ಬೆಂಗಳೂರಿನಲ್ಲಿ ವಿಪತ್ರಗಳ ಮೈತ್ರಿ ಸಭೆ ಮುಗಿಸಿ ದೆಹಲಿಗೆ ಹೊರಟಿದ್ದ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂದಿ ವಿಮಾನ ತುರ್ತು ಭೂಸ್ಪರ್ಶ ಮಾಡಿದೆ.
ಭೋಪಾಲ್(ಜು.18) ಬೆಂಗಳೂರಿನಲ್ಲಿ ಆಯೋಜಿಸಿದ ವಿಪಕ್ಷಗಳ ಮಹಾ ಮೈತ್ರಿ ಸಭೆ ಮುಗಿಸಿ ದೆಹಲಿಯತ್ತ ಪ್ರಯಾಣ ಬೆಳೆಸಿದ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ವಿಮಾನ ತುರ್ತು ಭೂಸ್ಪರ್ಶ ಮಾಡಿದೆ. ಹವಾಮಾನ ವೈಪರಿತ್ಯದಿಂದ ವಿಮಾನವನ್ನು ಮಧ್ಯಪ್ರದೇಶದ ಭೂಪಾಲ್‌ನಲ್ಲಿ ಎಮರ್ಜೆನ್ಸಿ ಲ್ಯಾಂಡಿಂಗ್ ಮಾಡಲಾಗಿದೆ. 9.30ರ ಬಳಿಕ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ವಿಮಾನದ ಮೂಲಕ ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ ಅನ್ನೋ ಮಾಹಿತಿ ಲಭ್ಯವಾಗಿದೆ.
ಎರಡು ದಿನಗಳ ವಿಪಕ್ಷಗಳ ಮಹಾ ಮೈತ್ರಿ ಸಭೆ ಬೆಂಗಳೂರಿನಲ್ಲಿ ಆಯೋಜಿಸಲಾಗಿತ್ತು. 26 ಪಕ್ಷಗಳ ಪ್ರಮುಖ ನಾಯಕರು ಬೆಂಗಳೂರಿಗೆ ಆಗಮಿಸಿ ಸಭೆಯಲ್ಲಿ ಪಾಲ್ಗೊಂಡಿದ್ದರು. ಕಾಂಗ್ರೆಸ್‌ನಿಂದ ಸೋನಿಯಾ ಗಾಂಧಿ, ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ, ವೇಣುಗೋಪಾಲ್ ಸೇರಿದಂತೆ ಕೆಲ ಕೇಂದ್ರ ನಾಯಕರು ಪಾಲ್ಗೊಂಡಿದ್ದರು. ಈ ಸಭೆ ಮುಗಿಸಿದ ಬಳಿಕ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ವಿಶೇಷ ವಿಮಾನ ಮೂಲದ ದೆಹಲಿಗೆ ಪ್ರಯಾಣ ಬೆಳೆಸಿದ್ದಾರೆ. ಬೆಂಗಳೂರಿನಿಂದ ಹೊರಟ ವಿಮಾನ ಮಧ್ಯಪ್ರದೇಶದ ಭೋಪಾಲ್ ತಲುಪುತ್ತಿದ್ದಂತೆ ಹವಾಮಾನ ಸಮಸ್ಯೆ ಎದುರಿಸಿದೆ. ಹವಾಮಾನ ವೈಪರಿತ್ಯದಿಂದ ಪೈಲೆಟ್ ವಿಮಾನವನ್ನು ಭೋಪಾಲ್‌ನಲ್ಲಿ ತುರ್ತು ಭೂಸ್ಪರ್ಶ ಮಾಡಿದ್ದಾರೆ.
