ಪುಣೆ(ಜ.24): ಕೊರೋನಾ ಲಸಿಕೆ ಉತ್ಪಾದಕ ಘಟಕದಲ್ಲಿ ಗುರುವಾರ ಸಂಭವಿಸಿದ ಭಾರೀ ಅಗ್ನಿ ಅವಘಡದಿಂದ 1000 ಕೋಟಿ ರು.ಗಿಂತ ಹೆಚ್ಚಿನ ಮೌಲ್ಯದ ನಷ್ಟವಾಗಿದೆ ಎಂದು ಸೀರಂ ಇನ್‌ಸ್ಟಿಟ್ಯೂಟ್‌ ಹೇಳಿಕೊಂಡಿದೆ.

ಅಲ್ಲದೆ ಈ ಘಟನೆಯು ಕೇವಲ ಅಪಘಾತಕವೇ ಅಥವಾ ಉದ್ದೇಶಪೂರ್ವಕವೇ ಎಂಬುದು ತನಿಖೆಯಿಂದ ಬಯಲಾಗಲಿದೆ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್‌ ಠಾಕ್ರೆ ಹೇಳಿದ್ದಾರೆ.

ಈ ಬಗ್ಗೆ ಶುಕ್ರವಾರ ಮಾತನಾಡಿದ ಸೀರಂ ಸಂಸ್ಥೆಯ ಸಿಇಒ ಅದಾರ್‌ ಪೂನವಾಲಾ ಅವರು, ‘ಲಸಿಕೆ ಘಟಕದಲ್ಲಿದ್ದ ಹಲವು ಸಾಮಗ್ರಿಗಳು ಬೆಂಕಿಗೆ ಆಹುತಿಯಾಗಿದ್ದು, ಪರಿಣಾಮ 1000 ಕೋಟಿ ರು.ಗಿಂತ ಹೆಚ್ಚಿನ ಹಾನಿಯಾಗಿದೆ. ಆದರೆ ಕೋವಿಶೀಲ್ಡ್‌ ಲಸಿಕೆ ಉತ್ಪಾದಕ ಘಟಕಕ್ಕೆ ಯಾವುದೇ ಹಾನಿಯಾಗಿಲ್ಲ’ ಎಂದು ಪುನರುಚ್ಚಿಸಿದ್ದಾರೆ.