ಬಗೆಹರಿಯದ ಶಬರಿಮಲೆ ದೇಗುಲಕ್ಕೆ ಮಹಿಳೆಯರ ಪ್ರವೇಶ ವಿವಾದ| ಪ್ರಕರಣವ ಮತ್ತೆ ವಿಸ್ಕೃತ ಪೀಠಕ್ಕೆ ಪ್ರಕರಣ ವರ್ಗಾವಣೆ| 7 ಸದಸ್ಯರ ಪೀಠಕ್ಕೆ ಪ್ರಕರಣ ವರ್ಗಾವಣೆ| ಈ ಹಿಂದಿನ ತೀರ್ಪಿಗೆ ತಡೆ ಇಲ್ಲ, ಮಹಿಳೆಯರ ದೇಗುಲ ಪ್ರವೇಶಕ್ಕೆ ಅಡ್ಡಿ ಇಲ್ಲ

"

ಕೊಚ್ಚಿ[ನ.14]: ಶಬರಿಮಲೆ ದೇಗುಲಕ್ಕೆ ಮಹಿಳೆಯರ ಪ್ರವೇಶಕ್ಕೆ ಸಂಬಂಧಿಸಿದಂತೆ ಉದ್ಭವಿಸಿರುವ ವಿವಾದ ನಿರೀಕ್ಷೆಯಂತೆ ಬಗೆ ಹರಿಯಲಿಲ್ಲ. ಕೇರಳದ ಶಬರಿಮಲೆ ದೇಗುಲಕ್ಕೆ ಎಲ್ಲಾ ವಯೋಮಾನದ ಮಹಿಳೆಯರ ಪ್ರವೇಶಕ್ಕೆ ಅವಕಾಶ ಕಲ್ಪಿಸಿ 2018ರ ಸೆ.28ರಂದು ನೀಡಿದ್ದ ತೀರ್ಪನ್ನು ಪುನರ್‌ಪರಿಶೀಲಿಸುವಂತೆ ಕೋರಿದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಮತ್ತೆ ವಿಸ್ಕೃತ ಪೀಠಕ್ಕೆ ವರ್ಗಾಯಿಸಿದೆ. ಆದರೆ, ಈಗಾಗಲೇ ನೀಡಿದ ತೀರ್ಪಿನಂತೆ ಎಲ್ಲಾ ವಯೋಮಾನದ ಮಹಿಳೆಯರು ದೇವಸ್ಥಾನಕ್ಕೆ ಪ್ರವೇಶಿಸಲು ಯಾವುದೇ ನಿರ್ಬಂಧವಿರುವುದಿಲ್ಲ. ಮತ್ತೆ ಏಳು ಸದಸ್ಯರ ಪೀಠ ತೀರ್ಪು ನೀಡುವ ತನಕ ಇದೇ ತೀರ್ಪು ಮಾನ್ಯ ಪಡೆಯಲಿದೆ.

ಕರ್ನಾಟಕದ ಈ ದೇವಸ್ಥಾನದಲ್ಲಿ ಮಹಿಳೆಯರಿಗಿಲ್ಲ ಪ್ರವೇಶ

ಮುಖ್ಯ ನ್ಯಾಯಮೂರ್ತಿ ರಂಜನ್ ಗೋಗಯಿ ಅವರ ನೇತೃತ್ವದ ಪೀಠ 'ಮಹಿಳೆಯರಿಗೆ ನಿರ್ಬಂಧ ಹೇರಿದ್ದು ಕೇವಲ ಶಬರಿಮಲೆ ದೇಗುಲದಲ್ಲಿ ಮಾತ್ರವಲ್ಲ. ಇದು ಇತರೆ ಹಲವು ದೇವಸ್ಥಾನಗಳಲ್ಲಿ ಹಾಗೂ ಮಸೀದಿಗಳಲ್ಲಿಯೂ ಇದೆ,' ಎಂಬ ಅಭಿಪ್ರಾಯ ವ್ಯಕ್ತಪಡಿಸಿದ್ದರು. ಆದರೆ, ಪೀಠದ ಉಳಿದ ಸದಸ್ಯರಾದ ನ್ಯಾ.ರೋಹಿಂಟನ್ ಫಾಲಿ ನರಿಮನ್ ಮತ್ತು ನ್ಯಾ.ಡಿ.ವೈ.ಚಂದ್ರಚೂಡ್ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಲಿಲ್ಲ. ಇದರಿಂದ ಅರ್ಜಿಯ ವಿಚಾರಣೆಯನ್ನು ವಿಸ್ಕೃತ ಪೀಠಕ್ಕೆ ವರ್ಗಾಯಿಸಲಾಯಿತು.

Scroll to load tweet…
Scroll to load tweet…

ಏನಿದು ವಿವಾದ?

ಶಬರಿಮಲೆ ದೇಗುಲಕ್ಕೆ 10-50ರ ವಯೋಮಾನದ ಮಹಿಳೆಯರ ಪ್ರವೇಶಕ್ಕಿದ್ದ ನಿರ್ಬಂಧವನ್ನು ತೆಗೆದುಹಾಕಿದ್ದ ಸುಪ್ರೀಂಕೋರ್ಟ್‌ನ 5 ಸದಸ್ಯರ ನ್ಯಾಯಪೀಠ 2018ರ ಸೆ.28ರಂದು 4-1ರ ಬಹುಮತದಲ್ಲಿ ನೀಡಿದ್ದ ತೀರ್ಪಿನಲ್ಲಿ ಎಲ್ಲಾ ವಯೋಮಾನದ ಮಹಿಳೆಯರು ದೇಗುಲ ಪ್ರವೇಶಿಸಬಹುದು ಎಂದು ತೀರ್ಪು ನೀಡಿತ್ತು. ಈ ರೀತಿಯ ಮಹಿಳೆಯರಿಗೆ ಅವರ ವಯಸ್ಸಿಗನುಗುಣವಾಗಿ ನಿರ್ಬಂಧ ಹೇರಿಕೆ ಅಕ್ರಮ ಮತ್ತು ಅಸಾಂವಿಧಾನಿಕ ಎಂಬ ಅಭಿಪ್ರಾಯ ವ್ಯಕ್ತಪಡಿಸಿತ್ತು. 

ರಫೇಲ್ ಡೀಲ್: ಮೋದಿಗೆ ಕ್ಲೀನ್ ಚಿಟ್

ಈ ತೀರ್ಪು ಸಂಪ್ರದಾಯವಾದಿಗಳ ತೀವ್ರ ಆಕ್ರೋಶಕ್ಕೆ ಕಾರಣವಾಗಿ, ಕೇರಳದಲ್ಲಿ ಭಾರೀ ಹಿಂಸಾಚಾರ ಕೂಡಾ ಸಂಭವಿಸಿತ್ತು. ಈ ತೀರ್ಪನ್ನು ಪುನರ್‌ ಪರಿಶೀಲನೆ ಮಾಡಬೇಕೆಂದು ಸುಪ್ರೀಂಕೋರ್ಟ್‌ಗೆ 56 ಅರ್ಜಿಗಳು, 4 ರಿಟ್‌ ಅರ್ಜಿಗಳು ಸಲ್ಲಿಕೆಯಾಗಿದ್ದವು. ಅಲ್ಲದೆ ತೀರ್ಪು ಪ್ರಕಟಗೊಂಡ ನಂತರ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದ 5 ಅರ್ಜಿಗಳನ್ನು ಒಂದುಗೂಡಿಸಿ ಸುಪ್ರೀಂಕೋರ್ಟ್‌ ವಿಚಾರಣೆ ನಡೆಸಿತ್ತು. 

 ನವೆಂಬರ್ 14ರ ಟಾಪ್ 10 ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ