ಬಿಸಿಯೂಟದಲ್ಲಿ ಹಾವು: 30 ಮಕ್ಕಳು ಅಸ್ವಸ್ಥ, ಆಸ್ಪತ್ರೆಗೆ ದಾಖಲು; ಪೋಷಕರಿಂದ ತೀವ್ರ ಆಕ್ರೋಶ
ಬೇಳೆ ತುಂಬಿದ ಕಂಟೈನರ್ ಒಂದರಲ್ಲಿ ಹಾವು ಕಂಡುಬಂದಿದೆ ಎಂದು ಬಿಸಿಯೂಟ ಸಿದ್ಧಪಡಿಸಿದ್ದ ಶಾಲೆಯ ಸಿಬ್ಬಂದಿಯೊಬ್ಬರು ಹೇಳಿಕೊಂಡಿದ್ದಾರೆ.
ಪ್ರಾಥಮಿಕ ಶಾಲೆಯೊಂದರ ಮಧ್ಯಾಹ್ನದ ಬಿಸಿಯೂಟದಲ್ಲಿ ಹಾವು ಬಿದ್ದಿರುವ ಆಘಾತಕಾರಿ ಘಟನೆ ಪಶ್ಚಿಮ ಬಂಗಾಳದ ಬಿರ್ಭೂಮ್ ಜಿಲ್ಲೆಯಲ್ಲಿ ನಡೆದಿದೆ. ಈ ಆಹಾರವನ್ನು ಸೇವಿಸಿದ ನಂತರ ಹಲವಾರು ಶಾಲಾ ಮಕ್ಕಳು ಅಸ್ವಸ್ಥರಾಗಿದ್ದಾರೆ ಎಂದು ವರದಿಯಾಗಿದೆ. ಬಿರ್ಭೂಮ್ ಜಿಲ್ಲೆಯ ಮಯೂರೇಶ್ವರ ಬ್ಲಾಕ್‌ನ ಪ್ರಾಥಮಿಕ ಶಾಲೆಯ ಸುಮಾರು 30 ವಿದ್ಯಾರ್ಥಿಗಳು ಸೋಮವಾರ ಆಹಾರ ಸೇವಿಸಿದ ನಂತರ ಅಸ್ವಸ್ಥರಾಗಿದ್ದಾರೆ ಎಂದು ಸ್ಥಳೀಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಬೇಳೆ ತುಂಬಿದ ಕಂಟೈನರ್ (Container) ಒಂದರಲ್ಲಿ ಹಾವು (Snake) ಕಂಡುಬಂದಿದೆ ಎಂದು ಬಿಸಿಯೂಟ (Mid - day Meal) ಸಿದ್ಧಪಡಿಸಿದ್ದ ಶಾಲೆಯ (School) ಸಿಬ್ಬಂದಿಯೊಬ್ಬರು (Staff) ಹೇಳಿಕೊಂಡಿದ್ದಾರೆ. "ಮಕ್ಕಳು ವಾಂತಿ (Vomit) ಮಾಡಲು ಪ್ರಾರಂಭಿಸಿದ ಬಳಿಕ ನಾವು ಅವರನ್ನು ರಾಂಪುರಹತ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ (Hospital) ದಾಖಲಿಸಿದೆವು" ಎಂದೂ ಅವರು ಹೇಳಿದರು.
ಇದನ್ನು ಓದಿ: Karwar: ಇಲಿ ಬಿದ್ದ ಸಾಂಬಾರನ್ನೇ ಬಡಿಸಿದ ಅಡುಗೆ ಸಹಾಯಕರು, ಶಾಲಾ ಬಿಸಿಯೂಟ ತಿಂದು ವಿದ್ಯಾರ್ಥಿಗಳು ಅಸ್ವಸ್ಥ
ಇನ್ನು, ಈ ಘಟನೆ ಸಂಬಂಧ ಬ್ಲಾಕ್ ಅಭಿವೃದ್ಧಿ ಅಧಿಕಾರಿ ದೀಪಾಂಜನ್ ಜನಾ ಮಾತನಾಡಿ, ಮಧ್ಯಾಹ್ನದ ಊಟ ತಿಂದು ಮಕ್ಕಳು ಅಸ್ವಸ್ಥರಾಗುತ್ತಿರುವ ಬಗ್ಗೆ ಗ್ರಾಮಸ್ಥರಿಂದ ದೂರುಗಳು ಬಂದಿವೆ. ಜನವರಿ 10 ರಂದು (ಮಂಗಳವಾರ) ಭೇಟಿ ನೀಡಲಿರುವ ಜಿಲ್ಲಾ ಪ್ರಾಥಮಿಕ ಶಾಲೆಗಳ ನಿರೀಕ್ಷಕರಿಗೆ ಈ ಬಗ್ಗೆ ಮಾಹಿತಿ ನೀಡಿದ್ದೇನೆ ಎಂದೂ ಬ್ಲಾಕ್ ಅಭಿವೃದ್ಧಿ ಅಧಿಕಾರಿ ಮಾಹಿತಿ ನೀಡಿದ್ದಾರೆ.
ಅಲ್ಲದೆ, ಒಬ್ಬರನ್ನು ಹೊರತುಪಡಿಸಿ ಎಲ್ಲಾ ಮಕ್ಕಳನ್ನು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ. ಅವರು ಅಪಾಯದಿಂದ ಪಾರಾಗಿದ್ದಾರೆ ಎಂದೂ ಅಧಿಕಾರಿಗಳು ತಿಳಿಸಿದ್ದಾರೆ.
ಈ ಘಟನೆ ಬಳಿಕ ಮಕ್ಕಳ ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದು, ಶಾಲೆಯ ಮುಖ್ಯೋಪಾಧ್ಯಾಯರನ್ನು ಘೇರಾವ್ ಮಾಡಿದ್ದಾರೆ. ಅಲ್ಲದೆ, ಅವರ ದ್ವಿಚಕ್ರ ವಾಹನವನ್ನು ಧ್ವಂಸಗೊಳಿಸಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಬಳಿಕ ಘೇರಾವ್ ಹಿಂಪಡೆಯಲಾಯಿತು ಎಂದೂ ಅವರು ಹೇಳಿದರು.
ಇದನ್ನೂ ಓದಿ: ಸರ್ಕಾರಿ ಶಾಲೆ ಮಕ್ಕಳ ಊಟಕ್ಕೆ ಹುಳುಬಿದ್ದ ಅಕ್ಕಿ, ಬೇಳೆ ಬಳಕೆ
ಕಾರವಾರ: ಇಲಿ ಬಿದ್ದ ಸಾಂಬಾರನ್ನೇ ಬಡಿಸಿದ ಅಡುಗೆ ಸಹಾಯಕರು, ಶಾಲಾ ಬಿಸಿಯೂಟ ತಿಂದು ವಿದ್ಯಾರ್ಥಿಗಳು ಅಸ್ವಸ್ಥ
ಇನ್ನು, ಈ ರೀತಿ ಘಟನೆ ನಡೆದಿರೋದು ಇದೇ ಮೊದಲಲ್ಲ. ಡಿಸೆಂಬರ್ ತಿಂಗಳ ಕೊನೆಯ ವಾರದಲ್ಲಿ ಕರ್ನಾಟಕದ ಕಾರವಾರ ಬಳಿ ಸಚಿವ ಶಿವರಾಮ್ ಹೆಬ್ಬಾರ್ ಎಸ್‌ಡಿಎಂಸಿ ಅಧ್ಯಕ್ಷರಾಗಿರುವ ಶಾಲೆಯಲ್ಲಿ ಇಲಿ ಬಿದ್ದಿದ್ದ ಸಾಂಬಾರನ್ನೇ ಮಕ್ಕಳಿಗೆ ಬಡಿಸಿದ ಘಟನೆ ಬೆಳಕಿಗೆ ಬಂದಿತ್ತು. ಒಟ್ಟು 6 ಮಂದಿ ಅಡುಗೆ ಸಹಾಯಕರು ಈ ಕೃತ್ಯ ಎಸಗಿದ್ದು, ಶಾಲಾ ಮಕ್ಕಳ ಜೀವದೊಂದಿಗೆ ಚೆಲ್ಲಾಟವಾಡಿದ್ದಾರೆ. ಮುಂಡಗೋಡ ಪಟ್ಟಣದ ಸರಕಾರಿ ಶಾಸಕರ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಈ ಘಟನೆ ನಡೆದಿದೆ.
ಸುಮಾರು 500ಕ್ಕೂ ಹೆಚ್ಚು ವಿದ್ಯಾರ್ಥಿಗಳು ಈ ಶಾಲೆಯಲ್ಲಿದ್ದು, ಶಾಲೆಯ ಮುಖ್ಯೋಪಾಧ್ಯಾಯರು, ಎಸ್‌ಡಿಎಂಸಿ ಸದಸ್ಯರು, ಅಡುಗೆ ಸಹಾಯಕರನ್ನು ಮಕ್ಕಳ ಪೋಷಕರು ತರಾಟೆಗೆ ತೆಗೆದುಕೊಂಡಿದ್ದಾರೆ. ಬಿಇಒ, ಅಕ್ಷರ ದಾಸೋಹ ಸಹಾಯಕ ಅಧಿಕಾರಿ, ಮುಂಡಗೋಡ ಪಟ್ಟಣ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರಿದ್ದ ಸಭೆಯಲ್ಲಿ ಪೋಷಕರು ತರಾಟೆಗೆ ತೆಗೆದುಕೊಂಡಿದ್ದಾರೆ.
ಇದನ್ನೂ ಓದಿ: ವಿಜಯಪುರ: ಬಿಸಿಯೂಟದ ಅಕ್ಕಿ, ಸಾಮಗ್ರಿಗಳ ಕಳವು; 8 ಆರೋಪಿಗಳ ಬಂಧನ
ಸೋಮವಾರ ಮಧ್ಯಾಹ್ನದ ಬಿಸಿಯೂಟ ಊಟ ತಯಾರಿಕೆ ವೇಳೆ ಸಾಂಬಾರಿಗೆ ಇಲಿ ಬಿದ್ದಿತ್ತು. ಸಾಂಬಾರಿಗೆ ಬಿದ್ದ ಇಲಿಯನ್ನು ವಿದ್ಯಾರ್ಥಿಗಳಿಂದ ತೆಗೆಯಿಸಿ ಅದೇ ಸಾಂಬಾರನ್ನು ಮಕ್ಕಳಿಗೆ ಅಡುಗೆ ಸಹಾಯಕರು ಬಡಿಸಿದ್ದಾರೆ. ಮಾತ್ರವಲ್ಲ ಯಾರಲ್ಲೂ ಹೇಳಬಾರದು ಎಂದು ವಿದ್ಯಾರ್ಥಿಗಳಲ್ಲಿ ಅಡುಗೆ ಸಹಾಯಕರು ಸೂಚಿಸಿದ್ದರು.
ನಂತರ, ಇಲಿ ಬಿದ್ದಿದ್ದ ಸಾಂಬಾರು ಸೇವಿಸಿದ ಪರಿಣಾಮ ರಾತ್ರಿ ಇಬ್ಬರು ವಿದ್ಯಾರ್ಥಿಗಳು ಅಸ್ವಸ್ಥರಾಗಿದ್ದರು. ಈ ವೇಳೆ ಶಾಲೆಯಲ್ಲಿ ಇಲಿ ಬಿದ್ದಿದ್ದ ಸಾಂಬಾರನ್ನೇ ಬಡಿಸಲಾಗಿತ್ತು ಎಂದು ವಿದ್ಯಾರ್ಥಿಗಳು ಪೋಷಕರಲ್ಲಿ ದೂರಿದ್ದರು. ಆಕ್ರೋಶಗೊಂಡ ಪೋಷಕರು ಶಾಲಾ ಮುಖ್ಯೋಪಾಧ್ಯಾಯರು, ಎಸ್‌ಡಿಎಂಸಿ ಸದಸ್ಯರು ಹಾಗೂ ಅಡುಗೆ ಸಹಾಯಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು ಎಂದು ತಿಳಿದುಬಂದಿದೆ.
ಇದನ್ನೂ ಓದಿ: ಗಾಯಗೊಂಡಿದ್ದ ಬಿಸಿಯೂಟ ತಯಾರಕಿ ಸಾವು, ನಯಾಪೈಸೆ ಪರಿಹಾರವಿಲ್ಲ!