ಪೆಟ್ರೋಲ್ ತುಂಬಿಸಲು ಕಾಯುತ್ತಿದ್ದ ಶಿಕ್ಷಕನಿಗೆ ದಿಢೀರ್ ಹೃದಯಾಘಾತ, ಸಿಸಿವಿಯಲ್ಲಿ ಕೊನೆ ಕ್ಷಣ ಸೆರೆ!

ಪೆಟ್ರೋಲ್ ತುಂಬಿಸಲು ಸ್ಕೂಟರ್‌ನಲ್ಲಿ ಕಾಯುತ್ತಿದ್ದ ಶಿಕ್ಷಕನಿಗೆ ಪೆಟ್ರೋಲ್ ಪಂಪ್‌ನಲ್ಲಿ ದಿಢೀರ್ ಹೃದಯಾಘಾತವಾಗಿದೆ. ಕುಸಿದು ಬಿದ್ದು ಮೃತಪಟ್ಟ ಘಟನೆ ಸಿಸಿಟಿವಿಯಲ್ಲಿ ದಾಖಲಾಗಿದೆ.
 

School teacher dies of heart attack during filling petrol at station Maharashtra ckm

ಬೀಡ್(ಜು.29) ಜೀವನ ಶೈಲಿ, ಒತ್ತಡದ ಬದುಕಿನಿಂದ ಮನುಷ್ಯನ ಆರೋಗ್ಯ ಹದಗೆಡುತ್ತಿದೆ. ಇದರಿಂದ ಹೃದಯಾಘಾತ ಸೇರಿದಂತೆ ಹಲವು ಪ್ರಕರಣಗಳು ಹೆಚ್ಚಾಗುತ್ತಿದೆ. ಇದೀಗ ಶಿಕ್ಷಕೊಬ್ಬರು ಪೆಟ್ರೋಲ್ ಪಂಪ್‌ನಲ್ಲಿ ಪೆಟ್ರೋಲ್ ತುಂಬಿಸಿಕೊಳ್ಳಲು ಆಗಮಿಸಿದ್ದಾರೆ. ತನ್ನ ಸರದಿಗಾಗಿ ಕಾಯುತ್ತಿದ್ದಂತೆ ದಿಢೀರ್ ಹೃದಯಾಘಾತವಾಗಿ ಕುಸಿದು ಬಿದ್ದು ಮೃತಪಟ್ಟದ್ದ ಘಟನೆ ಮಹಾರಾಷ್ಟ್ರದ ಬೀಡ್ ಜಿಲ್ಲೆಯಲ್ಲಿ ನಡೆದಿದೆ. ಪೆಟ್ರೋಲ್ ಪಂಪ್‌ನಲ್ಲಿರುವ ಸಿಸಿಟಿವಿಯಲ್ಲಿ ದೃಶ್ಯ ಸೆರೆಯಾಗಿದೆ.

ನಗರ ರಸ್ತೆಯಲ್ಲಿರುವ ಪೆಟ್ರೋಲ್ ಪಂಪ್‌ಗೆ ಶಿಕ್ಷಕ್ಷ ಬಾಬಾಸಾಹೇಬ್ ಮಿಸಲ್ ತನ್ನ ಸ್ಕೂಟರ್‌ಗೆ ಪೆಟ್ರೋಲ್ ತುಂಬಿಸಿಕೊಳ್ಳಲು ಆಗಮಿಸಿದ್ದಾರೆ. ಆದರೆ ಪೆಟ್ರೋಲ್ ಪಂಪ್‌ನಲ್ಲಿ ಹಲವರು ಸರದಿ ಸಾಲಿನಲ್ಲಿ ನಿಂತಿದ್ದಾರೆ. ತನ್ನ ಸರದಿಗಾಗಿ ಕಾಯುತ್ತಿದ್ದ ಶಿಕ್ಷಕ ಆರೋಗ್ಯವಾಗಿ ಕಾಣುತ್ತಿದ್ದರು. ಮುಂಭಾಗದಲ್ಲಿದ್ದ ಬೈಕ್ ಪೆಟ್ರೋಲ್ ತುಂಬಿಸಿಕೊಳ್ಳುತ್ತಿದ್ದಂತೆ ಶಿಕ್ಷಕನಲ್ಲಿ ಅಸ್ವಸ್ಥತೆ ಕಾಣಿಸಿಕೊಂಡಿದೆ.

ಜುಂಬಾ ಡ್ಯಾನ್ಸ್ ಮಾಡುತ್ತಲೇ ಹೃದಯಾಘಾತಕ್ಕೆ ಖ್ಯಾತ ಉದ್ಯಮಿ ಬಲಿ,ಸಾವಿನ ಕೊನೆ ಕ್ಷಣ ಸೆರೆ!

ಕೆಲ ಹೊತ್ತಿನಲ್ಲಿ ಶಿಕ್ಷರಿಗೆ ತೀವ್ರ ಹೃದಯಾಘಾತವಾಗಿದೆ. ಹೃದಯಾಘಾತವಾಗುತ್ತಿದ್ದಂತೆ ಸ್ಕೂಟರ್ ಮುಂಭಾಗಕ್ಕೆ ಒರಗಿದ್ದಾರೆ. ಕ್ಷಣಾರ್ಧದಲ್ಲೇ ಸಂಪೂರ್ಣ ಅಸ್ವಸ್ಥಗೊಂಡು ನೆಲಕ್ಕುರುಳಿದ್ದಾರೆ. ಸ್ಕೂಟರ್ ಜೊತೆಯಲ್ಲೇ ನೆಲಕ್ಕೆ ಬಿದ್ದಿದ್ದಾರೆ. ತಕ್ಷಣವೇ ಪೆಟ್ರೋಲ್ ಪಂಪ್ ಸಿಬ್ಬಂದಿಗಳು, ಪೆಟ್ರೋಲ್ ತುಂಬಿಸಿಕೊಳ್ಳಲು ಆಗಮಿಸಿದ ಇತರ ಸವಾರರು ಓಡೋಡಿ ಬಂದಿದ್ದಾರೆ.

ತಕ್ಷಣ ಏನು ಮಾಡಬೇಕು ಎಂದು ತೋಚಿಲ್ಲ. ನೀರು ಕುಡಿಸುವ ಪ್ರಯತ್ನ ಮಾಡಿದ್ದಾರೆ. ಆದರೆ ಶಿಕ್ಷರಿಂದ ಯಾವುದೇ ಸ್ಪಂದನೆ ವ್ಯಕ್ತವಾಗಿಲ್ಲ.ಸಿಪಿಆರ್ ಪ್ರಯತ್ನಿಸಿದ್ದಾರೆ. ಆದರೆ ಪ್ರತಿಕ್ರಿಯೆ ವ್ಯಕ್ತವಾಗಿಲ್ಲ. ಹೀಗಾಗಿ ತಕ್ಷಣವೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಆಸ್ಪತ್ರೆ ದಾಖಲಾಗುವಷ್ಟರಲ್ಲೇ ಶಿಕ್ಷರು ಮೃತಪಟ್ಟಿದ್ದಾರೆ. 

ಭಾನುವಾರ ಈ ಘಟನೆ ಸಂಭವಿಸಿದೆ. ಶಿಕ್ಷಕರು ಎಂದಿನಂತೆ ಮನೆಯಿಂದ ಹೊರಟು ಇತರ ಕೆಲಗಳಿಗಾಗಿ ಪಟ್ಟಣಕ್ಕೆ ಆಗಮಿಸಿದ್ದಾರೆ. ತಮ್ಮ ಕೆಲಸ ಕಾರ್ಯ ಮುಗಿಸಿ ಮನೆಗೆ ಹಿಂತಿರುಗುವ ವೇಳೆ ಪೆಟ್ರೋಲ್ ತುಂಬಿಸಲು ಪೆಟ್ರೋಲ್ ಬಂಕ್‌ಗೆ ತೆರಳಿದ್ದಾರೆ. ಶಿಕ್ಷಕರಿಗೆ ಇತ್ತೀಚಿನ ದಿನಗಳಲ್ಲಿ ಯಾವುದೇ ರೀತಿಯ ಆರೋಗ್ಯ ಸಮಸ್ಯೆ ಇರಲಿಲ್ಲ. ಇಷ್ಟೇ ಅಲ್ಲ, ಒಂದು ದಿನವೂ ರಜೆ ಹಾಕದೇ ಮಕ್ಕಳಿಗೆ ಶಿಕ್ಷಣ ನೀಡುತ್ತಿದ್ದರು. ವಿದ್ಯಾಭ್ಯಾಸ ಮಾಡಿಸುತ್ತಿದ್ದರು. ದಿಢೀರ್ ಹೃದಯಾಘಾತ ಕುಟುಂಬದಲ್ಲೂ ಆತಂಕ ಹೆಚ್ಚಿಸಿದೆ. 

ಇತ್ತೀಚೆಗೆ ಹೃದಯಾಘಾತ ಪ್ರಕರಣಗಳು ಹೆಚ್ಚಾಗುತ್ತಿದೆ. ಇದು ಕಳವಳ ಹೆಚ್ಚಿಸಿದೆ. ಅನಾರೋಗ್ಯಕರ ಆಹಾರ ಪದ್ಧತಿ, ಜೀವನ ಶೈಲಿಗಳಿಂದ ಎಲ್ಲಾ ವಯೋಮಾನದವರಲ್ಲೂ ಹೃದಯಾಘಾತ ಕಾಣಿಸಿಕೊಳ್ಳುತ್ತಿದೆ. ದಿಢೀರ್ ಹೃದಯಾಘಾತ ಪ್ರಕರಣಗಳು ಗಣನೀಯವಾಗಿ ಹೆಚ್ಚಾಗುತ್ತಿದೆ. ಈ ಕುರಿತು ಆರೋಗ್ಯ ಕಾಪಾಡಿಕೊಳ್ಳಲು ಆರೋಗ್ಯ ಸಚಿವಾಲಯ ಜಾಗೃತಿಗಳನ್ನು ಮೂಡಿಸಲಾಗುತ್ತಿದೆ.

ಮೆರವಣಿಗೆಯೊಂದಿಗೆ ಮಂಟಪಕ್ಕೆ ತೆರಳುತ್ತಿದ್ದ ವರನ ಬಂಧಿಸಿದ ಪೊಲೀಸ್, ಬಳಿಕ ನಡೆದಿದ್ದೇ ದುರಂತ!


 

Latest Videos
Follow Us:
Download App:
  • android
  • ios