ಶಿವಾಜಿ ಪ್ರತಿಮೆ ಕುಸಿತ ಪ್ರಕರಣ; ಪರಾರಿಯಾಗಿದ್ದ ಶಿಲ್ಪಿ ಜಯದೀಪ್ ಅರೆಸ್ಟ್

ಸಿಂಧುದುರ್ಗ ಜಿಲ್ಲೆಯಲ್ಲಿ ಮರಾಠಾ ರಾಜ ಛತ್ರಪತಿ ಶಿವಾಜಿ ಪ್ರತಿಮೆ ಕುಸಿತದ ನಂತರ ತಲೆ ಮರೆಸಿಕೊಂಡಿದ್ದ ಶಿಲ್ಪಿ ಜಯದೀಪ್‌ ಆಪ್ಟೆನನ್ನು ಗುರುವಾರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣದಲ್ಲಿ ಇದು ಎರಡನೇ ಬಂಧನವಾಗಿದೆ.

Shivaji statue collapse case maharashtra police arrested sculptor-contractor Jaydeep Apte rav

ಮುಂಬೈ (ಸೆ.6): ಸಿಂಧುದುರ್ಗ ಜಿಲ್ಲೆಯಲ್ಲಿ ಮರಾಠಾ ರಾಜ ಛತ್ರಪತಿ ಶಿವಾಜಿ ಪ್ರತಿಮೆ ಕುಸಿತದ ನಂತರ ತಲೆ ಮರೆಸಿಕೊಂಡಿದ್ದ ಶಿಲ್ಪಿ ಜಯದೀಪ್‌ ಆಪ್ಟೆನನ್ನು ಗುರುವಾರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣದಲ್ಲಿ ಇದು ಎರಡನೇ ಬಂಧನವಾಗಿದೆ.

ಪ್ರತಿಮೆ ಕುಸಿತ ನಂತರ ಎರಡು ವಾರಗಳಿಂದ ಪೊಲೀಸರಿಂದ ತಪ್ಪಿಸಿಕೊಂಡು ತಿರುಗುತ್ತಿದ್ದ ಜಯದೀಪ್‌ನನ್ನು ಕಲ್ಯಾಣ್‌ನಲ್ಲಿರುವ ಅವರ ನಿವಾಸದಲ್ಲಿ ಬಂಧಿಸಲಾಗಿದೆ. ಈತನನ್ನು ಪತ್ತೆ ಹಚ್ಚಲು ಪೊಲೀಸರು 7 ತಂಡಗಳನ್ನು ರಚಿಸಿದ್ದರು. ಡಿಸಿಪಿ ಸಚಿನ್ ಗುಂಜಾಲ್ ನೇತೃತ್ವದ ತಂಡ ಜಯದೀಪ್‌ನನ್ನು ಬಂಧಿಸಿದೆ. ನಂತರ ಆತನನ್ನು ಸಿಂಧುದುರ್ಗ ಪೊಲೀಸರಿಗೆ ಒಪ್ಪಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಕೋಟೆಯೊಂದರಲ್ಲಿ ಉದ್ಘಾಟಿಸಿದ್ದ 35 ಅಡಿ ಎತ್ತರದ ಶಿವಾಜಿ ಪ್ರತಿಮೆ ಕುಸಿತ

ಈ ಹಿಂದೆ ಪ್ರತಿಮೆಯ ವಿನ್ಯಾಸ ಸಲಹೆಗಾರ ಚೇತನ್ ಪಾಟೀಲ್‌ನನ್ನು ಪೊಲೀಸರು ಬಂಧಿಸಿದ್ದರು.

Latest Videos
Follow Us:
Download App:
  • android
  • ios