Asianet Suvarna News Asianet Suvarna News

ಮೋದಿ ವಿರುದ್ಧ ಬಿಬಿಸಿ ಸಾಕ್ಷ್ಯಚಿತ್ರ ಪ್ರದರ್ಶನ, ದೆಹಲಿ ವಿಶ್ವವಿದ್ಯಾಲಯದಲ್ಲಿ ಸೆಕ್ಷನ್ 144 ಜಾರಿ

ಮೋದಿ ವಿರುದ್ಧ ಬಿಬಿಸಿಯ ಸಾಕ್ಷ್ಯಚಿತ್ರ ಪ್ರದರ್ಶನಕ್ಕೆ ಮುಂದಾದ ಕಾಂಗ್ರೆಸ್ ವಿದ್ಯಾರ್ಥಿ ಘಟಕದ ವಿದ್ಯಾರ್ಥಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇತ್ತ ದೆಹಲಿ ವಿಶ್ವವಿದ್ಯಾಲಯದ ಸೆಕ್ಷನ್ 144 ಜಾರಿ ಮಾಡಲಾಗಿದೆ.
 

Section 144 imposed in Delhi university after Congress student wing try to screen BBC Documentary against PM Modi ckm
Author
First Published Jan 27, 2023, 6:28 PM IST

ನವದೆಹಲಿ(ಜ.27): ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಬಿಬಿಸಿ ಹೊರತಂದಿರುವ ಸಾಕ್ಷ್ಯಚಿತ್ರಕ್ಕೆ ಕೇಂದ್ರ ಸರ್ಕಾರ ನಿಷೇಧ ಹೇರಿದೆ.  ಕಾಂಗ್ರೆಸ್, ಕಾಂಗ್ರೆಸ್ ವಿದ್ಯಾರ್ಥಿ ಘಟಕ ಸೇರಿದಂತೆ ಕೆಲ ಸಂಘಟನೆಗಳು ಸಾಕ್ಷ್ಯಚಿತ್ರ ಪ್ರದರ್ಶನಕ್ಕೆ ಮುಂದಾಗಿರುವುದು ಕೋಲಾಹಲ ಸೃಷ್ಟಿಸಿದೆ. ಕೆಲ ಪ್ರಮುಖ ವಿಶ್ವವಿದ್ಯಾಲಯಗಳಲ್ಲಿ ಸಾಕ್ಷ್ಯಚಿತ್ರ ಪ್ರದರ್ಶನ ಭಾರಿ ಗದ್ದಲಕ್ಕೆ ಕಾರಣವಾಗಿದೆ. ಜಾಮಿಯಾ ವಿಶ್ವವಿದ್ಯಾಲಯ,  ಜೆನ್‌ಯು, ಕೇರಳದ ಬಳಿಕ ಇದೀಗ ದೆಹಲಿ ವಿಶ್ವವಿದ್ಯಾಲಯದಲ್ಲಿ ಮೋದಿ ವಿರುದ್ಧದ ಬಿಬಿಸಿ ಸಾಕ್ಷ್ಯಚಿತ್ರ ಪ್ರದರ್ಶನಕ್ಕೆ ಕಾಂಗ್ರೆಸ್ ವಿದ್ಯಾರ್ಥಿ ಘಟಕ ಮುಂದಾಗಿತ್ತು. ಇದರಿಂದ ವಿಶ್ವವಿದ್ಯಾಲಯ ಆವರಣ ರಣಾಂಗಣವಾಗಿತ್ತು. ಇತ್ತ ಪರಿಸ್ಥಿತಿ ನಿಯಂತ್ರಣಕ್ಕೆ ಸೆಕ್ಷನ್ 144 ಜಾರಿ ಮಾಡಲಾಗಿದೆ.

ಕಾಂಗ್ರೆಸ್ ಪಕ್ಷದ ವಿದ್ಯಾರ್ಥಿ ಘಟಕ NSUI-KSU ದೆಹಲಿ ವಿಶ್ವವಿದ್ಯಾಲಯದಲ್ಲಿ ಮೋದಿ ವಿರುದ್ದ ಬಿಬಿಸಿ ಹೊರತಂದ ಸಾಕ್ಷ್ಯಚಿತ್ರ ಪ್ರದರ್ಶನಕ್ಕೆ ಮುಂದಾಗಿತ್ತು. ಸದ್ದಿಲ್ಲದ ತಯಾರಿಗಳು ನಡೆಯುತ್ತಿತ್ತು. ಈ ವಿಚಾರ ಬೆಳಕಿಗೆ ಬಂದ ಬೆನ್ನಲ್ಲೇ ವಿಶ್ವವಿದ್ಯಾಲದಯ ಆವರಣ ರಣಾಂಗಣವಾಗಿದೆ. ವಿಶ್ವವಿದ್ಯಾಲಯ ಆವರಣಕ್ಕೆ ಪೊಲೀಸ್ ಪಡೆಗಳು ಎಂಟ್ರಿಕೊಟ್ಟಿವೆ. ಪರಿಸ್ಥಿತಿ ನಿಯಂತ್ರಣಕ್ಕೆ 144 ಸಕ್ಷನ ಜಾರಿ ಮಾಡಿದೆ. 

ವಿವಾದದ ನಡುವೆ ಕೇರಳದಲ್ಲಿ ಕಾಂಗ್ರೆಸ್‌ನಿಂದ ಮೋದಿ ವಿರುದ್ದ ಬಿಬಿಸಿ ಸಾಕ್ಷ್ಯಚಿತ್ರ ಪ್ರದರ್ಶನ!

ಸಾಕ್ಷ್ಯಚಿತ್ರ ಪ್ರದರ್ಶನಕ್ಕೆ ಮುಂದಾದ ಕಾಂಗ್ರೆಸ್ ವಿದ್ಯಾರ್ಥಿ ಘಚಕದ 24 ವಿದ್ಯಾರ್ಥಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ವೇಳೆ ಪೊಲೀಸರು ಹಾಗೂ ವಿದ್ಯಾರ್ಥಿ ಸಂಘಟನೆ ನಡುವೆ ವಾಗ್ವಾದ ನಡೆದಿದೆ. ಪೊಲೀಸರ ನಡೆ ವಿರುದ್ದ ಕಾಂಗ್ರೆಸ್ ವಿದ್ಯಾರ್ಥಿ ಘಟಕ ಆಕ್ರೋಶ ವ್ಯಕ್ತಪಡಿಸಿ ಪ್ರತಿಭಟನೆ ನಡೆಸಿದೆ. ಇದರ ಪರಿಣಾಮ ಸಕ್ಷನ್ 144 ಜಾರಿ ಮಾಡಲಾಿದೆ.

ಹಲವು ರಾಜ್ಯಗಳಲ್ಲಿ ಕಾಂಗ್ರೆಸ್‌ನಿಂದ ಬಿಬಿಸಿ ಸಾಕ್ಷ್ಯಚಿತ್ರ ಪ್ರಸಾರ
ಗುಜರಾತ್‌ ಗಲಭೆ ಮತ್ತು ಅದರಲ್ಲಿ ಪ್ರಧಾನಿ ನರೇಂದ್ರ ಮೋದಿ ಪಾತ್ರದ ಕುರಿತು ಬೆಳಕು ಚೆಲ್ಲುವ ಅಂಶಗಳನ್ನು ಒಳಗೊಂಡಿರುವ ಬಿಬಿಸಿಯ ಸಾಕ್ಷ್ಯಚಿತ್ರವನ್ನು ಗುರುವಾರ ದೇಶದ ಹಲವು ರಾಜ್ಯಗಳಲ್ಲಿ ಕಾಂಗ್ರೆಸ್‌ ಮತ್ತು ಅದರ ಉಪ ಸಂಘಟನೆಗಳು ಮಾಡಿವೆ. ಕೇರಳದ ತಿರುವನಂತಪುರದ ಷಣ್ಮುಗಂ ಬೀಚ್‌ನಲ್ಲಿ ಕಾಂಗ್ರೆಸ್‌ ಈ ಸಾಕ್ಷ್ಯಚಿತ್ರ ಪ್ರಸಾರ ಮಾಡಿದೆ. ಉಳಿದಂತೆ ಹೈದರಾಬಾದ್‌, ಕೋಲ್ಕತಾ, ಚಂಡೀಗಡ, ದೆಹಲಿ ಹಾಗೂ ಇತರೆ ಹಲವು ನಗರಗಳಲ್ಲೂ ಗುರುವಾರ ಕಾಂಗ್ರೆಸ್‌ ವತಿಯಿಂದ ಸಾಕ್ಷ್ಯಚಿತ್ರ ಪ್ರಸಾರ ಮಾಡಲಾಗಿದೆ. 

'ನಮೋ' ಕುರಿತು ವಿವಾದಾತ್ಮಕ ಸಾಕ್ಷ್ಯಚಿತ್ರ: ಜೆ.ಎನ್.ಯುನಲ್ಲಿ ಕಲ್ಲು ತೂರಾಟ ಆಗಿದ್ದೇಕೆ?

ದೆಹಲಿ ಜೆಎನ್‌ಯು, ಹೈದ್ರಾಬಾದ್‌ ಕೇಂದ್ರೀಯ ವಿವಿ ಬಳಿಕ ಇದೀಗ ದೆಹಲಿಯ ಜಾಮೀಯಾ ಮಿಲಿಯಾ ಇಸ್ಲಾಮಿಯಾ ವಿಶ್ವವಿದ್ಯಾಲಯದಲ್ಲೂ ಸಾಕ್ಷ್ಯಚಿತ್ರ ಪ್ರದರ್ಶನಕ್ಕೆ ಯತ್ನ ನಡೆಸಲಾಗಿದೆ. ಆದರೆ ಎಡ​ಪಕ್ಷ ಬೆಂಬ​ಲಿತ ಸ್ಟೂಡೆಂಟ್‌ ಫೆಡ​ರೇ​ಶನ್‌ ಆಫ್‌ ಇಂಡಿಯಾ (ಎಸ್‌​ಎಫ್‌ಐ) ಬುಧವಾರ ನಡೆಸಿದÜ ಈ ಯತ್ನಕ್ಕೆ ವಿವಿ ಆಡಳಿತ ಮಂಡಳಿ ತಡೆಯೊಡ್ಡಿದೆ. ಈ ವೇಳೆ ಪ್ರತಿಭಟನೆ ನಡೆಸಿದ 70 ವಿದ್ಯಾರ್ಥಿಗಳನ್ನು ಪೊಲೀಸರು ವಶಕ್ಕೆ ಪಡೆದು ಬಳಿಕ ಬಿಡುಗಡೆ ಮಾಡಿದ್ದಾರೆ.ಬುಧವಾರ ಸಂಜೆ 6 ಗಂಟೆಯಿಂದ ಸಾಕ್ಷ್ಯಚಿತ್ರ ಪ್ರದರ್ಶನ ಮಾಡುವುದಾಗಿ ಎಸ್‌ಎಫ್‌ಐ ಮೊದಲೇ ಹೇಳಿಕೆ ಬಿಡುಗಡೆ ಮಾಡಿತ್ತು. ಆದರೆ ವಿವಿ ಆಡಳಿತ ಮಂಡಳಿ ಇದಕ್ಕೆ ಅವಕಾಶ ನಿರಾಕರಿಸಿತ್ತು ವಿವಿಯಲ್ಲಿ ಶೈಕ್ಷಣಿಕ ವಾತಾವರಣನ್ನು ಹಾಳುಗೆಡವಲು ಕೆಲವು ಪಟ್ಟಭದ್ರ ಹಿತಾಸಕ್ತಿಗಳು ಯತ್ನಿಸುತ್ತಿದ್ದು, ಇದಕ್ಕೆ ಯಾವುದೇ ಕಾರಣಕ್ಕೂ ಅವಕಾಶ ನೀಡಲ್ಲ ಎಂದು ಸ್ಪಷ್ಟಪಡಿಸಿತ್ತು.

Follow Us:
Download App:
  • android
  • ios