ಕೊರೋನಾ ಲಸಿಕೆ ಉತ್ಪಾದಕ ಘಟಕದಲ್ಲಿ ಸಂಭವಿಸಿದ ಭಾರೀ ಅಗ್ನಿ ಅವಘಡದಲ್ಲಿ ಸಾವಿರ ಕೋಟಿಯಷ್ಟು ನಷ್ಟ ಸಂಭವಿಸಿದೆ. ನಷ್ಟದ ಬಗ್ಗೆ ಸಂಸ್ಥೆಯ ಮುಖ್ಯಸ್ಥರು ಹೇಳಿಕೊಂಡಿದ್ದಾರೆ.
ಪುಣೆ (ಜ.23): ಕೊರೋನಾ ಲಸಿಕೆ ಉತ್ಪಾದಕ ಘಟಕದಲ್ಲಿ ಗುರುವಾರ ಸಂಭವಿಸಿದ ಭಾರೀ ಅಗ್ನಿ ಅವಘಡದಿಂದ 1000 ಕೋಟಿ ರು.ಗಿಂತ ಹೆಚ್ಚಿನ ಮೌಲ್ಯದ ನಷ್ಟವಾಗಿದೆ ಎಂದು ಸೀರಂ ಇನ್‌ಸ್ಟಿಟ್ಯೂಟ್ ಹೇಳಿಕೊಂಡಿದೆ.
ಅಲ್ಲದೆ ಈ ಘಟನೆಯು ಕೇವಲ ಅಪಘಾತಕವೇ ಅಥವಾ ಉದ್ದೇಶಪೂರ್ವಕವೇ ಎಂಬುದು ತನಿಖೆಯಿಂದ ಬಯಲಾಗಲಿದೆ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಹೇಳಿದ್ದಾರೆ.
ಈ ಬಗ್ಗೆ ಶುಕ್ರವಾರ ಮಾತನಾಡಿದ ಸೀರಂ ಸಂಸ್ಥೆಯ ಸಿಇಒ ಅದಾರ್ ಪೂನವಾಲಾ ಅವರು, ‘ಲಸಿಕೆ ಘಟಕದಲ್ಲಿದ್ದ ಹಲವು ಸಾಮಗ್ರಿಗಳು ಬೆಂಕಿಗೆ ಆಹುತಿಯಾಗಿದ್ದು, ಪರಿಣಾಮ 1000 ಕೋಟಿ ರು.ಗಿಂತ ಹೆಚ್ಚಿನ ಹಾನಿಯಾಗಿದೆ. ಆದರೆ ಕೋವಿಶೀಲ್ಡ್ ಲಸಿಕೆ ಉತ್ಪಾದಕ ಘಟಕಕ್ಕೆ ಯಾವುದೇ ಹಾನಿಯಾಗಿಲ್ಲ’ ಎಂದು ಪುನರುಚ್ಚಿಸಿದ್ದಾರೆ.
ಐದು ತಿಂಗಳಲ್ಲಿ 31 ಬಾರಿ ಈಕೆಗೆ ಕೋವಿಡ್ ಪಾಸಿಟಿವ್! ..
ಈಗಾಗಲೇ ದೇಶದಲ್ಲಿ ಕೊರೋನಾ ಲಸಿಕೆ ಹಂಚಿಕೆ ಪ್ರಕ್ರಿಯೆ ಆರಂಭವಾಗಿದ್ದು ಲಕ್ಷಾಂತರ ಮಂದಿಗೆ ಕೊರೋನಾ ಲಸಿಕೆ ನಿಡಲಾಗುತ್ತಿದೆ.
Read Exclusive COVID-19 Coronavirus News updates, from Karnataka, India and World at Asianet News Kannada.
ವರ್ಚುಯಲ್ ಬೋಟ್ ರೇಸಿಂಗ್ ಗೇಮ್ ಆಡಿ ಮತ್ತು ನಿಮಗೆ ನೀವೇ ಸವಾಲು ಹಾಕಿಕೊಳ್ಳಿ ಈಗಲೇ ಆಡಲು ಕ್ಲಿಕ್ಕಿಸಿ
Last Updated Jan 23, 2021, 9:15 AM IST