿ ಶುಭಾಶಯ
1949 ರಲ್ಲಿ ಇದೇ ದಿನ, ಸ್ವತಂತ್ರ ಭಾರತವು ತನ್ನ ಹೊಸ ಭವಿಷ್ಯದ ಅಡಿಪಾಯವನ್ನು ಹಾಕಿತು. ಈ ಬಾರಿಯ ಸಂವಿಧಾನ ದಿನವೂ ವಿಶೇಷವಾಗಿದೆ ಏಕೆಂದರೆ ಭಾರತವು ತನ್ನ ಸ್ವಾತಂತ್ರ್ಯದ 75 ವರ್ಷಗಳನ್ನು ಪೂರೈಸಿದ್ದು,ನಾವೆಲ್ಲರೂ ಸ್ವಾತಂತ್ರೋತ್ಸವದ ಅಮೃತ ಮಹೋತ್ಸವವನ್ನು ಆಚರಿಸುತ್ತಿದ್ದೇವೆ. ಬಾಬಾಸಾಹೇಬ್ ಅಂಬೇಡ್ಕರ್ ಸೇರಿದಂತೆ ಸಂವಿಧಾನ ರಚನಾ ಸಭೆಯ ಎಲ್ಲ ಸದಸ್ಯರಿಗೆ, ಆಧುನಿಕ ಭಾರತದ ಕನಸು ಕಂಡ ಎಲ್ಲ ಸಂವಿಧಾನ ರಚನಾಕಾರರನ್ನು ಹೃತ್ಪೂರ್ವಕ ಸ್ಮರಿಸುತ್ತಾ ಅವರೆಲ್ಲರಿಗೂ ಗೌರವಪೂರ್ವಕವಾಗಿ ನಮಸ್ಕರಿಸುತ್ತೇನೆ. ಕಳೆದ ಏಳು ದಶಕಗಳಲ್ಲಿ ಸಂವಿಧಾನದ ಅಭಿವೃದ್ಧಿ ಮತ್ತು ವಿಸ್ತರಣೆಯ ಪಯಣದಲ್ಲಿ ಶಾಸಕಾಂಗ, ನ್ಯಾಯಾಂಗ ಮತ್ತು ಕಾರ್ಯಾಂಗದ ಅಸಂಖ್ಯಾತ ಜನರು ಕೊಡುಗೆ ನೀಡಿದ್ದಾರೆ. ಅವರೆಲ್ಲರಿಗೂ ದೇಶದ ಪರವಾಗಿ ನನ್ನ ಕೃತಜ್ಞತೆಯನ್ನು ವ್ಯಕ್ತಪಡಿಸಲು ನಾನು ಈ ಅವಕಾಶವನ್ನು ಬಳಸಿಕೊಳ್ಳುತ್ತಿದ್ದೇನೆ.