ಕೊಲ್ಕತಾ(ಆ.29):  ಪಶ್ಚಿಮ ಬಂಗಾಳ ಬಿಜೆಪಿಗೆ ಮತ್ತೆ ಇರಿಸು ಮುರಿಸು ಉಂಟಾಗಿದೆ. 2019ರಲ್ಲಿ ತೃಣಮೂಲ ಕಾಂಗ್ರೆಸ್ ಹಿರಿಯ ನಾಯಕ ತುಷಾರ್ ಕಾಂತಿ ಬಟ್ಟಾಚಾರ್ಯರನ್ನು ಬಿಜೆಪಿ ಆತ್ಮೀಯವಾಗಿ ಪಕ್ಷಕ್ಕೆ  ಸ್ವಾಗತಿಸಿತ್ತು. ಆದರೆ ಒಂದೇ ವರ್ಷದಲ್ಲಿ ತುಷಾರ್ ಕಾಂತಿ ಬಿಜೆಪಿಗೆ ಗುಡ್ ಬೈ ಹೇಳಿ ಮತ್ತೆ ತೃಣಮೂಲ ಕಾಂಗ್ರೆಸ್‌ಗೆ ಮರಳಿದ್ದಾರೆ.

ಮಮತಾ ರಾಜಕೀಯ ನಿರಾಶ್ರಿತ ಆಗುವುದು ನಿಶ್ಚಿತ: ಶಾ.

20116ರ ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ಬಿಶ್ನಪುರ್ ಕ್ಷೇತ್ರದಿಂದ ಕಾಂಗ್ರೆಸ್ ಅಬ್ಯರ್ಥಿಯಾಗಿ ಸ್ಪರ್ಧಿಸಿ ಭರ್ಜರಿ ಗೆಲುವು ಸಾಧಿಸಿದ್ದರು. ಬಳಿಕ ನೇರವಾಗಿ ತೃಣಮೂಲ ಕಾಂಗ್ರೆಸ್‌ಗೆ ಸೇರಿಕೊಂಡಿದ್ದರು. 2019ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಸಾಧನೆ ಮಾಡಿತ್ತು. 42 ಲೋಕಸಭಾ ಸ್ಥಾನಗಳ ಪೈಕಿ 18 ಸ್ಥಾನ ಗೆದ್ದಿತ್ತು. ಇದರ ಬೆನ್ನಲ್ಲೇ ತುಷಾರ್ ಕಾಂತಿ ಬಿಜೆಪಿ ಸೇರಿಕೊಂಡಿದ್ದರು.

ಬಿಜೆಪಿ ಸಂಸದ‌ ಘೋಷ್‌ ಮೇಲೆ ಹಲ್ಲೆ!

ಕೆಲ ಕಾರಣಗಳಿಂದ ತೃಣಮೂಲ ಕಾಂಗ್ರೆಸ್ ಪಕ್ಷದ ಜೊತೆ ಅಸಮಾಧಾನವಿತ್ತು. ಆದರೆ ತೃಣಮೂಲಕ ಕಾಂಗ್ರೆಸ್ ವಿರುದ್ಧ ದ್ವೇಷ ಇರಲಿಲ್ಲ. ಇದೀಗ ಎಲ್ಲಾ ಸಮಸ್ಯೆಗಳನ್ನು ಬಗೆಹರಿಸಿಕೊಂಡು ಮತ್ತೆ ಪಕ್ಷಕ್ಕೆ ಮರಲಿದ್ದೇನೆ ಎಂದು ತುಷಾರ್ ಕಾಂತಿ ಹೇಳಿದ್ದಾರೆ.

ಬಿಜೆಪಿಗೆ ಗುಡೈ ಬೈ ಹೇಳಿದ ತುಷಾರ್ ಕಾಂತಿ ಘಟನೆಗೆ ಹೆಚ್ಚಿನ ಮಹತ್ವ ಕೊಡಬೇಕಾದ ಅವಶ್ಯಕತೆ ಇಲ್ಲ ಎಂದು ಪಶ್ಚಿಮ ಬಂಗಾಳ ಬಿಜೆಪಿ ಹೇಳಿದೆ. 2019ರಲ್ಲಿ ಬಿಜೆಪಿ ಸೇರಿದ ತುಷಾರ್ ಕೇವಲ ಕಾಗದ ಪತ್ರದಲ್ಲಿ ಮಾತ್ರ ಬಿಜೆಪಿಯಲ್ಲಿದ್ದರು. ಪಕ್ಷದ ಯಾವುದೇ ಚಟುವಟಿಕೆಯಲ್ಲಿ ಪಾಲ್ಗೊಂಡಿಲ್ಲ. ಹೀಗಾಗಿ ತುಷಾರ್ ನಿರ್ಗಮನದಿಂದ ಬಿಜೆಪಿಗೆ ಯಾವುದೇ ನಷ್ಟವಿಲ್ಲ ಎಂದಿದೆ.

2019ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಐತಿಹಾಸಿಕ ಸಾಧನೆ ಮಾಡಿತ್ತು. ಪಶ್ಚಿಮ ಬಂಗಾಳದಲ್ಲಿ ಇದೇ ಮೊದಲ ಬಾರಿಗೆ ಗರಿಷ್ಠ ಸ್ಥಾನಗಳನ್ನು ಗೆದ್ದುಕೊಂಡಿತ್ತು. ಇದರ ಬೆನ್ನಲ್ಲೇ ತೃಣಮೂಲ ಕಾಂಗ್ರೆಸ್‌ನ 7 ನಾಯಕರು, ಸಿಪಿಎಂ ಹಾಗೂ ಕಾಂಗ್ರೆಸ್‌ನ ತಲಾ ಓರ್ವ ನಾಯಕರು ಬಿಜೆಪಿ ಸೇರಿಕೊಂಡಿದ್ದರು.