ಸಿದ್ದರಾಮಯ್ಯ ದೇಶದ 3ನೇ ಶ್ರೀಮಂತ ಮುಖ್ಯಮಂತ್ರಿ: ಸಿಎಂ ಬಳಿ ಎಷ್ಟು ಕೋಟಿ ಆಸ್ತಿ ಇದೆ?

ಪೆಮಾ ಖಂಡು ಅವರು 180 ಕೋಟಿ ರು.. ಸಾಲ ಹೊಂದಿದ್ದಾರೆ. ಸಿದ್ದರಾಮಯ್ಯ 23 ಕೋಟಿ ರು. ಹಾಗೂ ನಾಯ್ಡು 10 ಕೋಟಿ ರು. ಸಾಲ ಹೊಂದಿದ್ದಾರೆ ಎಂದು ತಿಳಿಸಿದ ಎಡಿಆರ್ ವರದಿ 
 

Siddaramaiah is the 3rd Richest Chief Minister in India grg

ನವದೆಹಲಿ(ಡಿ.31):  ದೇಶದ ಮುಖ್ಯಮಂತ್ರಿಗಳ ಆಸ್ತಿ ವಿವರವನ್ನು ಅಸೋಸಿಯೇಷನ್ ಫಾರ್‌ಡೆಮಾಕ್ರಟಿಕ್ ರಿಫಾರ್ಮ (ಎಡಿಆರ್) ಸ್ವಯಂಸೇವಾ ಸಂಸ್ಥೆ ಬಿಡುಗಡೆ ಮಾಡಿದ್ದು, ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 51 ಕೋಟಿ ರು. ಮೌಲ್ಯದ ಆಸ್ತಿಯೊಂದಿಗೆ ಶ್ರೀಮಂತ ಸಿಎಂಗಳ ಪೈಕಿ 3ನೇ ಸ್ಥಾನ ಪಡೆದಿದ್ದಾರೆ. 

Siddaramaiah is the 3rd Richest Chief Minister in India grg

ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಅವರು 931 ಕೋಟಿ ರು. ಮೌಲ್ಯದ ಆಸ್ತಿಯೊಂದಿಗೆ ಭಾರತದ ನಂ.1 ಧನಿಕ ಸಿಎಂ ಎನ್ನಿಸಿಕೊಂಡಿದ್ದಾರೆ. ಅರುಣಾಚಲ ಪ್ರದೇಶದ ಪೆಮಾ ಖಂಡು 332 ಕೋಟಿ ರು. ಆಸ್ತಿಯೊಂದಿಗೆ 2ನೇ ಹಾಗೂ 51 ಕೋಟಿ ರು. ಆಸ್ತಿಯೊಂದಿಗೆ ಸಿದ್ದರಾಮಯ್ಯ 3ನೇ ಸ್ಥಾನ ಪಡೆದಿದ್ದಾರೆ.

ಕರ್ನಾಟಕದ ನಕ್ಸಲರ ಶರಣಾಗತಿಗೆ ಮತ್ತೊಂದು ಚಾನ್ಸ್ ಕೊಟ್ಟ ಸಿಎಂ ಸಿದ್ದರಾಮಯ್ಯ!

ಆದರೆ ಪಶ್ಚಿಮ ಬಂಗಾಳದ ಮಮತಾ ಬ್ಯಾನರ್ಜಿ ಕೇವಲ 15 ಲಕ್ಷರು. ಆಸ್ತಿಯೊಂದಿಗೆ 'ಅತ್ಯಂತ ಬಡವ ಸಿಎಂ' ಎಂಬ ಖ್ಯಾತಿಗೆ ಭಾಜನರಾಗಿದ್ದಾರೆ. ಸಿಎಂಗಳ ನಿವ್ವಳ ಆದಾಯ 7.3 ಪಟ್ಟು ಅಧಿಕ: ಭಾರತದ ತಲಾ ನಿವ್ವಳ ರಾಷ್ಟ್ರೀಯ ಆದಾಯ (ಎನ್‌ಎನ್‌ಐ) 2023-2024ರಲ್ಲಿ ಸರಿಸು ಮಾರು 1,85,854 ರು. ಆಗಿದ್ದರೆ, ಮುಖ್ಯ ಮಂತ್ರಿಗಳ ಸರಾಸರಿ ಸ್ವ-ಆದಾಯವು 13,64, 310 ರು. ಆಗಿದೆ. ಇದು ಭಾರತದ ಸರಾಸರಿ ತಲಾ ಆದಾಯಕ್ಕಿಂತ 7.3 ಪಟ್ಟು ಹೆಚ್ಚು.  

ಬಡ ಸಿಎಂಗಳು: 

ಪ.ಬಂಗಾಳದ ಮಮತಾ ಬ್ಯಾನರ್ಜಿ ಕೇವಲ 15 ಲಕ್ಷ ರು. ಆಸ್ತಿಯೊಂದಿಗೆ 'ಅತ್ಯಂತ ಬಡವ ಸಿಎಂ' ಆಗಿದ್ದರೆ, 55 ಲಕ್ಷ ರು. ಆಸ್ತಿ ಹೊಂದಿರುವ ಜಮ್ಮು- ಕಾಶ್ಮೀರ ಮುಖ್ಯಮಂತ್ರಿ ಒಮರ್‌ಅಬ್ದುಲ್ಲಾ ಅವರು ಈ ಪಟ್ಟಿಯಲ್ಲಿ 2ನೇ ಸ್ಥಾನದಲ್ಲಿದ್ದಾರೆ.  ಹಾಗೂ 1 ಕೋಟಿ ರು. ಆಸ್ತಿಯೊಂದಿಗೆ ಕೇರಳದ ಪಿಣರಾಯಿ ವಿಜಯನ್ 3ನೇ ಸ್ಥಾನದಲ್ಲಿದ್ದಾರೆ. 

13 ಸಿಎಂ ಮೇಲೆ ಕ್ರಿಮಿನಲ್ ಕೇಸು: 

13 (ಶೇ. 42ರಷ್ಟು) ಮುಖ್ಯಮಂತ್ರಿಗಳು ತಮ್ಮ ವಿರುದ್ಧ ಕ್ರಿಮಿನಲ್ ಮೊಕದ್ದಮೆಗಳನ್ನು ಘೋಷಿಸಿಕೊಂಡಿದ್ದರೆ, ಅವರಲ್ಲಿ 10 (ಶೇ.32) ಮಂದಿ ಕೊಲೆ ಯತ್ನ, ಅಪಹರಣ, ಲಂಚ ಮತ್ತು ಕ್ರಿಮಿನಲ್ ಬೆದರಿಕೆ ಸೇರಿದಂತೆ ಗಂಭೀರ ಕ್ರಿಮಿನಲ್ ಪ್ರಕರಣಗಳನ್ನು ಘೋಷಿಸಿಕೊಂಡಿದ್ದಾರೆ.  ಇನ್ನು 18 ಸಿಎಂಗಳ ಮೇಲೆ ಯಾವುದೇ ಕ್ರಿಮಿನಲ್ ಕೇಸಿಲ್ಲ. ದೇಶದ 31 ಮುಖ್ಯಮಂತ್ರಿ ಗಳ ಪೈಕಿ ಇಬ್ಬರು (ಪ.ಬಂಗಾಳದ ಮಮತಾ ಬ್ಯಾನರ್ಜಿ ಮತ್ತು ದೆಹಲಿಯ ಅತಿಶಿ) ಮಾತ್ರ ಇಬ್ಬರು ಮಹಿಳೆಯರಾಗಿದ್ದಾರೆ.

ಕೆಎಸ್‌ಆರ್‌ಟಿಸಿ ನೌಕರರ ಮುಷ್ಕರ ವಾಪಸ್: ನೌಕರರ ಮನವೊಲಿಸಿದ ಸಿಎಂ ಸಿದ್ದರಾಮಯ್ಯ!

ಸಿದ್ದರಾಮಯ್ಯ 23 ಕೋಟಿ ರುಪಾಯಿ ಸಾಲಗಾರ ಸಿಎಂ 

ಪೆಮಾ ಖಂಡು ಅವರು 180 ಕೋಟಿ ರು.. ಸಾಲ ಹೊಂದಿದ್ದಾರೆ. ಸಿದ್ದರಾಮಯ್ಯ 23 ಕೋಟಿ ರು. ಹಾಗೂ ನಾಯ್ಡು 10 ಕೋಟಿ ರು. ಸಾಲ ಹೊಂದಿದ್ದಾರೆ ಎಂದು ಎಡಿಆರ್ ವರದಿ ತಿಳಿಸಿದೆ. 

ಎಲ್ಲ ಮುಖ್ಯಮಂತ್ರಿಗಳ ಬಳಿ ₹1630 ಕೋಟಿ ಆಸ್ತಿ 

ರಾಜ್ಯ ವಿಧಾನಸಭೆಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಪ್ರತಿ ಮುಖ್ಯಮಂತ್ರಿಯ ಸರಾಸರಿ ಆಸ್ತಿ 52.59 ಕೋಟಿ ರು. ಎಂದು ವರದಿ ಹೇಳಿದೆ. ದೇಶದ 31 ಮುಖ್ಯಮಂತ್ರಿಗಳ ಒಟ್ಟು ಆಸ್ತಿ ₹1,630 ಕೋಟಿ ಆಗಿದೆ.

Latest Videos
Follow Us:
Download App:
  • android
  • ios