ನವದೆಹಲಿ(ಮೇ.15): ಕೊರೋನಾದಿಂದ ಬಳಲುತ್ತಿರುವ ತನ್ನ ತಂದೆಗಾಗಿ ಆಮ್ಲಜನಕದ ಸಿಲಿಂಡರ್‌ ಅನ್ನು ಒದಗಿಸುವಂತೆ ಕೇಳಿಕೊಂಡ ಮಹಿಳೆಗೆ ವ್ಯಕ್ತಿಯೊಬ್ಬ ಸೆಕ್ಸ್‌ಗೆ ಒತ್ತಾಯಿಸಿರುವ ಹೀನಾಯ ಘಟನೆ ದೆಹಲಿಯಲ್ಲಿ ನಡೆದಿದೆ. ಇತ್ತೀಚೆಗೆ ನಡೆದ ಈ ಘಟನೆಯ ಬಗ್ಗೆ ಸಂತ್ರಸ್ತೆಯ ಸ್ನೇಹಿತೆ ಟ್ವೀಟರ್‌ನಲ್ಲಿ ಬರೆದುಕೊಂಡಿದ್ದು, ಜನರಿಂದ ಭಾರೀ ಆಕ್ರೋಶ ವ್ಯಕ್ತವಾಗಿದೆ.

‘ಅನಾರೋಗ್ಯದಿಂದ ಬಳಲುತ್ತಿರುವ ನನ್ನ ಸ್ನೇಹಿತೆಯ ಸಹೋದರಿಯ ತಂದೆಗೆ ಆಮ್ಲಜಕದ ಸಿಲಿಂಡರ್‌ನ ಅವಶ್ಯಕತೆ ಇತ್ತು. ಆಕೆ ತನ್ನ ಪಕ್ಕದ ಮನೆಯಾತನ ಬಳಿ ಸಿಲಿಂಡರ್‌ ತಂದುಕೊಡುವಂತೆ ಕೇಳಿಕೊಂಡಿದ್ದಳು. ಆದರೆ, ಆತ ಅದಕ್ಕೆ ಪ್ರತಿಯಾಗಿ ಸೆಕ್ಸ್‌ಗೆ ಬೇಡಿಕೆ ಇಟ್ಟಿದ್ದಾನೆ. ಈತನ ವಿರುದ್ಧ ಯಾವ ಕ್ರಮ ಕೈಗೊಳ್ಳಬೇಕು ನೀವೇ ಹೇಳಿ ಎಂದು ಭವರೀನ್‌ ಕಂಧಾರಿ ಎಂಬಾಕೆ ಟ್ವೀಟ್‌ ಮಾಡಿದ್ದಾಳೆ.

ಈ ಬಗ್ಗೆ ನೆಟ್ಟಿಗರು ತಮ್ಮ ಆಕ್ರೋಶವನ್ನು ಹೊರಹಾಕಿದ್ದು, ಆತನ ಪೊಲೀಸ್‌ ಕೇಸ್‌ ದಾಖಲಿಸಬೇಕು ಎಂದು ಹೇಳಿದ್ದಾರೆ. ಇದೇ ವೇಳೆ ಈ ವಿಷಯವೀಗ ಸಾಮಾಜಿಕ ಜಾಲತಾಣದಲ್ಲಿ ಚರ್ಚೆಗೂ ಕಾರಣವಾಗಿದೆ.

ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್‌ ನ್ಯೂಸ್‌ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona