ಸೇನೆಯ ಹೆಸರು, ಚಿಹ್ನೆ ಖರೀದಿಸಲು 2,000 ಕೋಟಿ ರೂ. ಡೀಲ್: ಸಂಜಯ್ ರಾವತ್ ಸ್ಫೋಟಕ ಆರೋಪ

2,000 ಕೋಟಿ ರೂ. ಎಂಬುದು ಪ್ರಾಥಮಿಕ ಅಂಕಿ ಅಂಶವಾಗಿದೆ ಮತ್ತು ಇದು 100 ಪ್ರತಿಶತ ಸತ್ಯ ಎಂದು ಹೇಳಿದ್ದಾರೆ.

sanjay raut alleges rs 2000 crore deal to buy shiv sena name symbol ash

ಮುಂಬೈ (ಜನವರಿ 19, 2023): ಶಿವಸೇನೆ (ಉದ್ಧವ್ ಬಾಳಾಸಾಹೇಬ್ ಠಾಕ್ರೆ) ನಾಯಕ ಸಂಜಯ್ ರಾವತ್ ಅವರು ಶಿವಸೇನೆ ಪಕ್ಷದ ಹೆಸರು ಮತ್ತು 'ಬಿಲ್ಲು ಮತ್ತು ಬಾಣ' ಚಿಹ್ನೆ ಖರೀದಿಸಲು 2,000 ಕೋಟಿ ರೂ. ಒಪ್ಪಂದ ನಡೆದಿದೆ ಎಂದು ಭಾನುವಾರ ಆರೋಪಿಸಿದ್ದಾರೆ. ಆದರೆ, ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ನೇತೃತ್ವದ ಶಿಬಿರದ ಶಾಸಕ ಸದಾ ಸರ್ವಂಕರ್ ಅವರು ಈ ಆರೋಪ ತಳ್ಳಿಹಾಕಿದ್ದಾರೆ. ಅಲ್ಲದೆ, ಸಂಜಯ್ ರಾವುತ್ ಅವರೇನು ಕ್ಯಾಷಿಯರ್‌ ಆಗಿದ್ದಾರಾ ಎಂದು ಕಿಡಿ ಕಾರಿದ್ದಾರೆ.

ಸಂಜಯ್ ರಾವತ್‌ (Sanjay Raut) ಅವರು ಟ್ವೀಟ್‌ (Tweet) ಮೂಲಕ ಶಿವಸೇನೆಯ (Shiv Sena) ಹೆಸರು, ಚಿಹ್ನೆ ಖರೀದಿಗೆ ಡೀಲ್‌ (Deal) ನಡೆದಿದೆ ಎಂದು ಆರೋಪಿಸಿದ್ದಾರೆ. 2,000 ಕೋಟಿ ರೂ. ಎಂಬುದು ಪ್ರಾಥಮಿಕ ಅಂಕಿ ಅಂಶವಾಗಿದೆ ಮತ್ತು ಇದು 100 ಪ್ರತಿಶತ ಸತ್ಯ ಎಂದು ಹೇಳಿದ್ದಾರೆ. ಆಡಳಿತ ಮಂಡಳಿಗೆ ಹತ್ತಿರವಿರುವ ಬಿಲ್ಡರ್ ಒಬ್ಬರು ಈ ಮಾಹಿತಿಯನ್ನು ತಮ್ಮೊಂದಿಗೆ ಹಂಚಿಕೊಂಡಿದ್ದಾರೆ ಎಂದೂ ಸಂಜಯ್‌ ರಾವತ್‌ ಸುದ್ದಿಗಾರರಿಗೆ ತಿಳಿಸಿದ್ದಾರೆ. ಅಲ್ಲದೆ, ಈ ಆರೋಪಕ್ಕೆ ತನ್ನ ಬಳಿ ದಾಖಲೆ ಇದೆ. ಅದನ್ನು ಶೀಘ್ರದಲ್ಲೇ ಬಹಿರಂಗಪಡಿಸುತ್ತೇನೆ ಎಂದೂ ರಾಜ್ಯಸಭಾ ಸದಸ್ಯರೂ (Rajya Sabha Member) ಆಗಿರುವ ಸಂಜಯ್ ರಾವತ್‌ ಹೇಳಿಕೊಂಡಿದ್ದಾರೆ. 

ಇದನ್ನು ಓದಿ: ಶಿವಸೇನೆಯ ಚಿಹ್ನೆ ಕದ್ದ ಕಳ್ಳನಿಗೆ ತಕ್ಕ ಪಾಠ ಕಲಿಸಿ; ಚುನಾವಣಾ ಆಯೋಗ ಮೋದಿ ಗುಲಾಮ: ಉದ್ಧವ್‌ ಠಾಕ್ರೆ ಕಿಡಿ

ಚುನಾವಣಾ ಆಯೋಗವು (Election Commission) ಶುಕ್ರವಾರ ಏಕನಾಥ್ ಶಿಂಧೆ (Eknath Shinde)  ನೇತೃತ್ವದ ಬಣವನ್ನು ನಿಜವಾದ ಶಿವಸೇನೆ ಎಂದು ಗುರುತಿಸಿದ್ದು, ಮತ್ತು ಅದಕ್ಕೆ 'ಬಿಲ್ಲು ಮತ್ತು ಬಾಣ' (Bow and Arrow) ಚುನಾವಣಾ ಚಿಹ್ನೆಯನ್ನು ನಿಗದಿಪಡಿಸಲು ಆದೇಶಿಸಿದೆ. ಶಿವಸೇನೆಯ ಎರಡೂ ಬಣಗಳು ನಡೆಸಿದ ಸುದೀರ್ಘ ಹೋರಾಟದ ಕುರಿತು 78 ಪುಟಗಳ ಆದೇಶದಲ್ಲಿ, ಉದ್ಧವ್ ಠಾಕ್ರೆ ಬಣವು ರಾಜ್ಯದಲ್ಲಿ ಅಸೆಂಬ್ಲಿ ಉಪಚುನಾವಣೆ ಪೂರ್ಣಗೊಳ್ಳುವವರೆಗೆ ತನಗೆ ನಿಗದಿಪಡಿಸಿದ "ಜ್ವಾಲೆಯ ಜ್ಯೋತಿ" ಚುನಾವಣಾ ಚಿಹ್ನೆಯನ್ನು ಇಟ್ಟುಕೊಳ್ಳಲು ಚುನಾವಣಾ ಆಯೋಗ ಅನುಮತಿಸಿದೆ.

ಇದಕ್ಕೆ ಪ್ರತಿಕ್ರಿಯೆ ನೀಡಿದ ಸಂಜಯ್ ರಾವತ್, ಶಿವಸೇನೆ ಹೆಸರನ್ನು ಖರೀದಿಸಲು  2,000 ಕೋಟಿ ರೂ. ಸಣ್ಣ ಮೊತ್ತವಲ್ಲ ಎಂದು ಭಾನುವಾರ ಹೇಳಿದ್ದಾರೆ. ಚುನಾವಣಾ ಆಯೋಗದ ನಿರ್ಧಾರವು ಒಪ್ಪಂದವಾಗಿದೆ ಎಂದೂ ಅವರು ಆರೋಪಿಸಿದ್ದಾರೆ.

ಇದನ್ನೂ ಓದಿ: ಇಂದಿರಾ ಗಾಂಧಿಯೂ ಇದೇ ಪರಿಸ್ಥಿತಿ ಎದುರಿಸಿದ್ರು: ಶಿವಸೇನೆ ಚಿಹ್ನೆ ಕಳೆದುಕೊಂಡ ಉದ್ಧವ್ ಠಾಕ್ರೆ ಸಂತೈಸಿದ ಶರದ್ ಪವಾರ್

"ಶಿವಸೇನೆ ಹೆಸರು ಮತ್ತು ಅದರ ಚಿಹ್ನೆಯನ್ನು ಪಡೆಯಲು ₹ 2000 ಕೋಟಿ ಡೀಲ್ ನಡೆದಿರುವ ಬಗ್ಗೆ ನನಗೆ ವಿಶ್ವಾಸಾರ್ಹ ಮಾಹಿತಿ ಇದೆ. ಇದು ಪ್ರಾಥಮಿಕ ಅಂಕಿ ಅಂಶವಾಗಿದೆ ಮತ್ತು 100 ಪ್ರತಿಶತ ಸತ್ಯವಾಗಿದೆ. ಶೀಘ್ರದಲ್ಲೇ ಹಲವು ವಿಷಯಗಳು ಬಹಿರಂಗಗೊಳ್ಳಲಿವೆ. ಹಿಂದೆಂದೂ  ದೇಶದ ಇತಿಹಾಸದಲ್ಲಿ ಈ ರೀತಿ ನಡೆದಿಲ್ಲ’’ ಎಂದು ಸಂಜಯ್ ರಾವತ್ ಟ್ವೀಟ್ ಮಾಡಿದ್ದಾರೆ.

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಮಹಾರಾಷ್ಟ್ರದ ಮಾಜಿ ಸಿಎಂ ಉದ್ಧವ್ ಠಾಕ್ರೆ ವಿರುದ್ಧ ಮಾಡಿರುವ ಟೀಕೆಗೂ ಸಂಜಯ್ ರಾವತ್ ಕಿಡಿ ಕಾರಿದ್ದಾರೆ. ಉದ್ಧವ್‌ ಠಾಕ್ರೆ ವಿರುದ್ಧವಾದ ಸಿದ್ಧಾಂತ ಹೊಂದಿರುವವರ ಬೂಟಿನ ಸೋಲ್‌ ನೆಕ್ಕುತ್ತಾರೆ" ಎಂದು ಕಿಡಿಕಾರಿರುವ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ರಾವತ್, "ಈಗಿನ ಮುಖ್ಯಮಂತ್ರಿ ಏನು ನೆಕ್ಕುತ್ತಿದ್ದಾರೆ? ಮಹಾರಾಷ್ಟ್ರವು ಅಮಿತ್‌ ಶಾ ಹೇಳುವುದಕ್ಕೆ ಮಹತ್ವ ನೀಡುವುದಿಲ್ಲ. ಪ್ರಸ್ತುತ ಮುಖ್ಯಮಂತ್ರಿಗೆ ಛತ್ರಪತಿ ಶಿವಾಜಿ ಮಹಾರಾಜರ ಹೆಸರನ್ನು ಬಳಸುವ ಹಕ್ಕು ಇಲ್ಲ ಎಂದೂ ಸಂಜಯ್ ರಾವತ್ ಹೇಳಿದ್ದಾರೆ. 

ಇದನ್ನೂ ಓದಿ: ಏಕನಾಥ್ ಶಿಂಧೆ ಬಣಕ್ಕೆ ಗೆಲುವು, ಠಾಕ್ರೆ ಕೈತಪ್ಪಿದ ಶಿವಸೇನೆ ಹೆಸರು, ಪಕ್ಷದ ಚಿಹ್ನೆ!

 

ಅಲ್ಲದೆ, ಉದ್ಧವ್ ಠಾಕ್ರೆ ಹೆಸರಿಸದೆ, 2019 ರ ವಿಧಾನಸಭೆ ಚುನಾವಣೆಗೆ ಮುನ್ನ ಮುಖ್ಯಮಂತ್ರಿ ಸ್ಥಾನವನ್ನು ಹಂಚಿಕೊಳ್ಳುವ ಬಗ್ಗೆ ಯಾವುದೇ ಒಪ್ಪಂದವಾಗಿರಲಿಲ್ಲ ಎಂದೂ ಅಮಿತ್ ಶಾ ಪುನರುಚ್ಚರಿಸಿದ್ದಾರೆ. 2019 ರ ವಿಧಾನಸಭಾ ಚುನಾವಣೆಯ ಫಲಿತಾಂಶಗಳು ಪ್ರಕಟವಾದ ನಂತರ ಶಿವಸೇನೆಯು ಭಾರತೀಯ ಜನತಾ ಪಕ್ಷದೊಂದಿಗೆ ತನ್ನ ಮೈತ್ರಿಯನ್ನು ಮುರಿದುಕೊಂಡಿತ್ತು. ಅಲ್ಲದೆ, ತನ್ನೊಂದಿಗೆ ಸಿಎಂ ಸ್ಥಾನವನ್ನು ಹಂಚಿಕೊಳ್ಳುವ ಭರವಸೆಯನ್ನು ತಿರಸ್ಕರಿಸಿದೆ ಎಂದೂ ಹೇಳಿಕೊಂಡಿತ್ತು.

Latest Videos
Follow Us:
Download App:
  • android
  • ios