ಶಬರಿಮಲೆ(ಡಿ.31): ಮಕರವಿಳಕ್ಕು (ಸಂಕ್ರಾಂತಿ) ಹಬ್ಬ ಹಾಗೂ ಎರಡನೇ ಹಂತದ ಯಾತ್ರಾ ಋುತುವಿನ ಆರಂಭದ ಪ್ರಯುಕ್ತ ಇಲ್ಲಿನ ಪ್ರಸಿದ್ಧ ಅಯಪ್ಪ ಸ್ವಾಮಿ ದೇಗುಲ ಬುಧವಾರ ಸಂಜೆಯಿಂದ ಭಕ್ತರಿಗೆ ಬಾಗಿಲು ತೆರೆದಿದೆ.

ಇದೇ ವೇಳೆ ಕೊರೋನಾ ಸೋಂಕಿಗೆ ತುತ್ತಾಗಿದ್ದ ಮೂವರೊಂದಿಗೆ ಸಂಪರ್ಕಕ್ಕೆ ಬಂದಿದ್ದ ಕಾರಣ ದೇವಾಲಯದ ಮುಖ್ಯ ಅರ್ಚಕರು ಕ್ವಾರಂಟೈನ್‌ಗೆ ಒಳಗಾಗಿದ್ದಾರೆ. ಬುಧವಾರ ಸಂಜೆ 5 ಗಂಟೆಗೆ ಅಯ್ಯಪ್ಪ ದೇಗುಲದ ಬಾಗಿಲನ್ನು ತೆರೆಯಲಾಗಿದ್ದು, ಗುರುವಾರದಿಂದ ಭಕ್ತರ ಪ್ರವೇಶಕ್ಕೆ ಅವಕಾಶ ಕಲ್ಪಿಸಲಾಗುವುದು ಎಂದು ತಿರುವಾಂಕೂರು ದೇವಸ್ವಂ ಮಂಡಳಿಯ ಅಧಿಕಾರಿಗಳು ತಿಳಿಸಿದ್ದಾರೆ.

ಜ.14ರಂದು ಮಕರವಿಳಕ್ಕು ಹಬ್ಬ ನಡೆಯಲಿದ್ದು, ಭಕ್ತರಿಗೆ ಮಕರ ಜ್ಯೋತಿಯ ದರ್ಶನವಾಗಲಿದೆ. ಜ.20ರಂದು ದೇವಾಲಯ ಮತ್ತೆ ಬಾಗಿಲು ಮುಚ್ಚಲಿದೆ. ಈ ಬಾರಿ ಕೊರೋನಾ ಹಿನ್ನೆಲೆಯಲ್ಲಿ ಪ್ರತಿ ದಿನ 5000 ಭಕ್ತರಿಗಷ್ಟೇ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ.