ಶಬರಿಮಲೆ ದೇಗುಲದ ಗರ್ಭಗುಡಿಯ ಬಾಗಿಲು ಮತ್ತು ದ್ವಾರಪಾಲಕ ವಿಗ್ರಹಗಳ ಚಿನ್ನಲೇಪಿತ ತಾಮ್ರದ ಕವಚಗಳ ಚಿನ್ನ ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಬೆಂಗಳೂರಿನ ಉನ್ನಿಕೃಷ್ಣನ್‌ ಪೊಟ್ಟಿಯನ್ನು ಎಸ್‌ಐಟಿ ಅಧಿಕಾರಿಗಳು ಸಾಕ್ಷ್ಯ ಸಂಗ್ರಹಕ್ಕಾಗಿ ಗುರುವಾರ ಬೆಂಗಳೂರಿಗೆ ಕರೆತಂದಿದ್ದಾರೆ.

ಪಟ್ಟಣಂತಿಟ್ಟ (ಕೇರಳ) : ಶಬರಿಮಲೆ ದೇಗುಲದ ಗರ್ಭಗುಡಿಯ ಬಾಗಿಲು ಮತ್ತು ದ್ವಾರಪಾಲಕ ವಿಗ್ರಹಗಳ ಚಿನ್ನಲೇಪಿತ ತಾಮ್ರದ ಕವಚಗಳ ಚಿನ್ನ ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಬೆಂಗಳೂರಿನ ಉನ್ನಿಕೃಷ್ಣನ್‌ ಪೊಟ್ಟಿಯನ್ನು ವಿಶೇಷ ತನಿಖಾ ತಂಡದ (ಎಸ್‌ಐಟಿ) ಅಧಿಕಾರಿಗಳು ಸಾಕ್ಷ್ಯ ಸಂಗ್ರಹಕ್ಕಾಗಿ ಗುರುವಾರ ಬೆಂಗಳೂರಿಗೆ ಕರೆತಂದಿದ್ದಾರೆ.

ಬೆಂಗಳೂರಿನ ಶ್ರೀರಾಂಪುರದಲ್ಲಿ ಚಿನ್ನಲೇಪಿತ ಕವಚಗಳನ್ನು ಇರಿಸಿ ಈತ ದೇಣಿಗೆ ಸಂಗ್ರಹಿಸಿದ್ದ ಎಂಬ ಆರೋಪವಿದೆ. ಹೀಗಾಗಿ ಸಾಕ್ಷ್ಯ ಸಂಗ್ರಹ ಕಾರ್ಯ ಮುಕ್ತಾಯವಾಗಬೇಕಿರುವುದರಿಂದ ಗುರುವಾರ ಆರೋಪಿಯನ್ನು ಬೆಂಗಳೂರಿಗೆ ಕರೆತರಲಾಗಿದೆ. ಚೆನ್ನೈ ಮತ್ತು ಹೈದರಾಬಾದ್‌ಗೂ ಕರೆದೊಯ್ಯುವ ಸಾಧ್ಯತೆಯಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮ್ಯಾಜಿಸ್ಟ್ರೇಟ್ ಕೋರ್ಟ್‌ ಅ.30ರವರೆಗೂ ಪೊಟ್ಟಿಯನ್ನು ಎಸ್‌ಐಟಿ ಕಸ್ಟಡಿಗೆ ವಹಿಸಿತ್ತು.

ಶಬರಿಮಲೆ ದೇಗುಲದ ಗರ್ಭಗುಡಿಯ ಬಾಗಿಲು ಮತ್ತು ದ್ವಾರಪಾಲಕ ಮೂರ್ತಿಗಳ ಕವಚಗಳನ್ನು ಮರುಲೇಪನ ಮಾಡುವುದಾಗಿ ಪೊಟ್ಟಿ ಕೊಂಡೊಯ್ದಿದ್ದ. ಆದರೆ ಅವುಗಳನ್ನು ಹಿಂದಿರುಗಿಸುವಾಗ ಚಿನ್ನದಲ್ಲಿ ಸುಮಾರು 4 ಕೆಜಿ ಕಡಿತ ಉಂಟಾಗಿತ್ತು. ಈ ಕುರಿತು ಎಸ್‌ಐಟಿ ತನಿಖೆ ನಡೆಸುತ್ತಿದೆ.